ಹುಬ್ಬಳ್ಳಿ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 49 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹೇಳಿದರು.
ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫೆ. 18 ರಂದು ನೊಂದ ಮಹಿಳೆಯೊಬ್ಬರು ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಗೆ ಹಾಜರಾಗಿ, 2023ರಲ್ಲಿ ತಾನು ಅಪ್ರಪ್ತೆಯಾಗಿದ್ದಾಗ ನಗರದ ನಿವಾಸಿಯೊಬ್ಬರು ತನ್ನ ತಂದೆ-ತಾಯಿಯನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿ ಅವರ ಮನೆಗೆ ಕರೆಸಿಕೊಂಡು ಹೋಗಿ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಸಂತ್ರಸ್ತೆ ನೀಡಿದ ಈ ದೂರಿನನ್ವಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿ ಇನ್ನೂ ಹಲವರಿಗೆ ಮೋಸ ಮಾಡಿರುವ ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ತನಿಖೆ ಮಾಡಲಾಗುವುದು. ಅಲ್ಲದೇ ಯಾರೇ ಈತನಿಂದ ಮೋಸ ಹೋಗಿದ್ದಲ್ಲಿ ಸಂಬಂಧಪಟ್ಟ ಠಾಣೆಯಲ್ಲಿ ದೂರು ನೀಡುವಂತೆ ಶಶಿಕುಮಾರ್ ಮನವಿ ಮಾಡಿದರು.
ಇದನ್ನೂ ಓದಿ: ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ವ್ಯಕ್ತಿ ಬಂಧನ - SEXUAL HARASSMENT