ETV Bharat / state

ಶಿಗ್ಗಾಂವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್​ ಭರ್ಜರಿ ಮತ ಪ್ರಚಾರ

ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್​ ವಿರುದ್ಧ ವಕ್ಫ್​ ಅಸ್ತ್ರವನ್ನು ಬಳಸುತ್ತಿದ್ದರೆ, ಬಿಜೆಪಿ ತಮ್ಮ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿದಾಳಿ ನಡೆಸುತ್ತಿದ್ದಾರೆ.

BJP and Congress campaign for their candidates
ಶಿಗ್ಗಾಂವಿಯಲ್ಲಿ ಸೋಮವಾರ ಬಿಜೆಪಿ, ಕಾಂಗ್ರೆಸ್​ ಮತ ಪ್ರಚಾರ (ETV Bharat)
author img

By ETV Bharat Karnataka Team

Published : Nov 5, 2024, 7:18 AM IST

Updated : Nov 5, 2024, 10:29 AM IST

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನೇ ದಿನೇ ಕಾವೇರುತ್ತಿದೆ. ಮುಡಾ ಟೆನ್ಶನ್ ನಡುವೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರ ದಂಡು ಸೋಮವಾರ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಪರ ಪ್ರಚಾರ ಸಭೆಗಳನ್ನು ನಡೆಸಿದರು. ಇಂದೂ ಕೂಡಾ ಸಿಎಂ ಮತಯಾಚನೆ ಮುಂದುವರಿಸಲಿದ್ದು ಸಚಿವರಾದ ಈಶ್ವರ್​ ಖಂಡ್ರೆ, ಸತೀಶ್ ಜಾರಕಿಹೊಳಿ, ಹೆಚ್.ಕೆ.ಪಾಟೀಲ್ ಹಾಗೂ ಶಿವಾನಂದ ಪಾಟೀಲ್ ಪಾಲ್ಗೊಳ್ಳಲಿದ್ದಾರೆ.

ಸಿದ್ದರಾಮಯ್ಯ ಇಂದು ತಡಸ, ಚಂದಾಪುರ, ಸವಣೂರು ಪಟ್ಟಣದಲ್ಲಿ ಬೃಹತ್ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಮಾವೇಶಗಳಲ್ಲಿ ಪ್ರಮುಖವಾಗಿ ಮುಡಾ ಹಗರಣದಲ್ಲಿ ತಮ್ಮ ವಿರುದ್ಧದ "ಷಡ್ಯಂತ್ರ", ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡುವುದು ಹಾಗೂ ವಕ್ಫ್​ ವಿಚಾರದಲ್ಲಿ ಬಿಜೆಪಿ ರೈತರನ್ನು ದಾರಿ ತಪ್ಪಿಸುತ್ತಿದೆ ಎನ್ನುವ ಮೂರು ವಿಚಾರಗಳನ್ನು ಅವರು ಪ್ರಸ್ತಾಪಿಸುತ್ತಿದ್ದಾರೆ.

ಶಿಗ್ಗಾಂವಿಯಲ್ಲಿ ಸೋಮವಾರ ಬಿಜೆಪಿ, ಕಾಂಗ್ರೆಸ್​ ಮತ ಪ್ರಚಾರ (ETV Bharat)

ಲೋಕಾಯುಕ್ತ ವಿಚಾರಣೆಗೆ ಹಾಜರಾಗುವೆ- ಸಿಎಂ: ನಿನ್ನೆ ಸವಣೂರು ತಾಲೂಕಿನ ಹುರಳಿಕೊಪ್ಪಿಯಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ನೋಟಿಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿ, "ನವೆಂಬರ್​ 6ರಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತೇನೆ" ಎಂದು ತಿಳಿಸಿದರು.

ಬಿಜೆಪಿ ಪ್ರತಿಭಟನಾ ಮೆರವಣಿಗೆ: ಇತ್ತ ಕಾಂಗ್ರೆಸ್ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಮಾಜಿ ಸಿಎಂ, ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಪ್ರತಾಪ್ ಸಿಂಹ, ಸಿ.ಟಿ.ರವಿ ಸೇರಿದಂತೆ ಹಲವು ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಸರ್ಕಾರ ರೈತರ ಜಮೀನುಗಳನ್ನೂ ಬಿಟ್ಟಿಲ್ಲ. ಜನರು ವಾಸಿಸುವ ಮನೆ ಮತ್ತು ಮಠ, ದೇವಾಲಯಗಳನ್ನೂ ಸಹ ಬಿಟ್ಟಿಲ್ಲ ಎಂದು ಶಿಗ್ಗಾಂವಿ ಮತ್ತು ಸವಣೂರು ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದರು.

ಶಿಗ್ಗಾಂವಿಯಲ್ಲಿ ರಾಣೆ ಚನ್ನಮ್ಮ ವೃತ್ತದಿಂದ ಬಿಜೆಪಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಬಸವರಾಜ ಬೊಮ್ಮಾಯಿ ಮಾತನಾಡಿ, "ಕಾಂಗ್ರೆಸ್ ಉಪ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ತಮ್ಮ ಓಟ್ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ವಕ್ಫ್​ ನೋಟಿಸ್ ನೀಡಿ ರೈತರಿಗೆ ತೊಂದರೆ ಕೊಡುತ್ತಿದೆ" ಎಂದು ಆರೋಪಿಸಿದರು. ವಕ್ಫ್​ ಆಸ್ತಿ ನುಂಗಿರುವ ಕಾಂಗ್ರೆಸ್ ನಾಯಕರ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಸಿ.ಟಿ.ರವಿ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಮಾಜಿ ಶಾಸಕ ಪಿ.ರಾಜೀವ ಉಪಸ್ಥಿತರಿದ್ದರು.

ಇಂದು ಕೂಡಾ ಪ್ರಚಾರ ಕಾರ್ಯ ಮುಂದುವರಿಸಲಿರುವ ಬಿಜೆಪಿ ನಾಯಕರು ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಮತಯಾಚಿಸಲಿದ್ದಾರೆ. ಮಾಜಿ ಸಚಿವರಾದ ಶ್ರೀರಾಮುಲು, ಸಂಸದ ಬಿ.ವೈ.ರಾಘವೇಂದ್ರ ಮತ್ತು ಬೈರತಿ ಬಸವರಾಜ್ ಮತ್ತು ವಿ.ಅರವಿಂದ ಬೆಲ್ಲದ ಸಾಥ್​ ನೀಡಲಿದ್ದಾರೆ. ಬಸವರಾಜ ಬೊಮ್ಮಾಯಿ, ಪತ್ನಿ ಚೆನ್ನಮ್ಮ ಸಹ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ: ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾ ಸಮನ್ಸ್​​

Last Updated : Nov 5, 2024, 10:29 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.