ETV Bharat / state

ಶಿರೂರು ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿ ಏಳು ಜನರ ದಾರುಣ ಸಾವು, ಮುಂದುವರಿದ ಕಾರ್ಯಾಚರಣೆ - hill collapsed - HILL COLLAPSED

ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿ ಗುಡ್ಡ ಕುಸಿದು 7 ಜನರು ಮೃತಪಟ್ಟಿರುವ ಘಟನೆ ಇಂದು ನಡೆದಿದ್ದು, ಮಣ್ಣಿನಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಶಿರೂರು ಬಳಿ ಗುಡ್ಡ ಕುಸಿತ
ಶಿರೂರು ಬಳಿ ಗುಡ್ಡ ಕುಸಿತ (ETV Bharat)
author img

By ETV Bharat Karnataka Team

Published : Jul 16, 2024, 3:26 PM IST

Updated : Jul 16, 2024, 5:20 PM IST

ಶಿರೂರು ಬಳಿ ಗುಡ್ಡ ಕುಸಿತ (ETV Bharat)

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು ಒಟ್ಟು ಏಳು ಜನರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

ಈ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದು, ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು ಬಿದ್ದಿದೆ. ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಉಳಿದಂತೆ ಮಣ್ಣಿನಡಿ ಸಿಲುಕಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಎಲ್ಲೆಡೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಗುಡ್ಡ ಮತ್ತು ಮನೆ ಕುಸಿತದಂತಹ ಪ್ರಕರಣಗಳು ವರದಿಯಾಗುತ್ತಿವೆ. ಹೊರಗಡೆ ತಿರುಗಾಡುವವರು ಕೊಂಚ ಜಾಗೃತಿ ವಹಿಸುವಂತೆ ಸಂಸದರು ಮನವಿ ಮಾಡಿದ್ದಾರೆ.

ಪ್ರಸ್ತುತ ಘಟನಾ ಸ್ಥಳದಲ್ಲಿ ರಕ್ಷಣಾ ತಂಡಗಳು ಬೀಡು ಬಿಟ್ಟಿದ್ದು, ಗುಡ್ಡದಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಮಾಹಿತಿ ಪ್ರಕಾರ ಒಟ್ಟು 9 ಜನರು ಗುಡ್ಡದಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಈ ಪೈಕಿ ಈಗಾಗಲೇ 7 ಜನರು ಸಾವನ್ನಪ್ಪಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿರುವುದಾಗಿ ಸಂಸದರು ಮಾಹಿತಿ ಹಂಚಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಲಾರಿಯಲ್ಲಿ ಬಂದ ಜಿಲ್ಲಾಧಿಕಾರಿ, ಎಸ್ಪಿ, ಸಿಇಒ: ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಯಿಂದಾಗಿ ನೀರು ರಸ್ತೆ ಮೇಲೆ ಭಾರೀ ಪ್ರಮಾಣದಲ್ಲಿ ನೀರು ಸಂಗ್ರಹವಾಗಿ ವಾಹನ ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ್ ಕಾಂದೂ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ ಎಂ ನಾರಾಯಣ್ ಲಾರಿ ಮೂಲಕ ಗುಡ್ಡ ಕುಸಿತದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿರೂರು ಬಳಿ ಗುಡ್ಡ ಕುಸಿತ (ETV Bharat)

ಇನ್ನು ಶಿರೂರು ಘಟನಾ ಸ್ಥಳದಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿದ್ದು, ಎರಡು ಗ್ಯಾಸ್ ಟ್ಯಾಂಕರ್​ಗಳು ಸಹ ಕೊಚ್ಚಿ ಹೋಗಿವೆ.

ಇದನ್ನೂ ಓದಿ: ಕೇರಳದಲ್ಲಿ ಭಾರಿ ಮಳೆ: ತಾಯಿ, ಮಗ ಸೇರಿ ಮೂವರು ಸಾವು, ಜನಜೀವನ ಅಸ್ತವ್ಯಸ್ತ - Heavy Rain in Kerala

Last Updated : Jul 16, 2024, 5:20 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.