ETV Bharat / state

ಎಸ್​ ಬಂಗಾರಪ್ಪ ಸ್ಮಾರಕ ನಿರ್ಮಾಣ, ವಾರಾಣಸಿಯಲ್ಲಿ 5 ಕೋಟಿ ವೆಚ್ಚದಲ್ಲಿ ವಸತಿ ಸಂಕೀರ್ಣದ ಘೋಷಣೆ

Siddaramaiah budget: 2024ರ ಬಜೆಟ್​ನಲ್ಲಿ ಸಿ ವರ್ಗದ ಅರ್ಚಕರ ಬ್ಯಾಂಕ್​ ಖಾತೆಗೆ ಖಾತೆಗೆ ತಸ್ತಿಕ್​ ಮೊತ್ತ ಜಮೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

siddaramaiah says will constract ex cm Bangarappa memorial

author img

By ETV Bharat Karnataka Team

Published : Feb 16, 2024, 12:36 PM IST

ಬೆಂಗಳೂರು: ರಾಜ್ಯದ ಎಲ್ಲ ಕಚೇರಿಗಳು, ಅಂಗಡಿ - ಮುಂಗಟ್ಟುಗಳು, ವಿವಿಧ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಅಳವಡಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಡಿ ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

  • ಬಸವರಣ್ಣನವರ ಬದುಕು, ಸಂದೇಶ ಚಿಂತನೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಲು ಬಸವ ಜಯಂತಿಯಂದು ಸರ್ವ ಧರ್ಮ ಸಂಸತ್ತನ್ನು ಆಯೋಜಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.
  • ಬಸವಣ್ಣನವರ ಜನ್ಮಸ್ಥಳ ಬಸವನಬಾಗೇವಾಡಿಯ ಅಭಿವೃದ್ಧಿಗೆ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಹೇಳಲಾಗಿದೆ.
  • ತುಳು, ಕೊಡವ, ಬ್ಯಾರಿ ಮತ್ತು ಕೊಂಚಣಿ ಭಾಷಾ ಅಭಿವೃದ್ಧಿಗೆ ಅಕಾಡೆಮಿ ಮೂಲಕ ಪ್ರೋತ್ಸಾಹ ನೀಡುವ ಅಭಯ ನೀಡಲಾಗಿದೆ.
  • ಅಲೆಮಾರಿ ಮತ್ತು ಅಲೆಮಾರಿ ಸಮುದಾಯದ ಕಲೆ, ಸಂಸ್ಕೃತಿ ಪ್ರೋತ್ಸಾಹಿಸಲು ಅಲೆಮಾರಿ ಸಂಸ್ಕೃತಿ ಉತ್ಸವ ಆಯೋಜಿಸಲಾಗುವುದು.
  • ಮಾಜಿ ಮುಖ್ಯಮಂತ್ರಿ ಎಸ್​ ಬಂಗಾರಪ್ಪನವರ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.
  • ಬಸವಣ್ಣ ಮತ್ತು ಇತರ ಶರಣರ ವಚನಗಳನ್ನು ವಿಶ್ವಕ್ಕೆ ಪರಿಚಯಿಸಲು ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆ.
  • ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ 50 ಅಭಿಯಾನದಡಿ ವರ್ಷಪೂರ್ತಿ ಆಚರಣೆಗೆ ಅನುದಾನ ಬಿಡುಗಡೆ ಮಾಡಲಾಗಿದೆ.
  • 1924ರಲ್ಲಿ ಮಹಾತ್ಮಗಾಂಧಿಜೀ ಅವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಬೆಳಗಾವಿ ಅಧಿವೇಶನಕ್ಕೆ ಶತಮಾನೋತ್ಸ ಆಚರಿಸುತ್ತಿರುವ ಹಿನ್ನಲೆ ಇದರ ಸ್ಮರಣೆಗೆ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲು 2 ಕೋಟಿ ಅನುದಾನ
  • ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್​ ಪಾಸ್​ ಸೌಲಭ್ಯ
  • ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಸ್ಥಾಪಿಸುವ ಮೂಲಕ ಸಾಮಾಜಿಕ ನ್ಯಾಯ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ತಕರ್ತರಿಗೆ ಪ್ರತಿ ವರ್ಷ ಪ್ರಶಸ್ತಿ ನೀಡಲಾಗುವುದು ಎಂದು ಹಣಕಾಸು ಸಚಿವರೂ ಆಗಿರುವ ಸಿಎಂ ಪ್ರಕಟಿಸಿದ್ದಾರೆ.

ಮುಜರಾಯಿ ಇಲಾಖೆ ಅನುದಾನ:

  • ವಾರಾಣಸಿಯಲ್ಲಿ 5 ಕೋಟಿ ವೆಚ್ಚದಲ್ಲಿ ಕಾಮಗಾರಿ
  • ಮಂತ್ರಾಲಯಕ್ಕೆ ಸಂಪರ್ಕ ಕಲ್ಪುಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ 158 ಕೋಟಿ ರೂ ವೆಚ್ಚದಲ್ಲಿ ಬ್ರಿಡ್ಜ್​-ಕಂ-ಬ್ಯಾರೇಜ್​ ನಿರ್ಮಾಣ ಮಾಡಲಾಗುವುದು ಎಂದು ಹಣಕಾಸು ಸಚಿವರು ಹೇಳಿದ್ದಾರೆ.
  • ಘಾಟಿ ಸುಬ್ರಹ್ಮಣ್ಯಸ್ವಾಮಿ ಮತ್ತು ಕೊಪ್ಪಳದ ಹುಲಿಗೆಮ್ಮ ದೇವಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರ ರಚನೆ
  • ಐತಿಹಾಸಿಕ ದೇವಾಲಯಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಕ್ರಮ ವಹಿಸುವ ವಾಗ್ದಾನ ಮಾಡಲಾಗಿದೆ.
  • ಸಿ ವರ್ಗದ ಅರ್ಚಕರ ಬ್ಯಾಂಕ್​ ಖಾತೆಗೆ ಖಾತೆಗೆ ತಸ್ತಿಕ್​ ಮೊತ್ತ ಜಮೆ

ಇದನ್ನೂ ಓದಿ: ಮಾಜಿ ದೇವದಾಸಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರ ಮಾಸಾಶನ ಹೆಚ್ಚಳ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.