ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ಇಂದು ಕನ್ನಡ ವಿಷಯದ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ಶೇ.96.53ರಷ್ಟು ಹಾಜರಾತಿ ದಾಖಲಾಗಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ, ಪರೀಕ್ಷೆಗೆ ಇಲಾಖೆ ನಡೆಸಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ನಂತರ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಕನ್ನಡ ಪರೀಕ್ಷೆಗೆ 5,25,787 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 5,07,556 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 18,231 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1 ಪರೀಕ್ಷಾ ಅಕ್ರಮ ಪ್ರಕರಣ ವರದಿಯಾಗಿದೆ. ಇನ್ನುಳಿದಂತೆ ಎಲ್ಲಿಯೂ ಅಕ್ರಮ ನಡೆದ ಬಗ್ಗೆ ವರದಿಯಾಗಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ಇದನ್ನೂ ಓದಿ: ರಾಯಚೂರು: ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸ್ವಾಗತ