ETV Bharat / state

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನದ ವಿರುದ್ಧ ಶ್ಯಾಮಪ್ರಸಾದ್ ಮುಖರ್ಜಿ ಹೋರಾಡಿದ್ದರು: ಬಿ.ವೈ.ವಿಜಯೇಂದ್ರ - Shyamprasad Mukharjee Jayanthi

"ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವುದರ ವಿರುದ್ಧ ಹೋರಾಡಿದ್ದ ಡಾ.ಶ್ಯಾಮಪ್ರಸಾದ್​ ಅವರ ಬಲಿದಾನವೂ ಕಾಶ್ಮೀರಕ್ಕಾಗಿಯೇ ಆಗಿತ್ತು" ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

author img

By ETV Bharat Karnataka Team

Published : Jul 6, 2024, 3:23 PM IST

Dr. Shyamaprasad Mukherjee's Jayanti Program
ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಜಯಂತಿ ಕಾರ್ಯಕ್ರಮ (ETV Bharat)

ಬೆಂಗಳೂರು: "ಶ್ಯಾಮಪ್ರಸಾದ್ ಮುಖರ್ಜಿ ಅವರು ಕಾಶ್ಮೀರವನ್ನು ಭಾರತದಲ್ಲೇ ಉಳಿಸಲು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನ ನೀಡುವುದರ ವಿರುದ್ಧ ನಿರಂತರ ಹೋರಾಟ ಮಾಡಿದ್ದರು" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಏರ್ಪಡಿಸಿದ್ದ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಕಾಶ್ಮೀರಕ್ಕಾಗಿಯೇ ಅವರ ಬಲಿದಾನವೂ ಆಗಿತ್ತು" ಎಂದು ನೆನೆದರು.

"ಮುರಳಿ ಮನೋಹರ ಜೋಶಿ ಅವರ ನೇತೃತ್ವದಲ್ಲಿ ಕಾಶ್ಮೀರದ ಲಾಲ್ ಚೌಕದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿತ್ತು. ಬಿ.ಎಸ್. ಯಡಿಯೂರಪ್ಪ, ಅನಂತಕುಮಾರ್ ಮತ್ತಿತರ ನಾಯಕರು ಇದರಲ್ಲಿ ಭಾಗವಹಿಸಿದ್ದರು. ಕಾಶ್ಮೀರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅಮಿತ್ ಶಾ ಅವರು 370ನೇ ವಿಧಿಯನ್ನು ಕಿತ್ತೊಗೆಯುವ ಕೆಲಸ ಮಾಡಿದ್ದಾರೆ. ಅದಕ್ಕೆ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರೇ ಪ್ರೇರಣೆ" ಎಂದರು.

ಈ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ್‍ದಾಸ್ ಅಗರ್ವಾಲ್, ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಶರಣು ಸಲಗರ್, ಶೈಲೇಂದ್ರ ಬೆಲ್ದಾಳೆ, ರಾಜ್ಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು.ಮಂಜುಳಾ, ಪ್ರಮುಖರು, ಕಾರ್ಯಕರ್ತರು, ಕಾರ್ಯಾಲಯ ಸಿಬ್ಬಂದಿ ಹಾಜರಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಾಡಪ್ರಭುವಿನ ನಿತ್ಯ ಸ್ಮರಣೆ; ಕೊಡುಗೆ ಸ್ಮರಿಸುವ ಹಲವು ಸ್ಥಳಗಳು - Nadaprabhu Kempegowda

ETV Bharat Logo

Copyright © 2024 Ushodaya Enterprises Pvt. Ltd., All Rights Reserved.