ETV Bharat / state

ರಾಜ್ಯದ ಮೂರು ಜಿಲ್ಲೆಗಳಲ್ಲಿ ನೀತಿ ಸಂಹಿತೆ ಜಾರಿ! ಆಯಾ ಕ್ಷೇತ್ರದ ಮತದಾರರ ಮಾಹಿತಿ ಹೀಗಿದೆ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಈ ಹಿನ್ನೆಲೆ ಆಯಾ ಜಿಲ್ಲೆಗಳಿಗೆ ಈಗಾಗಲೇ ನೀತಿ ಸಂಹಿತೆ ಜಾರಿ ಮಾಡಲಾಗಿದೆ.

author img

By ETV Bharat Karnataka Team

Published : 3 hours ago

KARNATAKA ASSEMBLY BYPOLLS
ಉಪ ಚುನಾವಣೆ ಘೋಷಣೆ (ETV Bharat)

ಬೆಂಗಳೂರು: ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆ ರಾಮನಗರ, ಹಾವೇರಿ ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮಕ್ಕೆ ತಂಡಗಳನ್ನು ರಚನೆ ಮಾಡಿದ್ದು, ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಚೆಕ್‌ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಆಯಾ ಕ್ಷೇತ್ರದಲ್ಲಿ ನ್ಯಾಯಸಮ್ಮತ, ಪಾರದರ್ಶಕ ಚುನಾವಣಿಗೆ ಸಕಲ ಸಿದ್ಧತೆಯ ಜೊತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೇಂದ್ರ ಚುನಾವಣಾ ಆಯೋಗವು ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದೆ. ನ.13 ರಂದು ಮತದಾನ ಮತ್ತು ನ.23 ರಂದು ಮತ ಎಣಿಕೆ ನಡೆಯಲಿದ್ದು, ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ಟೋಬರ್‌ 18 (ನಾಳೆ) ರಂದು ಅಧಿಸೂಚನೆ ಹೊರಡಿಸಲಾಗುತ್ತದೆ.

ಚನ್ನಪಟ್ಟಣ ಉಪಚುನಾವಣೆ: ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಮಾತನಾಡಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗಿದ್ದು, ಇದೇ ಅಕ್ಟೋಬರ್ 15ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತದಿಂದ ವಿವಿಧ ತಂಡಗಳನ್ನು ರಚಿಸಲಾಗಿದೆ‌. ಅವುಗಳಲ್ಲಿ ಒಂದಾದ ಎಫ್​ಎಸ್​ಟಿ ತಂಡವು ಅ.16ರ ಬುಧವಾರ ಚನ್ನಪಟ್ಟಣ ಶಿಶಿರ ರೆಸಾರ್ಟ್ ಮೇಲೆ ದಾಳಿ ಮಾಡಿ 2.80 ಲಕ್ಷ ರೂಪಾಯಿಗಳ ಮೌಲ್ಯದ ವಿವಿಧ ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದೆ ಎಂದಿದ್ದಾರೆ.

ಇದೇ ಶುಕ್ರವಾರ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದ್ದು, ಅ. 25 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಅ. 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅ. 30 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 13ರಂದು ಚುನಾವಣೆಗೆ ಮತದಾನ ನಡೆಯಲಿದೆ. ನವೆಂಬರ್ 23 ಮತ ಎಣಿಕೆ ಕಾರ್ಯ ನಡೆಯಲಿದ್ದು, ನವೆಂಬರ್ 25 ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.

ಮತದಾರರ ಮಾಹಿತಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ 2,32,836 ಮತದಾರರಿದ್ದು, ಅವರಲ್ಲಿ 1,12,271 ಪುರುಷ, 1,20,557 ಮಹಿಳಾ, 8 ಜನ ತೃತೀಯ ಲಿಂಗಿ ಮತದಾರರಿದ್ದಾರೆ. 85 ವರ್ಷಕ್ಕೂ ಮೇಲ್ಪಟ್ಟ 1,613 ಮತದಾರರಿದ್ದು, ಅವರಲ್ಲಿ 612 ಪುರುಷ ಹಾಗೂ 1,001 ಮಹಿಳಾ ಮತದಾರರಿದ್ದಾರೆ. 3,011 ಜನ ದಿವ್ಯಾಂಗ ಮತದಾರರಿದ್ದು, ಅವರಲ್ಲಿ 1,669 ಪುರುಷ ಹಾಗೂ 1,342 ಮಹಿಳಾ ಮತದಾರರಿದ್ದಾರೆ. 8,338 ಯುವ ಮತದಾರರಿದ್ದು, 4,268 ಪುರುಷ ಹಾಗೂ 4,069 ಮಹಿಳಾ ಮತದಾರರಿದ್ದಾರೆ. ಒಬ್ಬರು ತೃತೀಯ ಲಿಂಗಿ ಮತದಾರರಿದ್ದಾರೆ. 47 ಸೇವಾ ಮತದಾರರ ಪೈಕಿ 44 ಪುರುಷ ಹಾಗೂ 3 ಮಹಿಳಾ ಮತದಾರರಿದ್ದಾರೆ ಎಂದು ತಿಳಿಸಿದರು.

ಕಟ್ಟುನಿಟ್ಟಿನ ಕ್ರಮ: ಜಿಲ್ಲೆಯಾದ್ಯಂತ ಒಟ್ಟು 16 ಚೆಕ್‌ ಪೋಸ್ಟ್​ಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ 4, ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ 2, ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ 9 ಚೆಕ್‌ ಪೋಸ್ಟ್​ಗಳನ್ನು ಸ್ಥಾಪಿಸಲಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 276 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ 62 ನಗರ ವ್ಯಾಪ್ತಿಯ ಪ್ರದೇಶದಲ್ಲಿ ಹಾಗೂ 214 ಗ್ರಾಮಾಂತರ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಶಿಗ್ಗಾಂವಿ ಉಪಚುನಾವಣೆ: ಹಾವೇರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ್ ಮಾತನಾಡಿ, ಶಿಗ್ಗಾಂವಿ ಉಪಚುನಾವಣಿ ನೀತಿ ಸಂಹಿತಿ ಜಾರಿಯಾಗಿದ್ದು, ಹಾವೇರಿ ಜಿಲ್ಲೆಯಾದ್ಯಂತ ನೀತಿ ಸಂಹಿತಿ ಜಾರಿಯಲ್ಲಿರುತ್ತದೆ. ಜಿಲ್ಲಾಡಳಿದ ನ್ಯಾಯಸಮ್ಮದ ಪಾರದರ್ಶಕ ಚುನಾವಣಿಗೆ ಸಕಲ ಸಿದ್ಧತೆ ಕೈಗೊಂಡಿದೆ. ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಯಾಗಿ ಸವಣೂರು ಉಪ ವಿಭಾಗಾಧಿಕಾರಿ ಮಹ್ಮದ್ ಖೈಝರ್ ಹಾಗೂ ಸಹಾಯಕ ಚುನಾವಣಾ ಅಧಿಕಾರಿಯಾಗಿ ಶಿಗ್ಗಾಂವಿ ತಹಶೀಲ್ದಾರ್ ಸಂತೋಷ ಹಿರೇಮಠ ಕಾರ್ಯ ನಿರ್ವಹಿಸಲಿದ್ದಾರೆ. ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸ್ವೀಕಾರ ಮಾಡಲಾಗುವುದು ಎಂದು ಮಾಹಿತಿ ತಿಳಿಸಿದರು.

ಮತದಾರರ ಮಾಹಿತಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ 2024ಕ್ಕೆ ಅನ್ವಯವಾಗುವಂತೆ 1,21,067 ಪುರುಷರು, 1,15,717 ಮಹಿಳೆಯರು, 6 ಜನ ಇತರೆ ಸೇರಿದಂತೆ ಒಟ್ಟು 2,36,790 ಮತದಾರರಿದ್ದಾರೆ. ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ಆಯೋಗ ವಿಶೇಷ ಅವಕಾಶ ಕಲ್ಪಿಸಿದೆ. 85 ವರ್ಷ ಮೇಲ್ಪಟ್ಟವರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕ್ಷೇತ್ರದಲ್ಲಿ 85 ವರ್ಷ ಮೇಲ್ಪಟ್ಟ 2,802 ಹಿರಿಯ ಮತದಾರರು, 5,251 ವಿಶೇಷ ಚೇತನರು, 144 ಸೇವಾ ಮತದಾರರು ಹಾಗೂ 18 ರಿಂದ 19 ವರ್ಷದೊಳಗಿನ 9,683 ಮತದಾರರಿದ್ದಾರೆ. 241 ಮತಗಟ್ಟೆ ಸೇರಿ 18 ಚೆಕ್‍ಪೋಸ್ಟ್ ಸ್ಥಾಪಿಸಲಾಗುತ್ತದೆ. ಚೆಕ್ ಪೋಸ್ಟ್ ದಿನದ 24 ಗಂಟೆ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಂಡೂರು ಉಪಚುನಾವಣೆ: ಬಳ್ಳಾರಿ ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್‌ ಕುಮಾರ್‌ ಮಿಶ್ರಾ ಮಾತನಾಡಿ, ಚುನಾವಣಾ ಆಯೋಗವು 95-ಸಂಡೂರು (ಪ.ಪಂ) ವಿಧಾನಸಭೆ ಉಪಚುನಾವಣೆಗೆ ದಿನಾಂಕ ನಿಗದಿಪಡಿಸಿ, ವೇಳಾಪಟ್ಟಿ ಪ್ರಕಟಿಸಿದೆ. ವಿಧಾನಸಭೆ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ನ.13 ರಂದು ಮತದಾನ ಮತ್ತು ನ.23 ರಂದು ಮತ ಎಣಿಕೆ ನಡೆಯಲಿದೆ. ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ ಎಂದರು.

ಮತದಾರರು, ಮತಗಟ್ಟೆ: ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ಒಟ್ಟು 2,36,100 ಮತದಾರರಿದ್ದಾರೆ. 1,17,789 ಪುರುಷ ಮತದಾರರು, 1,18,282 ಮಹಿಳೆ ಮತದಾರರು ಹಾಗೂ 29 ಅಲ್ಪಸಂಖ್ಯಾತ ಲಿಂಗತ್ವ ಮತದಾರರು ಇದ್ದಾರೆ. ಒಟ್ಟು 253 ಮತಗಟ್ಟೆ ಮತಕೇಂದ್ರಗಳಿವೆ. ಚುನಾವಣಾ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಸಂಡೂರು (ಪ.ಪಂ) ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 08 ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕಂಟ್ರೋಲ್ ರೂಂ ಅನ್ನು ತೆರೆಯಲಾಗಿದ್ದು, ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ದೂರು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಬಗ್ಗೆ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳುವುದಕ್ಕೆ ಮತ್ತು ಚುನಾವಣೆ ಸಂಬಂಧಿತ ಸಾರ್ವಜನಿಕರ ಕುಂದುಕೊರತೆಗಳು ಇದ್ದಲ್ಲಿ ಟೋಲ್ ಫ್ರೀ ಸಂಖ್ಯೆ 1950 ಅಥವಾ 08392-277100ಗೆ ಕರೆ ಮಾಡಬಹುದು ಎಂದು ಹೇಳಿದರು.

ರಜೆ ನಿರ್ಬಂಧ: ಜಿಲ್ಲೆಯ ತಾಲೂಕಿನ ಹಾಗೂ ಎಲ್ಲಾ ಇಲಾಖಾ, ಕಚೇರಿ ಮುಖ್ಯಸ್ಥರಿಗೆ ರಜೆ ನೀಡುವುದನ್ನು ನಿರ್ಬಂಧಿಸಲಾಗಿದೆ. ಯಾವುದೇ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಜಿಲ್ಲಾ ಚುನಾವಣಾಧಿಕಾರಿಗಳ ಪರವಾನಿಗೆ ಇಲ್ಲದೇ ರಜೆ ಪಡೆಯುವಂತಿಲ್ಲ ಮತ್ತು ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.