ಬಳ್ಳಾರಿ: ದೇವರ ವಿಗ್ರಹ ಪ್ರತಿಷ್ಠಾಪನೆ ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ಉಂಟಾಗಿ ಕಲ್ಲು ತೂರಾಡಿರುವ ಘಟನೆ ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದಲ್ಲಿ ನಡೆದಿದೆ.
ಪವಾಡ ಪುರುಷ ಎರ್ರಿತಾತ ಸ್ವಾಮಿಯ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಗಲಾಟೆ ನಡೆದಿದೆ. ಈ ವಿಚಾರ ತಿಳಿದು ಘಟನಾ ಸ್ಥಳಕ್ಕೆ ಪಿಎಸ್ಐ ಸಂತೋಷ್ ಡಬ್ಬಿನ್, ಸಿಪಿಐ ಸತೀಶ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಆಗಮಿಸಿದರು. ಇದನ್ನು ಕಂಡ ಕಿಡಿಗೇಡಿಗಳು ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಪಿಎಸ್ಐ ಸಂತೋಷ್, ಸಿಪಿಐ ಸತೀಶ್ ಸೇರಿ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು 144 ಸೆಕ್ಷನ್ ಜಾರಿ ಮಾಡಲಾಗಿದೆ.
ಗಾಯಾಳು ಪೊಲೀಸ್ ಸಿಬ್ಬಂದಿಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎರಡು ಗುಂಪುಗಳ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಡಿಎಆರ್, ಕೆಎಸ್ಆರ್ಪಿ ಮತ್ತು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ: ನಕಲಿ ಜಾತಿ ಪ್ರಮಾಣಪತ್ರ ಆರೋಪ ತಳ್ಳಿ ಹಾಕಿದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ - Raja Amareshwara Naik