ದಾವಣಗೆರೆ: ಇದೇ ಮೊದಲ ಬಾರಿ ಸಂಸದೆಯಾಗಿ ಆಯ್ಕೆಯಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸೋಮವಾರ ದೆಹಲಿಯ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ತಮ್ಮ ಸೊಸೆ ಪ್ರಮಾಣ ವಚನ ಸ್ವೀಕರಿಸುವುದನ್ನು ಟಿವಿಯಲ್ಲಿ ವೀಕ್ಷಿಸಿ ಶಾಮನೂರು ಶಿವಶಂಕರಪ್ಪ ಖುಷಿಪಟ್ಟರು.
ನೂತನವಾಗಿ ಆಯ್ಕೆಯಾದ ಎಲ್ಲಾ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಮೊದಲು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರತಿಯೊಬ್ಬ ಸಂಸದರೂ ಪ್ರಮಾಣ ವಚನ ಸ್ವೀಕರಿಸಿದರು.