ಬೆಂಗಳೂರು:ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪದ ಪ್ರಕರಣದಲ್ಲಿ ರೇವಣ್ಣ ಸಲ್ಲಿಸಿದ್ದ ಜಾಮಿನು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.
ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ 42ನೇ ಎಸಿಎಂಎಂ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ. ಅಲ್ಲದೇ ಸೋಮವಾರ ಜಾಮೀನು ಅರ್ಜಿ ಆದೇಶವನ್ನು ಪ್ರಕಟಿಸುವುದಾಗಿ ತಿಳಿಸಿದ್ದು, ಅಲ್ಲಿಯ ವರೆಗೆ ಗುರುವಾರ ಒಂದು ದಿನದ ಮಟ್ಟಿಗೆ ಮಂಜೂರು ಮಾಡಿದ್ದ ಜಾಮೀನು ಮುಂದುವರೆಯಲಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.
ವಿಚಾರಣೆ ವೇಳೆ ಸರ್ಕಾರದ ಪರ ಎಸ್‌ಪಿಸಿ, ಹೊಳೆನರಸೀಪುರ ಪ್ರಕರಣದಲ್ಲಿ ಈ ಹಿಂದೆ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಅತ್ಯಾಚಾರ ಸೆಕ್ಷನ್ 376ನ್ನು ಸೇರ್ಪಡೆ ಮಾಡಲಾಗಿದೆ. ಸಂತ್ರಸ್ತೆಗೆ ಜೀವ ಭಯ ಇದೆ ಎಂಬುದಾಗಿ ಹೇಳಲಾಗಿದೆ. ಆದ್ದರಿಂದ ಜಾಮೀನು ಮಂಜೂರು ಮಾಡಬಾರದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಅಲ್ಲದೇ, ಅತ್ಯಾಚಾರ ಆರೋಪ ಸಾಬೀತಾದಲ್ಲಿ ಅಂತಹ ಪ್ರಕರಣಗಳ ವಿಚಾರಣೆಗೆ ಸೆಷನ್ಸ್ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಗೆ ಅವಕಾಶವಿಲ್ಲ. ಈ ಸಂಬಂಧ ಸುಪ್ರೀಂ ಕೋರ್ಟ್ ಹಲವು ತೀರ್ಪುಗಳಲ್ಲಿ ತಿಳಿಸಿದೆ. ಅಲ್ಲದೇ ಅತ್ಯಾಚಾರ ಆರೋಪ ಸಂಬಂಧದ ತನಿಖೆ ಮುಂದುವರಿದಿದೆ. ಈ ಹಿನ್ನೆಲೆ ಜಾಮೀನು ಮಂಜೂರು ಮಾಡಬಾರದು ಎಂದು ಎಸ್‌ಪಿಪಿ ನ್ಯಾಯಾಲಯಕ್ಕೆ ವಿವರಿಸಿದರು. ಅಲ್ಲದೇ, ವಕೀಲರು ಇದೊಂದು ಲೈಂಗಿಕ ಪ್ರಕರಣವಾಗಿದ್ದು, ಇನ್ ಕ್ಯಾಮರಾ ವಿಚಾರಣೆಗೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ನ್ಯಾಯಾಧೀಶರು ಅರ್ಜಿಗೆ ಸಂಬಂಧ ವಾದ ಮಂಡಿಸಲು ಸೂಚನೆ ನೀಡಿದರು.
ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ ವಿ ನಾಗೇಶ್, ಪ್ರಕರಣದಲ್ಲಿ ದೂರನ್ನು ಹೇಗೆ ದಾಖಿಸಲಾಗಿದೆ ಎಂಬುದರ ವಿವರಣೆ ಇದೆ . ಇದೊಂದು ರೀತಿಯಲ್ಲಿ ಅರೇಬಿಯನ್ ನೈಟ್ ಕಥೆಯ ರೀತಿಯಲ್ಲಿದೆ. ಸಂತ್ರಸ್ತೆ ದೂರನ್ನು ಟೈಪ್ ಮಾಡಿ ದಾಖಲಿಸಲಾಗಿದೆ. ಸಿಆರ್‌ಪಿಸಿ 154ರ ಅಡಿ ಅತ್ಯಾಚಾರ ಆರೋಪ ಪ್ರಕರಣಗಳನ್ನು ಮಹಿಳಾ ಅಧಿಕಾರಿ ದೂರು ದಾಖಲಿಸಿಕೊಳ್ಳಬೇಕು. ಸಂತ್ರಸ್ತೆ ಹೇಳಿಕೆಯನ್ನು ವಿಡಿಯೋ ಮಾಡಬೇಕಿತ್ತು. ಮಹಿಳೆಯ ಘನತೆ ಕಾಪಾಡುವ ನಿಟ್ಟಿನಲ್ಲಿ ಕಾಯಿದೆಗೆ 2013ರಲ್ಲಿ ತಿದ್ದುಪಡಿ ತರಲಾಗಿದೆ. ಆದರೆ, ಇದನ್ನು ಪಾಲಿಸಲಾಗಿಲ್ಲ. ಪುರುಷ ದೂರು ದಾಖಲಿಸಿದ್ದಾರೆ. ಎಫ್‌ಐಆರ್ ಅನ್ನು ಕಾನೂನು ಬಾಹಿರವಾಗಿ ದಾಖಲಿಸಲಾಗಿದೆ ಎಂದು ವಾದ ಮಂಡಿಸಿದರು.
ಬರಿಗಾಲಲ್ಲಿ ಬಂದ ರೇವಣ್ಣ: ಬರಿ ಗಾಲಿನಲ್ಲಿ ಬಂದಿದ್ದ ರೇವಣ್ಣ ಆದೇಶ ಪ್ರಕಟವಾಗುವ ಸಂದರ್ಭದಲ್ಲಿ ನ್ಯಾಯಾಲಯದಲ್ಲಿ ಹಾಜರಿದ್ದ ಕೈಮುಗಿದು ನ್ಯಾಯಾಲಯದಲ್ಲಿ ನಿಂತಿದ್ದರು. ವಿಚಾರಣೆ ಪೂರ್ಣಗೊಂಡ ತೀರ್ಪು ಕಾಯ್ದಿರಿಸಿದ ಬಳಿಕ ರೇವಣ್ಣ ನ್ಯಾಯಾಲಯದ ಅನುಮತಿ ಪಡೆದು ಮನೆಗೆ ಹಿಂದಿರುಗಿದರು.
ಇದನ್ನೂಓದಿ:ಆರೋಪಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್ - high court