ಬೆಂಗಳೂರು: ಗಣೇಶೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಂಡಿದ್ದಾರೆ. ಗಣೇಶೋತ್ಸವ ಆಚರಿಸಲ್ಪಡುವ ಏರಿಯಾಗಳನ್ನ ಸೂಕ್ಷ್ಮ, ಅತಿ ಸೂಕ್ಷ್ಮ ಹಾಗೂ ಸಾಮಾನ್ಯ ಎಂದು ವಿಂಗಡಿಸಲಾಗಿದೆ.
ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಏರಿಯಾಗಳಾದ ಚಾಮರಾಜಪೇಟೆ, ಜೆ.ಜೆ.ನಗರ, ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ, ಎಸ್.ಜಿ ಪಾಳ್ಯ, ವಿವೇಕನಗರ, ತಿಲಕನಗರ, ಬನಶಂಕರಿ, ಆರ್.ಟಿ.ನಗರ, ಜೆ.ಸಿ.ನಗರದಲ್ಲಿ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ. ಗಣೇಶ ಪ್ರತಿಷ್ಠಾಪನೆ, ನಿಮಜ್ಜನ ವೇಳೆ ಸಿಸಿಟಿವಿ ಕ್ಯಾಮರಾ, ಡ್ರೋನ್ ಕ್ಯಾಮರಾಗಳ ಮೂಲಕ ಪೊಲೀಸರು ನಿಗಾ ವಹಿಸಲಿದ್ದಾರೆ. ಈಗಾಗಲೇ ಆಯಾ ಏರಿಯಾಗಳ ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಿರುವ ಪೊಲೀಸರು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದಾರೆ.
ಎಲ್ಲರಿಗೂ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಆ ಗಣಪನು ಸರ್ವ ವಿಘ್ನಗಳನ್ನು ಹರಣ ಮಾಡಿ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 7, 2024
ಪ್ರತಿಯೊಬ್ಬರಿಗೂ ಸುಖ ಸಂತೋಷ, ಸಮೃದ್ಧಿ, ಆಯುರಾರೋಗ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ.#GowriGaneshaFestival pic.twitter.com/zic2dQH0Af
ಗಣೇಶ ಹಬ್ಬದ ಶುಭಾಶಯ ಕೋರಿದ ಮಾಜಿ ಪಿಎಂ, ಕೇಂದ್ರ ಸಚಿವ ಹೆಚ್ಡಿಕೆ: ನಾಡಿನ ಸಮಸ್ತ ಜನತೆಗೆ ಗಣೇಶ ಹಬ್ಬದ ಹಾರ್ದಿಕ ಶುಭಾಶಯವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಕೋರಿದ್ದಾರೆ.
ವಿಘ್ನೇಶ್ವರನ ಅನುಗ್ರಹದಿಂದ ಸಮಸ್ತರಿಗೂ ಒಳ್ಳೆಯದಾಗಲಿ ಹಾಗೂ ಎಲ್ಲೆಡೆ ಸುಖ ಶಾಂತಿ, ನೆಮ್ಮದಿ, ಸಮೃದ್ಧಿ ನೆಲೆಸಲಿ ಎಂದು ದೇವೇಗೌಡರು ಪ್ರಾರ್ಥಿಸಿದ್ದಾರೆ. ಮಣ್ಣಿನ ಮೂರ್ತಿಗಳನ್ನು ಪೂಜಿಸುವ ಮೂಲಕ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ ಎಂದು ತಿಳಿಸಿದ್ದಾರೆ.
ನಾಡಿನ ಸಮಸ್ತ ಜನತೆಗೆ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
— H D Devegowda (@H_D_Devegowda) September 7, 2024
ವಿಘ್ನೇಶ್ವರನ ಅನುಗ್ರಹದಿಂದ ಸಮಸ್ತರಿಗೂ ಒಳ್ಳೆಯದಾಗಲಿ ಹಾಗೂ ಎಲ್ಲೆಡೆ ಸುಖ ಶಾಂತಿ, ನೆಮ್ಮದಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ.
ಮಣ್ಣಿನ ಮೂರ್ತಿಗಳನ್ನು ಪೂಜಿಸುವ ಮೂಲಕ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ. pic.twitter.com/GbDuMoimXQ
ಎಕ್ಸ್ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಎಲ್ಲರಿಗೂ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಗಣೇಶ ಸರ್ವ ವಿಘ್ನಗಳನ್ನು ಹರಣ ಮಾಡಿ, ಪ್ರತಿಯೊಬ್ಬರಿಗೂ ಸುಖ ಸಂತೋಷ, ಸಮೃದ್ಧಿ, ಆಯುರಾರೋಗ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.