ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 7 ಲಕ್ಷಕ್ಕೂ ಅಧಿಕ ಮತಗಳಿಸಿ ಕಾಂಗ್ರೆಸ್ ಪ್ರತಿಸ್ಪರ್ಧಿ ಗೀತಾ ಶಿವರಾಜ್ ಕುಮಾರ್ ಹಾಗೂ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರನ್ನು ಸೋಲಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕುರಿತು: ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ನಂತರ, ಶಿಕಾರಿಪುರದ ಶಾಸಕ ಬಿ.ವೈ.ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ಲೋಕಸಭಾ ಚುನಾವಣೆ ಇದಾಗಿದೆ. ಹಾಗಾಗಿ ಈ ಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ವಿಷಯವೂ ಆಗಿತ್ತು.
2019ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಬಿ.ವೈ.ರಾಘವೇಂದ್ರ 2,23,360 ಮತಗಳ ಅಂತರದಿಂದ ಜಯ ಗಳಿಸಿದ್ದರು. ಒಟ್ಟು 7,29,872 ಮತಗಳನ್ನು ಪಡೆದಿದ್ದರು. ಅಂದು ಜೆಡಿಎಸ್ನಿಂದ ಸ್ಪರ್ಧಿಸಿದ್ದ ಮಧು ಬಂಗಾರಪ್ಪ 5,06,512 ಮತಗಳನ್ನು ಪಡೆದು ಸೋಲನುಭವಿಸಿದ್ದರು.
ಕ್ಷೇತ್ರದ ಮತದಾರರ ಮಾಹಿತಿ: ಪುರುಷರು - 8,62,789, ಮಹಿಳೆಯರು - 8,90,061, ಇತರ-35, ಸೇವಾ- 728 ಸೇರಿ ಒಟ್ಟು ಮತದಾರರು- 17,52,885 ಇದ್ದಾರೆ.
ಈ ಬಾರಿ ಕ್ಷೇತ್ರದಲ್ಲಿ ಶೇ 78.33ರಷ್ಟು ಮತದಾನವಾಗಿತ್ತು. 2019ರ ಚುನಾವಣೆಯಲ್ಲಿ ಶೇ 76.40ರಷ್ಟು ಮತದಾನ ದಾಖಲಾಗಿತ್ತು.
ಇದನ್ನೂ ಓದಿ: ಲೋಕಸಭೆ ಚುನಾವಣೆ 2024: ಬಿಗಿ ಭದ್ರತೆಯ ನಡುವೆ ಮತ ಎಣಿಕೆಗೆ ಕ್ಷಣಗಣನೆ - Counting of votes begins