ETV Bharat / state

ಸಂಸದ ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ 'ಹಾಸನ ಚಲೋ' ಹೋರಾಟ: ಬೃಹತ್ ಪ್ರತಿಭಟನೆ, ಸಮಾವೇಶ - Hassan Chalo Protest - HASSAN CHALO PROTEST

ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣದ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಬಂಧಿಸುವಂತೆ ಹಾಸನದಲ್ಲಿ ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳು ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಮಾವೇಶ ನಡೆಸಿವೆ.

Protest march held against MP Prajwal Revanna in Hassan.
ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. (ETV Bharat)
author img

By ETV Bharat Karnataka Team

Published : May 30, 2024, 6:02 PM IST

ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. (ETV Bharat)

ಹಾಸನ: ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳು ಇಂದು 'ಹಾಸನ ಚಲೋ' ಹೋರಾಟ ನಡೆಸಿವೆ. ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡು ಕೂಡಲೇ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಬೇಕೆಂದು ಸಂಘಟನೆಗಳು ಆಗ್ರಹಿಸಿದವು.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ ವಿವಿಧ ಸಂಘಟನೆಗಳ ಸಂಯುಕ್ತ ಆಶಯದಲ್ಲಿ 'ಹೋರಾಟದ ನಡುಗೆ ಹಾಸನದ ಕಡೆಗೆ' ಎಂಬ ಹೆಸರಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿತ್ತು. ರಾಜ್ಯದ ನಾನಾ ಜಿಲ್ಲೆಗಳಿಂದ ಹಲವು ಸಂಘಟನೆಗಳು ಈ ಹೋರಾಟಕ್ಕೆ ಸಾಥ್ ನೀಡಿದ್ದು, ಸಾವಿರಾರು ಪ್ರತಿಭಟನಾಕಾರರು ಹಾಸನಕ್ಕೆ ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ನಗರದ ಹೇಮಾವತಿ ಪ್ರತಿಮೆಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಯಿತು. ಇಲ್ಲಿಂದ ಹೊರಟ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಸಮೀಪ ಹೊಸ ಬಸ್ ನಿಲ್ದಾಣದ ರಸ್ತೆಯವರೆಗೆ ಸಾಗಿತು. 'ನಾವೆದ್ದು ನಿಲ್ಲದಿದ್ದರೇ' ಎಂಬ ಘೋಷ ವಾಕ್ಯದೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಇದಕ್ಕೆ ಮಾರ್ಗದುದ್ದಕ್ಕೂ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಯಿತು.

ಇದೇ ವೇಳೆ, ಅತ್ಯಾಚಾರ ಪ್ರಕರಣದಲ್ಲಿ ಸಂಸದ ಪ್ರಜ್ವಲ್‌ ಅವರನ್ನು ಬಂಧಿಸಬೇಕು. ಸಂತ್ರಸ್ತ ಮಹಿಳೆಯರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ನಂತರ ಹೊಸ ಬಸ್ ನಿಲ್ದಾಣದ ರಸ್ತೆಯಲ್ಲಿ ಬಹಿರಂಗ ಸಭೆಯನ್ನೂ ಏರ್ಪಡಿಸಲಾಗಿತ್ತು. ಅನೇಕ ಮಹಿಳಾ ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು.

ಇನ್ನು, ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್ ಕಳೆದ ಒಂದು ತಿಂಗಳಿಂದ ವಿದೇಶದಲ್ಲಿ ನೆಲೆಸಿದ್ದು, ಇಂದು ತಡರಾತ್ರಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್​ರನ್ನು ಬಂಧಿಸಲು ವಿಶೇಷ ತನಿಖಾ ತಂಡ ಮುಂದಾಗಿದೆ. ನಿನ್ನೆಯಷ್ಟೇ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯನ್ನು ಮೇ 31ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ಬಂಧಿಸಲು ಎಸ್​ಐಟಿ ಸಜ್ಜಾಗಿದೆ; ಗೃಹ ಸಚಿವ ಜಿ ಪರಮೇಶ್ವರ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.