ETV Bharat / state

ಲೋಕಸಭೆ ಚುನಾವಣೆಯಲ್ಲಿ ಬಿ ವೈ ರಾಘವೇಂದ್ರರನ್ನು ಗೆಲ್ಲಿಸುವಂತೆ ಶಾಸಕ ಶಾಮನೂರು ಶಿವಶಂಕರಪ್ಪ ಕರೆ - Lok Sabha Elections

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿರುವ ಬಿ.ವೈ ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಶಾಮನೂರು ಶಿವಶಂಕರಪ್ಪ ಕರೆ ಕೊಟ್ಟಿದ್ದಾರೆ.

ಶಾಸಕ ಶಾಮನೂರು ಶಿವಶಂಕರಪ್ಪ
ಶಾಸಕ ಶಾಮನೂರು ಶಿವಶಂಕರಪ್ಪ
author img

By ETV Bharat Karnataka Team

Published : Jan 27, 2024, 5:43 PM IST

ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ

ಶಿವಮೊಗ್ಗ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ವೀರಶೈವ ಸಮಾಜದ ಬಾಂಧವರಲ್ಲಿ ಕಾಂಗ್ರೆಸ್​ನ ಹಿರಿಯ ಶಾಸಕ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಕರೆ ನೀಡಿದ್ದಾರೆ.

ಶಿವಮೊಗ್ಗದ ಬೆಕ್ಕಿನ‌ಕಲ್ಮಠದಲ್ಲಿ ಗುರುಬಸವ ಸ್ವಾಮೀಜಿಯ 112 ನೇ ಪುಣ್ಯ ಸ್ಮರಣೋತ್ಸವದ ಪ್ರಯುಕ್ತ ಶುಕ್ತವಾರ ಭಾವೈಕ್ಯ ಸಮ್ಮೇಳನ ಹಾಗೂ ಗುರುಬಸವಶ್ರೀ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ವೇಳೆ ಗುರು ಬಸವಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಾಮನೂರು ಶಿವಶಂಕರಪ್ಪ ಮಾತನಾಡಿದರು. ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ, ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯವಾಗಿದೆ.

ಬಿ.ವೈ ರಾಘವೇಂದ್ರ ಲೋಕಸಭೆ ಸದಸ್ಯರಾಗಿ ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲಾ ಕೆಲಸಗಳನ್ನು ಪೂರ್ಣ ಮಾಡಿ ಮುನ್ನಡೆಯುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಕೆಲಸ ಆಗಬೇಕಿರುವುದು ಮೊದಲ ಆದ್ಯತೆ. ಜನರ ಅಭಿಲಾಷೆಯಂತೆ ಕೆಲಸ ಮಾಡಿರುವ ಲೋಕಸಭಾ ಸಂಸದರನ್ನು ಬರುವ ಲೋಕಸಭೆ ಚುನಾವಣೆಯಲ್ಲಿಯೂ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ವೀರಶೈವ ಲಿಂಗಾಯತರಲ್ಲಿ ಅನೇಕ ಒಳ ಪಂಗಡಗಳಿವೆ. ಅವುಗಳು ದೂರವಾಗಿ ಎಲ್ಲರೂ ಒಂದೇ ಎಂಬ ಭಾವನೆ ಬರಬೇಕು, ಆಗ ಐಕ್ಯತೆ ಮೂಡುತ್ತದೆ ಎಂದು ಇದೇ ಸಂದರ್ಭದಲ್ಲಿ ಶಾಮನೂರು ಶಿವಶಂಕರಪ್ಪ ಹೇಳಿದರು. ಸಮಾರಂಭದಲ್ಲಿ ಬೆಕ್ಕಿನ‌ಕಲ್ಮಠದ ಮುರುಘರಾಜೇಂದ್ರ ಸ್ವಾಮೀಜಿ ಸೇರಿದಂತೆ ಇತರರು ಹಾಜರಿದ್ದರು.

ಇದನ್ನೂ ಓದಿ : ವೀರಶೈವ‌ಲಿಂಗಾಯತರನ್ನ ಒಬಿಸಿ ಪಟ್ಟಿ ಸೇರ್ಪಡೆಗೆ ಶಿಫಾರಸು ಮಾಡಬೇಕು: ಶಾಮನೂರು ಶಿವಶಂಕರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.