ETV Bharat / state

ಜೂನ್ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಆರಂಭ: ಇಲ್ಲಿದೆ ವೇಳಾಪಟ್ಟಿ - Second PUC Exam 3

ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ.

SCHOOL EXAMINATION AND ASSESSMENT BOARD
ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ETV Bharat)
author img

By ETV Bharat Karnataka Team

Published : Jun 23, 2024, 1:46 PM IST

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಪೂರ್ಣಗೊಳಿಸಿದೆ. ನಿಗದಿತ ವೇಳಾಪಟ್ಟಿಯಂತೆ ಜೂನ್ 24ರಿಂದ ಜುಲೈ 5ರವರೆಗೆ ಪರೀಕ್ಷೆ ನಡೆಯಲಿದೆ‌.

ಎಸ್ಎಸ್ಎಲ್​​ಸಿ ಮತ್ತು ದ್ವಿತೀಯ ಪಿಯುಸಿಗೆ ಮೂರು ವಾರ್ಷಿಕ ಪರೀಕ್ಷಾ ಪದ್ಧತಿ ಜಾರಿಯಾದ ನಂತರ ನಡೆಯುತ್ತಿರುವ ದ್ವಿತೀಯ ಪಿಯುಸಿ ಮೊದಲ ವರ್ಷದ ಮೂರನೇ ಪರೀಕ್ಷೆಗೆ ರಾಜ್ಯದಲ್ಲಿ ಒಟ್ಟು 248 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ. ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆಯಲಿದೆ. ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ವಿಚಕ್ಷಣ ದಳಗಳನ್ನು ನಿಯೋಜಿಸಲಾಗುತ್ತಿದೆ.

ಕಲಾ ವಿಭಾಗದಲ್ಲಿ 19,113 ಬಾಲಕರು, 11,698 ಬಾಲಕಿಯರು ಸೇರಿ 30,811 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 8,817 ಬಾಲಕರು, 10,966 ಬಾಲಕಿಯರು ಸೇರಿ ಒಟ್ಟು 19,783 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 16,428 ಬಾಲಕರು, 8,973 ಬಾಲಕಿಯರು ಸೇರಿ ಒಟ್ಟು 25,401 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಒಟ್ಟಾರೆ, 44,358 ಬಾಲಕರು, 31,637 ಬಾಲಕಿಯರು ಸೇರಿ ಒಟ್ಟು 75,995 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ -3 ಬರೆಯಲಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ 3ರ ವೇಳಾಪಟ್ಟಿ:

24-06-2024 : ಪ್ರಥಮ ಭಾಷೆ ಕನ್ನಡ

25-06-2024 : ದ್ವಿತೀಯ ಭಾಷೆ ಇಂಗ್ಲಿಷ್

26-06-2024 : ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಭೂಗರ್ಭಶಾಸ್ತ್ರ, ಜೀವಶಾಸ್ತ್ರ

27-06-2024 : ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ

28-06-2024 : ಅರ್ಥಶಾಸ್ತ್ರ, ರಸಾಯನಶಾಸ್ತ್ರ

29-06-2024 : ಇತಿಹಾಸ/ಭೌತಶಾಸ್ತ್ರ

01-07-2024 : ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಗೃಹ ವಿಜ್ಞಾನ

02-07-2024 : ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

03-07-2024 : ಮೂಲಗಣಿತ, ಮನಃಶಾಸ್ತ್ರ, ಭೂಗೋಳಶಾಸ್ತ್ರ

04-07-2024 : ಹಿಂದಿ

05-07-2024 : ಮಾಹಿತಿ ತಂತ್ರಜ್ಞಾನ, ಹೆಲ್ತ್ ಕೇರ್

ಇದನ್ನೂ ಓದಿ: ನೀಟ್‌-ನೆಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಎನ್‌ಟಿಎ ಮಹಾನಿರ್ದೇಶಕ ಹುದ್ದೆಯಿಂದ ಸುಬೋಧ್ ಸಿಂಗ್ ಔಟ್‌ - NEET NET Paper Leak Row

ETV Bharat Logo

Copyright © 2024 Ushodaya Enterprises Pvt. Ltd., All Rights Reserved.