ಶಿವಮೊಗ್ಗ: 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ ಶಿವಮೊಗ್ಗದ FTSC-1 ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿ ಆದೇಶಿಸಿದೆ. 2022 ರಲ್ಲಿ ಹೊಸನಗರ ತಾಲೂಕಿನ ಗ್ರಾಮವೊಂದರಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕಿಗೆ 25 ವರ್ಷದ ಯುವಕ ಲೈಗಿಂಕ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ಬಾಲಕಿ ಹೊಸನಗರ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ದ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಹೊಸನಗರ ಪೊಲೀಸರು ತನಿಖೆ ನಡೆಸಿ, ಯುವಕನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. FTSF-1 ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಲತಾ ಅವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿ ಆದೇಶಿಸಿದ್ದಾರೆ.
ಒಂದು ವೇಳೆ ದಂಡ ಕಟ್ಟಲು ವಿಫಲರಾದರೆ, 4 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಸರ್ಕಾರಿ ವಕೀಲರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.
ಇದನ್ನೂ ಓದಿ: ಪೋಕ್ಸೋ ಪ್ರಕರಣ: ಸಾಕ್ಷ್ಯಾಧಾರ ಸೂಕ್ಷ್ಮವಾಗಿ ಪರಿಗಣಿಸದ ನ್ಯಾಯಾಧೀಶರಿಗೆ ತರಬೇತಿ; ಹೈಕೋರ್ಟ್ ಸೂಚನೆ