ETV Bharat / state

ಶಿವಮೊಗ್ಗ ಮಹಿಳಾ ಪಾಲಿಟೆಕ್ನಿಕ್​ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ವಿವರ - womens polytechnic College

author img

By ETV Bharat Karnataka Team

Published : Jul 4, 2024, 11:30 AM IST

ಈ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ35ರಷ್ಟು ಅಂಕಗಳನ್ನು ಪಡೆದಿರಬೇಕು.

shivamogga-womens-polytechnic-college-invite-application-form-for-admission
ಸಾಂದರ್ಭಿಕ ಚಿತ್ರ (ಸಂಗ್ರಹ ಚಿತ್ರ)

ಶಿವಮೊಗ್ಗ: ಎಸ್​ಎಸ್​ಎಲ್​ಸಿ ಉತ್ತೀರ್ಣರಾಗಿ ಡಿಪ್ಲೊಮಾ ಪದವಿ ಪಡೆಯಬೇಕು ಎಂಬ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್​ನ್ಯೂಸ್​. ಇಲ್ಲಿನ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಡಿಪ್ಲೊಮಾ ಪ್ರವೇಶಕ್ಕೆ ಮಹಿಳಾ ಅಭ್ಯರ್ಥಿಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್​ಎಸ್​ಎಲ್​ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಡಿಪ್ಲೊಮಾ ಪ್ರಥಮ ಸೆಮಿಸ್ಟರ್​ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಾಂಶುಪಾಲರ ಹಂತದಲ್ಲಿಯೇ ಮೆರಿಟ್ ಹಾಗೂ ರೋಸ್ಟರ್​​ಗೆ ಅನುಗುಣವಾಗಿ ಆಫ್‍ಲೈನ್ ಪ್ರವೇಶ ನೀಡಲಾಗುವುದು. ಈ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ35ರಷ್ಟು ಅಂಕಗಳನ್ನು ಪಡೆದಿರಬೇಕು.

ಈ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 15 ಆಗಿದೆ.

ಯಾವ ವಿಭಾಗದಲ್ಲಿ ಎಷ್ಟು ಸೀಟು: ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ 63 ಸೀಟುಗಳು, ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್ 63, ಕಮರ್ಷಿಯಲ್ ಪ್ರಾಕ್ಟಿಸ್(ಕನ್ನಡ) 31, ಕಮರ್ಷಿಯಲ್ ಪ್ರಾಕ್ಟಿಸ್(ಇಂಗ್ಲಿಷ್) 32, ಅಪೆರಲ್ ಡಿಸೈನಿಂಗ್ ಫ್ಯಾಬ್ರಿಕೇಷನ್ ಟೆಕ್ನಾಲಜಿ 63 ಸೀಟುಗಳು ಲಭ್ಯ ಇರುತ್ತವೆ.

ಈ ಪ್ರಮಾಣ ಪತ್ರ ಅಗತ್ಯ: ಪ್ರವೇಶಾತಿ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಈ ಕೆಳಗಿನ ಪ್ರಮಾಣ ಪತ್ರಗಳನ್ನು ಲಗತ್ತಿಸುವುದು ಕಡ್ಡಾಯವಾಗಿದೆ. ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ/ಎನ್‍ಒಸಿ, 05 ವರ್ಷದ ವ್ಯಾಸಂಗ ಪ್ರಮಾಣ ಪತ್ರ(ಕ್ಷೇತ್ರ ಶಿಕ್ಷಣಾಧಿಕಾರಿಗಳು ದೃಢೀಕರಿಸಿದ ಸಹಿಯೊಂದಿಗೆ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಭಾವಚಿತ್ರ 04 ನ್ನು ಸಲ್ಲಿಸಬೇಕು.

ಇನ್ನು, ಈ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅನುಮಾನವಿದ್ದಲ್ಲಿ, ಹೆಚ್ಚಿನ ಮಾಹಿತಿಗೆ ರವಿನಾಯಕ್ ಡಿ, ಪ್ರಾಂಶುಪಾಲರು, ಮೊ.ಸಂ: 9886610245 ಗೆ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: ದಾವಣಗೆರೆ: ಉದ್ಯೋಗ ಮೇಳ, 20ಕ್ಕೂ ಹೆಚ್ಚು ಸಂಸ್ಥೆಗಳು ಭಾಗಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.