ETV Bharat / state

ಸುರಪುರ ಉಪ ಚುನಾಚಣೆ: ಬಿಜೆಪಿಯಿಂದ ರಾಜೂಗೌಡಗೆ ಟಿಕೆಟ್ - Shorapur bypoll - SHORAPUR BYPOLL

ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯನ್ನಾಗಿ ಬಿಜೆಪಿಯು ರಾಜೂಗೌಡ ಅವರನ್ನು ಕಣಕ್ಕಿಳಿಸಿದೆ.

ಬಿಜೆಪಿಯಿಂದ ರಾಜುಗೌಡಗೆ ಟಿಕೆಟ್
ಬಿಜೆಪಿಯಿಂದ ರಾಜುಗೌಡಗೆ ಟಿಕೆಟ್
author img

By ETV Bharat Karnataka Team

Published : Mar 26, 2024, 1:44 PM IST

Updated : Mar 26, 2024, 3:12 PM IST

ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ್ದು, ಮಾಜಿ ಸಚಿವ ರಾಜೂಗೌಡಗೆ ಟಿಕೆಟ್ ನೀಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜೂಗೌಡ ಸೋಲು ಕಂಡಿದ್ದರು. ಇದೀಗ ಅವರಿಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿದೆ.

ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ್ ಅವರ ಅಕಾಲಿಕ ನಿಧನ ಹಿನ್ನೆಲೆ ತೆರವಾದ ಸುರಪುರ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಸುರಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ಗುಜರಾತ್​ನ 5, ಪಶ್ಚಿಮ ಬಂಗಾಳ 2 ಮತ್ತು ಹಿಮಾಚಲ ಪ್ರದೇಶದ 6 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಪಕ್ಷದಿಂದ ರಾಜಾ ವೆಂಕಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್​ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: ರಾಜ್ಯದ 17 ಕ್ಷೇತ್ರಗಳಿಗೆ ಕಾಂಗ್ರೆಸ್​ ಅಭ್ಯರ್ಥಿಗಳು ಪ್ರಕಟ; ಐವರು ಸಚಿವರ ಮಕ್ಕಳಿಗೆ ಟಿಕೆಟ್; ಸುರಪುರ ವಿಧಾನಸಭೆ ಉಪಚುನಾವಣೆಗೂ ಅಭ್ಯರ್ಥಿ ಘೋಷಣೆ - Lok Sabha Elections

Last Updated : Mar 26, 2024, 3:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.