ETV Bharat / state

ಬೋಳಿಯಾರು ಚೂರಿ ಇರಿತ ಪ್ರಕರಣ: ಮತ್ತೆ ಏಳು ಮಂದಿಯ ಬಂಧನ - Stabbing Case - STABBING CASE

ಬೋಳಿಯಾರುವಿನ ಚೂರಿ ಇರಿತ ಪ್ರಕರಣ ಸಂಬಂಧ ಮತ್ತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

boliyaru stabbing case
ಸಂಗ್ರಹ ಚಿತ್ರ (ETV Bharat)
author img

By ETV Bharat Karnataka Team

Published : Jun 13, 2024, 9:50 AM IST

ಮಂಗಳೂರು: ನಗರದ ಬೋಳಿಯಾರುವಿನಲ್ಲಿ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಏಳು ಮಂದಿಯನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಇಮ್ರಾನ್, ಕೋಲಿ ಇರ್ಷಾದ್, ತಾಜುದ್ದೀನ್ ಸಿದ್ದೀಕ್, ಸರ್ವನ್, ಮುಬಾರಕ್, ಅಶ್ರರಫ್, ತಲ್ಲತ್ ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಪೊಲೀಸರು ಶಾಕೀರ್, ಅಬ್ದುಲ್ ರಝಾಕ್, ಅಬೂಬಕ್ಕರ್ ಸಿದ್ದಿಕ್, ಅಬೂಬಕ್ಕರ್, ಸವಾದ್, ಮೋನು ಎಂಬ ಆರು ಮಂದಿಯನ್ನು ಬಂಧಿಸಿದ್ದಾರೆ. ಈ ಮೂಲಕ ಈವರೆಗೆ ಒಟ್ಟು 13 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳಿದ್ದು, ಅವರ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನರೇಂದ್ರ ಮೋದಿಯವರು ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಮಾಡಿರುವ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ವಿಜಯೋತ್ಸವದ ಮೆರವಣಿಗೆ ನಡೆಸಲಾಗಿತ್ತು. ಈ ವೇಳೆ ಬೈಕ್​ನಲ್ಲಿ ಬಂದ ಮೂವರು ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದಾರೆ ಎನ್ನಲಾಗಿದೆ. ಆಗ ಕೆಲ ಯುವಕರು ಅವರನ್ನು ಅಟ್ಟಾಡಿಸಿಕೊಂಡು ಹೋಗಿ, ಅಲ್ಲಿಯೇ ಅನತಿ ದೂರದಲ್ಲಿ ಇಬ್ಬರಿಗೆ ಚೂರಿಯಿಂದ ಇರಿದಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮೋದಿ ಪದಗ್ರಹಣ: ವಿಜಯೋತ್ಸವದ ಬಳಿಕ ಇಬ್ಬರಿಗೆ ಚೂರಿ ಇರಿತ, ಐವರ ಬಂಧನ - Two people stabbed

ETV Bharat Logo

Copyright © 2024 Ushodaya Enterprises Pvt. Ltd., All Rights Reserved.