ETV Bharat / state

ಚಾಮರಾಜನಗರ: ಗ್ರಾ.ಪಂ‌ ಅಧ್ಯಕ್ಷೆಯ ಮಗನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು - Sexual Abuse Case - SEXUAL ABUSE CASE

ಗ್ರಾಮ ಪಂಚಾಯತಿ ಅಧ್ಯಕ್ಷೆಯ ಮಗನ ವಿರುದ್ಧ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅತ್ಯಾಚಾರ
ಅತ್ಯಾಚಾರ (ETV Bharat)
author img

By ETV Bharat Karnataka Team

Published : May 28, 2024, 10:31 AM IST

ಚಾಮರಾಜನಗರ: ಪಂಚಾಯಿತಿಯಿಂದ ಮನೆ ಕೊಡಿಸುವುದಾಗಿ ಹೇಳಿ ಗ್ರಾಮ ಪಂಚಾಯತಿ ಅಧ್ಯಕ್ಷೆಯ ಪುತ್ರ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿರುವ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾ.ಪಂ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿದೆ.

ಗ್ರಾಮ ಪಂಚಾಯತಿ ಅಧ್ಯಕ್ಷೆಯ ಪುತ್ರ ವೈದೇಶ್, ಬಸಮ್ಮಣ್ಣಿ ಹಾಗೂ ಶಿವಮ್ಮಣ್ಣಿ ಎಂಬವರ ವಿರುದ್ಧ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

25 ವರ್ಷದ ವಿವಾಹಿತೆ ಮನೆಗಾಗಿ ಅರ್ಜಿ ಸಲ್ಲಿಸಿದ್ದರು. ಮನೆ ಕಟ್ಟಿಕೊಡುವ ಆಸೆ ತೋರಿಸಿದ್ದ ವೈದೇಶ್ ತನ್ನ ಮೇಲೆ ಅತ್ಯಾಚಾರ ಎಸಗಿ, ಖಾಸಗಿ ಫೋಟೋ ಸೆರೆ ಹಿಡಿದಿದ್ದಾನೆ. ಆರೋಪಿಗಳು ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವುದಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಪ್ರತ್ಯೇಕ ಘಟನೆ- ಗುಂಡ್ಲುಪೇಟೆ ಠಾಣೆಯಲ್ಲಿ ಹೈಡ್ರಾಮಾ: ಸಾಮಾಜಿಕ ಜಾಲತಾಣದಲ್ಲಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ವಿರುದ್ದ ಅವಾಚ್ಯ ಪದ ಬಳಕೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ್ದಕ್ಕೆ ಗುಂಡ್ಲುಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ ನಡೆಯಿತು.

ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ಗ್ರಾಮದ ಮಲ್ಲು ಎಂಬಾತ ಶಾಸಕರ ಬಗ್ಗೆ ಫೇಸ್‌ಬುಕ್ ಪೇಜಿನಲ್ಲಿ ಅವಾಚ್ಯ ಪದ ಬಳಸಿದ್ದು, ಇದನ್ನು ವಿರೋಧಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಯ ಬಂಧನಕ್ಕೆ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆತನನ್ನು ಠಾಣೆಗೆ ಕರೆದುಕೊಂಡು ಬರುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಠಾಣೆಯೆದುರು ಜಮಾಯಿಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕಾಂಗ್ರೆಸ್ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಸಂದರ್ಭದಲ್ಲಿ ಎರಡು ಗುಂಪಿನ ನಡುವೆ ವಾಗ್ವಾದ ನಡೆಯಿತು. ಆರೋಪಿಯಿಂದ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಪೊಲೀಸರು ಕಳುಹಿಸಿದ್ದಾರೆ.

ಇದನ್ನೂ ಓದಿ: ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ - Davanagere Protest

ETV Bharat Logo

Copyright © 2025 Ushodaya Enterprises Pvt. Ltd., All Rights Reserved.