ETV Bharat / state

ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆಂದು ಹೇಳುವವರೇ ಸಿಎಂ ರೇಸ್​ನಲ್ಲಿ ಮುಂದಿದ್ದಾರೆ; ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತವೆಂದು ಬಿ.ವೈ. ವಿಜಯೇಂದ್ರ ಪುನರುಚ್ಚರಿಸಿದ್ದಾರೆ.

author img

By ETV Bharat Karnataka Team

Published : 3 hours ago

B Y VIJAYENDRA ON CM
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (ETV Bharat)

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯನವರೇ ಐದು ವರ್ಷ ಪೂರೈಸುತ್ತಾರೆಂದು ಯಾರು ಹೇಳಿಕೆ ಕೊಡುತ್ತಿದ್ದಾರೋ ಅವರೇ ಸಿಎಂ ರೇಸ್​ನಲ್ಲಿ ಮುಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದರು.

ಇಂದು ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು, ಸಚಿವರೇ ಸಿಎಂ ಅಧಿಕಾರಾವಧಿ ವಿಚಾರವಾಗಿ ಹೇಳಿಕೆ ನೀಡುತ್ತಿದ್ದಾರೆ. ಮೇಲಾಗಿ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಮೂರು ವರ್ಷ ಇರ್ತಾರಾ? ಅಥವಾ ಐದು ವರ್ಷ ಇರ್ತಾರಾ? ಎಂಬುದನ್ನು ಹೈಕಮಾಂಡ್​ಗೆ ಕೇಳಬೇಕು ಎಂದಿದ್ದಾರೆ. ಈಗಾಗಲೇ ಶಾಸಕರು ಗುಪ್ತ ಸಭೆಗಳನ್ನು ಮಾಡುತ್ತಿದ್ದಾರೆ. ಡಿಕೆಶಿ ದೇವರ ಪೂಜೆ ಮಾಡಿ ಬಳಿಕ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ ಎಂದು ಹೇಳುತ್ತಾರೆ. ಆದರೆ, ನಿಜವಾಗಿಯೂ ಸಿಎಂ ರೇಸ್​​​​ ನಲ್ಲಿ ಡಿಕೆಶಿ ಇದ್ದಾರೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆಂದು ಹೇಳುವವರೇ ಸಿಎಂ ರೇಸ್​ನಲ್ಲಿ ಮುಂದಿದ್ದಾರೆ; ವಿಜಯೇಂದ್ರ (ETV Bharat)

ವಾಲ್ಮೀಕಿ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನವರೆಗೆ ಪಾದಯಾತ್ರೆ ಮಾಡಿದ್ದೇವೆ. ಇದರ ಪರಿಣಾಮವಾಗಿ ನಮಗೆ ಮೊದಲ ಜಯ ಸಿಕ್ಕಿದೆ. ಈಗಾಗಲೇ ಸಿಎಂ ಕುರ್ಚಿ ಅಲುಗಾಡುತ್ತಿದೆ. ಸಿದ್ದರಾಮಯ್ಯ ಅವರ ಭಂಡತನ ಬಹಳ‌ ದಿನ ನಡೆಯೋದಿಲ್ಲ.‌ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.

ಜಾತಿಗಣತಿ ವಿಚಾರವಾಗಿ ಮಾತನಾಡಿ, ಸಿದ್ದರಾಮಯ್ಯನವರು ನಿಜವಾಗಿಯೂ ಪ್ರಾಮಾಣಿಕರೇ ಆಗಿದ್ದರೆ 2018ರಲ್ಲಿ ಮುಖ್ಯಮಂತ್ರಿ ಆಗಿದ್ದಾಗಲೇ ವರದಿ ಅನುಷ್ಠಾನ ಮಾಡಬೇಕಿತ್ತು. ಇದೀಗ ಹಗರಣಗಳ ಸರಮಾಲೆಯಲ್ಲಿ ಸಿಲುಕಿರುವ ಸರ್ಕಾರವನ್ನು ಉಳಿಸಲು ಜಾತಿಗಣತಿ ದಾಳವನ್ನು ಉರುಳಿಸಿದ್ದಾರೆ ಎಂದು ದೂರಿದರು.

ಈಗಾಗಲೇ ಜಾತಿಗಣತಿಯನ್ನು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ, ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಹ ನಾಯಕರೇ ಇದೊಂದು ಅವೈಜ್ಞಾನಿಕ ಎಂದು ಹೇಳಿದ್ದಾರೆ. ಹೀಗಾಗಿ ಸದನದಲ್ಲಿ ಜಾತಿಗಣತಿ ಅನುಷ್ಠಾನ ಮಾಡುವುದು ಸಿದ್ದರಾಮಯ್ಯ ಅವರ ಭ್ರಮೆ ಎಂದು ಟೀಕಿಸಿದರು.

ವಿಜಯೇಂದ್ರ ಹೈಕಮಾಂಡ್​ಗೆ ಮಂಕುಬೂದಿ ಎರಚಿ ರಾಜ್ಯಾಧ್ಯಕ್ಷರಾಗಿದ್ದಾರೆ ಎಂಬ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನು ಹೈಕಮಾಂಡ್​ಗೆ ಮಂಕುಬೂದಿ ಎರಚುವಷ್ಟು ದೊಡ್ಡವನು ಎನ್ನುವುದನ್ನು ಒಪ್ಪಿಕೊಂಡಿದ್ದಾರೆ ಎಂದರೆ ಸಂತೋಷ. ಆದರೆ, ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ ಎಂದು ಹರಿಹಾಯ್ದರು.

ಆರ್​ಸಿಬಿ ಸಂಘಟನೆ ವಿಚಾರವಾಗಿ ಮಾತನಾಡಿ, ಅದು 20-20 ಮ್ಯಾಚ್. ಆದರೆ, ನಾನು ಟೆಸ್ಟ್ ಆಡೋಕ್ಕೆ ಬಂದಿದ್ದೇನೆ‌.‌ ಈಶ್ವರಪ್ಪ ಅವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಆದರೆ, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದರು.

ಇದನ್ನೂ ಓದಿ:

ಸಿಎಂ ರೇಸ್​ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಸಿಎಂ: ಸಚಿವ ದಿನೇಶ್ ಗುಂಡೂರಾವ್ - Dinesh Gundurao

ಸಿಎಂ ರೇಸ್​ನಲ್ಲಿ ಸತೀಶ್​ ಜಾರಕಿಹೊಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದೇನು? - Lakshmi Hebbalkar

ನಾನು ಸಿಎಂ ರೇಸ್​ನಲ್ಲಿ ಇಲ್ಲ: ಸಚಿವ ಜಿ.ಪರಮೇಶ್ವರ್

ಸಿಎಂ ಸಿದ್ದರಾಮಯ್ಯ ಪರವಾಗಿ ನಿಲ್ಲುತ್ತೇವೆ, ರಾಜೀನಾಮೆ ಪ್ರಶ್ನೆಯೇ ಇಲ್ಲ: ಸಚಿವರ ಅಭಯ - MUDA Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.