ETV Bharat / state

ಶಿರೂರು ಬಳಿ ಹೆದ್ದಾರಿಯ ಒಂದು ಬದಿ ಮಾತ್ರ ಮಣ್ಣು ತೆರವು, ಆದರೆ ಸಂಚಾರಕ್ಕೆ ಬಿಟ್ಟಿಲ್ಲ: ಜಿಲ್ಲಾಧಿಕಾರಿ ಲಕ್ಷಿಪ್ರಿಯ - Shiruru hill collapse case - SHIRURU HILL COLLAPSE CASE

ಶಿರೂರು ಬಳಿ ಹೆದ್ದಾರಿಯ ಒಂದು ಬದಿ ಮಾತ್ರ ಮಣ್ಣು ತೆರವು ಮಾಡಲಾಗಿದೆ. ಆದರೆ ಸಂಚಾರಕ್ಕೆ ಇನ್ನು ಅನುವು ಮಾಡಿಕೊಟ್ಟಿಲ್ಲ ಎಂದು ಜಿಲ್ಲಾಧಿಕಾರಿ ಲಕ್ಷಿಪ್ರಿಯ ಹೇಳಿದ್ದಾರೆ.

HIGHWAY CLEARED  OPEN TO TRAFFIC  COLLECTOR LAKSHIPRIYA  UTTARA KANNADA
ಮಣ್ಣು ತೆರವು ಕಾರ್ಯಾಚರಣೆ (ETV Bharat)
author img

By ETV Bharat Karnataka Team

Published : Jul 20, 2024, 10:07 AM IST

ಮುಂದುವರಿದ ಮಣ್ಣು ತೆರವು ಕಾರ್ಯಾಚರಣೆ (ETV Bharat)

ಕಾರವಾರ: ಅಂಕೋಲ ಶಿರೂರು ಸಮೀಪ ಸಂಭವಿಸಿದ್ದ ಗುಡ್ಡ ಕುಸಿತ ಪ್ರದೇಶದಲ್ಲಿ ರಸ್ತೆಯ ಮೇಲಿದ್ದ ಮಣ್ಣು ತೆರವು ಕಾರ್ಯಾಚರಣೆ ಮುಗಿದಿದೆ. ಹೆದ್ದಾರಿಯ ಒಂದು ಬದಿಯನ್ನು ಮುಕ್ತಗೊಳಿಸಲಾಗಿದ್ದು, ಆದರೆ ಯಾವುದೇ ವಾಹನ ಸಂಚಾರಕ್ಕೆ ಅನುಮತಿ ನೀಡಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಲಕ್ಷಿಪ್ರಿಯ ತಿಳಿಸಿದ್ದಾರೆ.

ಅಂಕೋಲ ಸಮೀಪದ ಗುಡ್ಡ ಬಿದ್ದ ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಪ್ರಸ್ತುತ ಬಿದ್ದಿರುವ ಮಣ್ಣನ್ನು ಸಂಪೂರ್ಣ ತೆರವುಗೊಳಿಸಿ ಸಂಚಾರಕ್ಕೆ ಯೋಗ್ಯವನ್ನಾಗಿ ಮಾಡಲು ಅವಿರತವಾಗಿ ಶ್ರಮಿಸಲಾಗುತ್ತಿದೆ. ಸಗಡೇರಿ ಗ್ರಾಮದ ಬಳಿ ಗಂಗಾವಳಿ ನದಿಯಲ್ಲಿದ್ದ ಗ್ಯಾಸ್ ಟ್ಯಾಂಕರ್​ನಲ್ಲಿನದ್ದ ಸುಮಾರು 15 ಟನ್ ಗ್ಯಾಸ್​ನ್ನು ಹೆಚ್.ಪಿ.ಸಿ.ಎಲ್, ಬಿ.ಪಿ.ಸಿಎಲ್, ರಾಜ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಅಗ್ನಿಶಾಮಕ ತಂಡಗಳ ನೆರವಿನಿಂದ ಸಂಪೂರ್ಣವಾಗಿ ಖಾಲಿ ಮಾಡಲಾಗಿದ್ದು, ಈ ಪ್ರದೇಶವನ್ನು ವಾಸಯೋಗ್ಯಕ್ಕೆ ಮುಕ್ತಗೊಳಿಸಲಾಗಿದೆ. ಗ್ರಾಮಸ್ಥರು ತಮ್ಮ ಮನೆಗಳಿಗೆ ವಾಪಸ್ ಬರಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಪ್ರಸ್ತುತ ಕಾರವಾರ ತಾಲೂಕಿನ 6, ಅಂಕೋಲದ 6, ಕುಮಟಾದ 5, ಹೊನ್ನಾವರದ 13 ಸೇರಿದಂತೆ ಒಟ್ಟು 30 ಕಾಳಜಿ ಕೇಂದ್ರಗಳಲ್ಲಿ 2373 ಮಂದಿ ಆಶ್ರಯ ಒದಗಿಸಲಾಗಿದ್ದು, ಅಗತ್ಯ ಮೂಲಭೂತ ಸೌಲಭ್ಯಗಳು ಹಾಗೂ ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದರು.

ಗುಡ್ಡ ಕುಸಿತ ಪ್ರದೇಶದಲ್ಲಿ ಇದುವರೆಗೆ 7 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಬೆಂಜ್ ಲಾರಿ ಮತ್ತು ಚಾಲಕ ಸಿಲುಕಿರುವ ಸಾಧ್ಯತೆಯಿದೆ. ಈ ಬಗ್ಗೆ ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದ ಮೆಟಲ್ ಡಿಟೆಕ್ಟರ್ ಮೂಲಕ ವಾಹನದ ತಪಾಸಣೆ ಕೈಗೊಳ್ಳಲಾಗಿದೆ. ನೇವಿ ಅಧಿಕಾರಿಗಳು, ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್, ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಸಮೀಪದ ನದಿಯಲ್ಲಿ ಕೂಡಾ ತಪಾಸಣೆ ನಡೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ತಿಳಿಸಿದರು. ಇನ್ಸ್​ಪೆಕ್ಟರ್ ಜನರಲ್ ಅಫ್ ಪೊಲೀಸ್ ಅಮಿತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸುರಕ್ಷಿತ ಕಾರ್ಯಾಚರಣೆಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಹೆಚ್​ಡಿಕೆ ಭೇಟಿ: ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು(ಜುಲೈ20) ಉತ್ತರ ಕನ್ನಡ ಜಿಲ್ಲೆಯ ಶಿರೂರ ಬಳಿ ಸಂಭವಿಸಿದ ಗುಡ್ಡ ಕುಸಿದ ಸ್ಥಳಕ್ಕೆ ಬೆಳಗ್ಗೆ 11ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ದೆಹಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ರಸ್ತೆ ಮಾರ್ಗವಾಗಿ (ಬಾಳೆಗುಳಿ ಕ್ರಾಸ್ ಮಾರ್ಗ) ಶಿರೂರಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಬೆಳಗ್ಗೆ 11 ರಿಂದ 12 ರ ವರೆಗೆ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ ಗೋವಾಕ್ಕೆ ತೆರಳಿ ಅಲ್ಲಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

ಓದಿ: ಶಿರೂರು ಗುಡ್ಡ ಕುಸಿತ ಪ್ರಕರಣ: ಕೆಲಸಕ್ಕೆ ರಜೆ ಹಾಕಿ ಜೀವ ಉಳಿಸಿಕೊಂಡ ಹುಲಿಯಪ್ಪಾ! - Shiruru Hill Collapse

ETV Bharat Logo

Copyright © 2025 Ushodaya Enterprises Pvt. Ltd., All Rights Reserved.