ETV Bharat / state

ಮಾನಸಿಕ ಕ್ರೌರ್ಯದ ಆಧಾರದಲ್ಲಿ 2ನೇ ಬಾರಿ ಪತಿಯೂ ಪತ್ನಿ ವಿರುದ್ಧ ವಿಚ್ಛೇದನ ಅರ್ಜಿ ಸಲ್ಲಿಸಬಹುದು: ಹೈಕೋರ್ಟ್ - High court - HIGH COURT

ಕ್ರೌರ್ಯದ ಆಧಾರದಲ್ಲಿ ಪತಿ ಮೊದಲ ಬಾರಿ ಸಲ್ಲಿಸಿದ್ದ ವಿವಾಹ ವಿಚ್ಛೇದನ ಅರ್ಜಿ ತಿರಸ್ಕೃತಗೊಂಡಿದ್ದರೆ ಎರಡನೇ ಸಲ ಅರ್ಜಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿರಲಿದೆ ಎಂದು ಹೈಕೋರ್ಟ್​ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)
author img

By ETV Bharat Karnataka Team

Published : May 20, 2024, 10:51 PM IST

Updated : May 20, 2024, 11:00 PM IST

ಬೆಂಗಳೂರು: ಕ್ರೌರ್ಯದ ಆಧಾರದಲ್ಲಿ ಪತಿ ಮೊದಲ ಬಾರಿ ಸಲ್ಲಿಸಿದ್ದ ವಿವಾಹ ವಿಚ್ಛೇದನ ಅರ್ಜಿ ತಿರಸ್ಕೃತಗೊಂಡಿದ್ದರೆ ಆಂತಹ ಸಂದರ್ಭದಲ್ಲಿ ಎರಡನೇ ಸಲ ಅರ್ಜಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿರಲಿದೆ ಎಂದು ಹೈಕೋರ್ಟ್ ಆದೇಶಿಸಿದೆ.

ಜತೆಗೆ ಪತಿಯೊಬ್ಬ ತನ್ನ ಮೊದಲನೇ ವಿವಾಹ ವಿಚ್ಛೇದನ ಅರ್ಜಿ ತಿರಸ್ಕೃತಗೊಂಡ ನಂತರ ಸಲ್ಲಿಸಿದ್ದ ಎರಡನೇ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಲಯ ವಿಚ್ಚೇದನ ಅರ್ಜಿ ತಿರಸ್ಕರಿಸಿದ್ದ ಮೈಸೂರಿನ ನ್ಯಾಯಾಲಯದ ಆದೇಶ ರದ್ದುಗೊಳಿಸಿ ವಿಚ್ಛೇದನ ಮಂಜೂರು ಮಾಡಿದೆ. ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಅಲಿಸಿದ ನ್ಯಾಯಮೂರ್ತಿ ಅನು ಸಿವರಾಮನ್ ಮತ್ತು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.

ಅಲ್ಲದೇ ಒಂದು ವೇಳೆ ಪತಿ ತನ್ನ ಮಗನಿಗಾಗಿ ಕಾನೂನು ಬದ್ಧ ನಿರ್ವಹಿಸಬೇಕಾಗಿರುವ ಕರ್ತವ್ಯಗಳನ್ನು ಪಾಲನೆ ಮಾಡದಿದ್ದರೂ ಸಹ ಆತ ತನ್ನ ವಿರುದ್ಧ ಪತ್ನಿಯ ಮಾನಸಿಕ ಕೌರ್ಯವನ್ನು ಸಾಬೀತುಪಡಿಸಿದರೆ ಸಾಕು, ಅತನಿಗೆ ವಿವಾಹ ವಿಚ್ಛೇದನ ಮಂಜೂರು ಮಾಡಬೇಕಾಗುತ್ತದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪತಿ ಹಾಗೂ ಪತ್ನಿ ಪರಸ್ಪರ ಮಗುವಿನ ಸುಪರ್ದಿ ಮತ್ತು ನಿರ್ವಹಣೆ ವಿಚಾರದಲ್ಲಿ ಒಪ್ಪಿದ್ದಾರೆ. ದಾಖಲೆಗಳನ್ನು ಪರಿಶೀಲಿಸಿದರೆ ಪತ್ನಿ ಪತಿಯ ಅನೈತಿಕ ಸಂಬಂಧವನ್ನು ಸಾಬೀತುಪಡಿಸಿಲ್ಲ. ಜತೆಗೆ ಅರ್ಜಿದಾರರು ಹೇಳಿರುವಂತೆ ಪತ್ನಿ, ಪತಿಯ ಕಚೇರಿಗೆ ಹೋಗಿ ಅವರ ಸಹೋದ್ಯೋಗಿಗಳ ಮುಂದೆ ಸಾಕಷ್ಟು ಹೀಯಾಳಿಸಿ ಮಾತನಾಡಿದ್ದಾರೆ. ಇದನ್ನು ಪಾಟೀ ಸವಾಲಿನಲ್ಲಿ ಪತ್ನಿ ನಿರಾಕರಿಸಿಲ್ಲ. ಇದನ್ನು ಪರಿಗಣಸಿದರೆ ಪತಿ ಪತ್ನಿಯಿಂದ ಮೌನಸಿಕ ಕ್ರೌರ್ಯ ಅನುಭವಿಸುತ್ತಿದ್ದೇನೆ ಎನ್ನುವ ವಾದದಲ್ಲಿ ಹುರುಳಿದೆ. ಹಾಗಾಗಿ ಪತಿಗೆ ವಿಚ್ಛೇದನ ಮಂಜೂರು ಮಾಡಲಾಗುವುದು ಪೀಠ ಹೇಳಿದೆ.

ಪ್ರಕರಣದ ಹಿನ್ನೆಲೆ: ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆ ವ್ಯಕ್ತಿ ಮತ್ತು ಮಹಿಳೆ 2007ರ ಜ.28ರಂದು ಮದುವೆಯಾಗಿದ್ದರು. ಅವರಿಗೆ 2010ರಲ್ಲಿ ಒಂದು ಗಂಡು ಮಗು ಜನಿಸಿತ್ತು. ಆನಂತರ ಮಹಿಳೆಯು ಪತಿ ತನ್ನ ತಂದೆಯಿಂದ ಮೂರು ಲಕ್ಷ ರೂ. ವರದಕ್ಷಿಣೆ ತೆಗೆದುಕೊಂಡಿದ್ದಾರೆ ಎಂದು ದೂರು ನೀಡಿದ್ದರು.

ಆದರೆ ಆ ಪ್ರಕರಣದಲ್ಲಿ ಪೊಲೀಸರು ತನಿಖೆ ನಂತರ ಬಿ ರಿಪೋರ್ಟ್ ಸಲ್ಲಿಸಿದ್ದರು. ಆನಂತರ ಪತಿ 2018ರಲ್ಲಿ ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಬಳಿಕ ಸ್ನೇಹಿತರು ಹಾಗೂ ಕುಟುಂಬದವರ ಸಲಹೆ ಮೇರೆಗೆ ಅರ್ಜಿ ವಾಪಸ್ ಪಡೆದಿದ್ದರು.

ಆನಂತರ ಮಾನಸಿಕ ಕ್ರೌರ್ಯದ ಆಧಾರದ ಮೇಲೆ 2019ರಲ್ಲಿ ಹೊಸದಾಗಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಅದನ್ನು ಮೈಸೂರಿನ ಕೌಟುಂಬಿಕ ನ್ಯಾಯಾಲಯ, ಪತಿಯು ಮೌನಸಿಕ ಕೌರ್ಯ ನೀಡುತ್ತಿದ್ದಾರೆಂದು ಸಾಬೀತುಪಡಿಸಲು ವಿಫಲರಾಗಿದ್ದಾರೆಂದು ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಪತಿ ಹೈಕೋರ್ಟ್ ಮೊರೆ ಹೋಗಿದ್ದರು.

ಇದನ್ನೂಓದಿ:ಕಾನೂನು ಬಾಹಿರ ಮಕ್ಕಳ ಹಸ್ತಾಂತರಕ್ಕೆ ಹೈಕೋರ್ಟ್ ಗರಂ: ಇಬ್ಬರು ಮಕ್ಕಳನ್ನು ತಾಯಿ ಮಡಿಲು ಸೇರಿಸಿದ ನ್ಯಾಯಪೀಠ - High Court news

Last Updated : May 20, 2024, 11:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.