ಶಿವಮೊಗ್ಗ: ವಸತಿ ಶಾಲೆಯ ಐವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ತೀರ್ಥಹಳ್ಳಿ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಶಾಲೆಯ ಸಂಗೀತ ಶಿಕ್ಷಕನನ್ನು ಬಂಧಿಸಿದ್ದಾರೆ.
ವಸತಿ ಶಾಲೆಯ ಐವರು ವಿದ್ಯಾರ್ಥಿನಿಯರು 45 ವರ್ಷದ ಸಂಗೀತ ಶಿಕ್ಷಕನ ವಿರುದ್ಧ ಶಾಲೆ ಮುಖ್ಯಶಿಕ್ಷಕರಿಗೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ದೂರು ನೀಡಿದ್ದರು.
ಸಂಗೀತ ಶಿಕ್ಷಕರು ಶಾಲೆಯಲ್ಲಿ ಇರುವಾಗ ಹಾಗೂ ಇತ್ತೀಚೆಗೆ ಪ್ರವಾಸಕ್ಕೆಂದು ಹೋದಾಗ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ವಿದ್ಯಾರ್ಥಿನಿಯರು ತಿಳಿಸಿದ್ದರೆಂದು ಮುಖ್ಯಶಿಕ್ಷಕರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಆರೋಪಿ ಸಂಗೀತ ಶಿಕ್ಷಕನನ್ನು ಬೆಂಗಳೂರಿನಲ್ಲಿ ಬಂಧಿಸಿ ಶಿವಮೊಗ್ಗಕ್ಕೆ ಕರೆ ತಂದಿದ್ದಾರೆ.
ಇದನ್ನೂ ಓದಿ: ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಲಬುರಗಿಯಲ್ಲಿ ಶಿಕ್ಷಕನ ಬಂಧನ - Teacher Arrest