ETV Bharat / state

ಮೈಸೂರಿಗೆ ಅಮಿತ್ ಶಾ ಭೇಟಿ: ಸುತ್ತೂರು, ಚಾಮುಂಡಿ ಬೆಟ್ಟದಲ್ಲಿ ಬಿಗಿ ಭದ್ರತೆ - ಸುತ್ತೂರು ಜಾತ್ರೆ

ಮೈಸೂರು ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

mysuru-security-arrangements-for-home-minister-amit-shahs-visit
ಮೈಸೂರಿಗೆ ಅಮಿತ್ ಶಾ ಭೇಟಿ: ಸುತ್ತೂರು, ಚಾಮುಂಡಿ ಬೆಟ್ಟದಲ್ಲಿ ಬಿಗಿ ಭದ್ರತೆ
author img

By ETV Bharat Karnataka Team

Published : Feb 10, 2024, 9:13 PM IST

ಮೈಸೂರು: ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಹಿನ್ನಲೆಯಲ್ಲಿ ಮೈಸೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಮಿತ್ ಶಾ ವಾಸ್ತವ್ಯ ಹೂಡುವ ಹೋಟೆಲ್, ಸಂಚರಿಸುವ ಮಾರ್ಗ ಸೇರಿದಂತೆ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಭದ್ರತೆ ಕಲ್ಪಿಸಲಾಗಿದೆ.

ಶನಿವಾರ ರಾತ್ರಿಯೇ ಗೃಹ ಸಚಿವರು ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು, ಎಂ.ಜಿ.ರಸ್ತೆಯಲ್ಲಿನ ರ್ಯಾಡಿಶನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಭಾನುವಾರ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳುವ ಹಿನ್ನಲೆಯಲ್ಲಿ ಬೆಟ್ಟಕ್ಕೆ ಬೆಳಗ್ಗೆ 10 ಗಂಟೆಯಿಂದ 11.30 ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಕೇಂದ್ರ ಸಚಿವರ ನಿರ್ಗಮನದ ಬಳಿಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಮಾಹಿತಿ ನೀಡಿದ್ದಾರೆ.

ಬಿಗಿ ಭದ್ರತೆ: ಸುತ್ತೂರು ಜಾತ್ರಾ ಮಹೋತ್ಸವದ ಬಳಿಕ ಮತ್ತೆ ಮೈಸೂರು ನಗರಕ್ಕೆ ಆಗಮಿಸಲಿರುವ ಗೃಹ ಸಚಿವರು, ಬಿಜೆಪಿಯ ಪ್ರಮುಖ ನಾಯಕರ ಸಭೆ ನಡೆಸಲಿದ್ದಾರೆ. ಹೀಗಾಗಿ ಹೋಟೆಲ್ ಆವರಣ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಶ್ವಾನ ದಳದೊಂದಿಗೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈಗಾಗಲೇ ಎಸ್‌ಪಿಜಿ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ನಗರದಲ್ಲಿ ಮೊಕ್ಕಾಂ ಹೂಡಿದ್ದಾರೆ. ಭದ್ರತಾ ಲೋಪವಾಗದಂತೆ ಎಚ್ಚರಿಕೆ ವಹಿಸಿದ್ದಾರೆ.

ಇದನ್ನೂ ಓದಿ: ವರಿಷ್ಠರು ಸೂಚಿಸಿದರೆ ಯಾವ ಕ್ಷೇತ್ರದಿಂದ ಬೇಕಾದರೂ ಲೋಕಸಭೆಗೆ ಸ್ಪರ್ಧಿಸಲು ಸಿದ್ಧ: ಜಗದೀಶ್​ ಶೆಟ್ಟರ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.