ETV Bharat / state

ಹಿರಿಯ ಐಪಿಎಸ್ ಅಧಿಕಾರಿ‌ ಪ್ರತಾಪ್ ರೆಡ್ಡಿ ರಾಜೀನಾಮೆ ಅಂಗೀಕಾರ

ಸೇವಾ ನಿವೃತ್ತಿಗೆ ಕೆಲ ತಿಂಗಳು ಇರುವಾಗಲೇ ಹಿರಿಯ ಪೊಲೀಸ್​ ಅಧಿಕಾರಿ ಸಿ ಹೆಚ್ ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿ ಕೋರಿ ಪತ್ರ ಬರೆದಿದ್ದು, ರಾಜ್ಯ ಸರ್ಕಾರ ಅವರ ರಾಜೀನಾಮೆಯನ್ನು ಅಂಗೀಕಾರ ಮಾಡಿದೆ.

ಸಿ ಹೆಚ್ ಪ್ರತಾಪ್ ರೆಡ್ಡಿ
ಸಿ ಹೆಚ್ ಪ್ರತಾಪ್ ರೆಡ್ಡಿ
author img

By ETV Bharat Karnataka Team

Published : Feb 20, 2024, 10:27 PM IST

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಸಿ ಹೆಚ್ ಪ್ರತಾಪ್ ರೆಡ್ಡಿ ತಮ್ಮ ಹುದ್ದೆಗೆ ರಾಜೀನಾಮೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತಾ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರತಾಪ್​ ರೆಡ್ಡಿಯವರ ನಿವೃತ್ತಿಗೆ ಇನ್ನೂ ಎರಡು ತಿಂಗಳು ಬಾಕಿ ಇತ್ತು. ಆದರೆ, ವೈಯಕ್ತಿಕ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದ ಅವರು, ಏಪ್ರಿಲ್ 30ಕ್ಕೆ ತಮ್ಮನ್ನು ಸೇವೆಯಿಂದ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಆಂಧ್ರಪ್ರದೇಶದ ಗುಂಟೂರು ಮೂಲದವರಾದ ಪ್ರತಾಪ್ ರೆಡ್ಡಿಯವರು 1991ನೇ ಬ್ಯಾಚಿನ ಐಪಿಎಸ್ ಅಧಿಕಾರಿ. ಹಾಸನದಲ್ಲಿ ಎಎಸ್ಪಿಯಾಗಿ ಕರ್ನಾಟಕ ಕ್ಯಾಡರ್​​ನಲ್ಲಿ ಸೇವೆ ಆರಂಭಿಸಿದ ಅವರು 1994ರಲ್ಲಿ ಮುಖ್ಯಮಂತ್ರಿಗಳ ಪದಕ್ಕೆ ಭಾಜನರಾಗಿದ್ದರು. ಡೈರೆಕ್ಟರ್ ಆಫ್ ನ್ಯಾಷನಲ್ ಸೈಬರ್ ಸೆಕ್ಯುರಿಟಿ ಇನಿಶಿಯೇಟಿವ್, ಕಲಬುರಗಿ, ವಿಜಯಪುರ, ಮುಂಬೈ, ಬೆಂಗಳೂರು ಸಿಬಿಐ ಘಟಕ, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಸಿ.ಹೆಚ್.ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.