ದಾವಣಗೆರೆ: ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ದಾವಣಗೆರೆ ದಕ್ಷಿಣ ಮತ ಕ್ಷೇತ್ರದ ಹಿರಿಯ ಕಾಂಗ್ರೆಸ್ ಶಾಸಕ, ಡಾ.ಶಾಮನೂರು ಶಿವಶಂಕರಪ್ಪ ವಿಡಿಯೋ ಮೂಲಕ ಸಂದೇಶ ರವಾನಿಸಿದ್ದಾರೆ.
ಆರೋಗ್ಯ ತಪಾಸಣೆಗೆ ಎಂದು ಬೆಂಗಳೂರಿಗೆ ತೆರಳಿದ್ದ ಶಾಮನೂರು ಶಿವಶಂಕರಪ್ಪ ಅವರು ಮತದಾರರು, ಅಭಿಮಾನಿಗಳಿಗೆ ವಿಡಿಯೋ ಮೂಲಕ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ನಾಡಿನ ಜನತೆಗೆ 2025ನೇ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.
ವಿಡಿಯೊದಲ್ಲಿ ಮಾತನಾಡಿರುವ ಅವರು, ಮತದಾರರ ಆಶೀರ್ವಾದದಿಂದ ನಾನು ಆರೋಗ್ಯವಾಗಿದ್ದೇವೆ. ದಾವಣಗೆರೆಗೆ ಆಗಮಿಸಲಿದ್ದೇನೆ. ಮತದಾರರು, ಅಭಿಮಾನಿಗಳು ಭಯಪಡುವ ಅಗತ್ಯ ಇಲ್ಲ. ಶೀಘ್ರದಲ್ಲೆ ನಿಮ್ಮೊಂದಿಗೆ ಹೊಸ ವರ್ಷವನ್ನು ಆಚರಿಸುವೆ ಎಂಬ ಸಂದೇಶ ರವಾನಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಶ್ವಾಸಕೋಶದಲ್ಲಿ ಚಿಕ್ಕ-ಪುಟ್ಟ ಆರೋಗ್ಯ ಸಮಸ್ಯೆ ಆದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಂಡು ಮನೆಗೆ ಮರಳಿದ್ದಾರೆ ಎಂದು ಶಾಸಕರ ಕಚೇರಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಶಾಮನೂರು ಶಿವಶಂಕರಪ್ಪಗೆ ಆರೋಗ್ಯದಲ್ಲಿ ಏರುಪೇರು; ಚಿಕಿತ್ಸೆ ಪಡೆದು ಮನೆಗೆ ವಾಪಸ್ - Shamanur Health Checkup