ETV Bharat / state

ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ನಾಳೆ ಪ್ರಕಟ: ರಿಸಲ್ಟ್​ಗಾಗಿ ಈ ಲಿಂಕ್ ಕ್ಲಿಕ್ ಮಾಡಿ - Second PUC Exam result

ದ್ವಿತೀಯ ಪಿಯುಸಿ ಪರೀಕ್ಷೆ -2 ರ ಫಲಿತಾಂಶ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ (ETV Bharat)
author img

By ETV Bharat Karnataka Team

Published : May 20, 2024, 11:04 PM IST

ಬೆಂಗಳೂರು: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -2 ರ ಫಲಿತಾಂಶವನ್ನು ನಾಳೆ (ಮಂಗಳವಾರ) ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ. ಮಧ್ಯಾಹ್ನ 3 ಗಂಟೆ ನಂತರ ಇಲಾಖೆಯ ವೆಬ್ ಸೈಟ್​ನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಮಾಹಿತಿ ನೀಡಿದೆ.

2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಗಿತ್ತು. ಇದರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ತಿಳಿಸಿದೆ. ಪರೀಕ್ಷೆ-1 ರ ಫಲಿತಾಂಶವನ್ನು ಸುದ್ದಿಗೋಷ್ಠಿ ನಡೆಸಿ ಬಿಡುಗಡೆ ಮಾಡಿದಂತೆ ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶವನ್ನು ಸುದ್ದಿಗೋಷ್ಠಿ ನಡೆಸದೇ ನೇರವಾಗಿ ವೆಬ್ ಸೈಟ್​​ನಲ್ಲಿಯೇ ಪ್ರಕಟಿಸಲಿದೆ.

ಪರೀಕ್ಷೆ-1 ರಲ್ಲಿ ಇನ್ ಕಂಪ್ಲೀಟ್ ಆದವರು, ಪರೀಕ್ಷೆಗೆ ಗೈರಾಗಿದ್ದವರು, ಹೆಚ್ಚುವರಿ ಅಂಕ ಗಳಿಸಲು ಇಚ್ಛಿಸಿದವರು ಎರಡನೇ ಪರೀಕ್ಷೆ ತೆಗೆದುಕೊಂಡಿದ್ದು, ನಾಳಿನ ಫಲಿತಾಂಶದಲ್ಲಿ ಈ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಇನ್ ಕಂಪ್ಲೀಟ್ ಆದವರಿಗೆ ಪಾಸಾಗುವ ಅವಕಾಶ, ಕಡಿಮೆ ಅಂಕ ಪಡೆದವರಿಗೆ ಅಂಕಗಳನ್ನು ಹೆಚ್ಚಿಸಿಕೊಳ್ಳುವ ಅವಕಾಶ ಇದ್ದು, ಇಲ್ಲಿಯೂ ಎಲ್ಲ ವಿಷಯ ಕಂಪ್ಲೀಟ್ ಆಗದಿದ್ದಲ್ಲಿ ಅಂಕಗಳು ಹೆಚ್ಚು ಬಾರದೇ ಇದ್ದಲ್ಲಿ ಅವರು ಪರೀಕ್ಷೆ-3 ತೆಗೆದುಕೊಳ್ಳಬಹುದಾಗಿದೆ. ಪರೀಕ್ಷೆ 3ರ ದಿನಾಂಕ ನಾಳೆ ಪ್ರಕಟವಾಗಲಿದೆ.

ಇದನ್ನೂ ಓದಿ: ತಿರುಮಲದಲ್ಲಿ ಮತ್ತೆ ಕಾಣಿಸಿಕೊಂಡ ಎರಡು ಚಿರತೆಗಳು: ಭಯಭೀತರಾದ ಭಕ್ತರು, ಆತಂಕ - Two Leopards Spotted

ETV Bharat Logo

Copyright © 2024 Ushodaya Enterprises Pvt. Ltd., All Rights Reserved.