ETV Bharat / state

ಅವಧಿ ಅಂತಿಮವಾಗುವವರೆಗೂ ಸಿದ್ದರಾಮಯ್ಯನವರೇ ಸಿಎಂ: ಡಿ.ಕೆ. ಸುರೇಶ್ - D K SURESH

ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲವೇ ಇಲ್ಲ, ಸಿದ್ದರಾಮಯ್ಯ ಅವರೇ ಅವಧಿ ಅಂತಿಮವಾಗುವವರೆಗೂ ಸಿಎಂ ಆಗಿರುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ.

ಡಿ.ಕೆ. ಸುರೇಶ್
ಡಿ.ಕೆ. ಸುರೇಶ್ (ETV Bharat)
author img

By ETV Bharat Karnataka Team

Published : Oct 7, 2024, 5:11 PM IST

ಬೆಂಗಳೂರು: ನಾಯಕತ್ವ ಬದಲಾವಣೆಯ ಪ್ರಶ್ನೆ ಹಾಗೂ ಚರ್ಚೆ ಎರಡೂ ಇಲ್ಲ. ಈ ಅವಧಿ ಅಂತಿಮವಾಗುವವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ನಗರದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, "ಮುಡಾ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯ ತನಿಖೆ ಆಗಬೇಕು ಎಂದು ಹೇಳಿದ್ದು, ತನಿಖೆ ನಡೆಯಲಿದೆ. ತನಿಖಾ ವರದಿ ಬರುವ ತನಕ ಏಕೆ ಕಾಯುತ್ತಿಲ್ಲ?. ತನಿಖೆಗೆ ಮುಕ್ತವಾದ ಸಹಕಾರ ನೀಡಲಾಗುವುದು ಎಂದು ಸಿದ್ದರಾಮಯ್ಯ ಅವರೂ ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ಹಾಗೂ ಸರ್ಕಾರ ದೋಷಮುಕ್ತವಾಗಲಿದ್ದಾರೆ" ಎಂದು ತಿಳಿಸಿದರು.

"ನಮ್ಮ ಪಕ್ಷದ ನಾಯಕರು, ನಮ್ಮದೇ ಪಕ್ಷದ ನಾಯಕರನ್ನು ಭೇಟಿ ಮಾಡುತ್ತಿದ್ದೇವೆ. ಒಂದು ವೇಳೆ ನಾವು ಯಡಿಯೂರಪ್ಪ ಅಥವಾ ಕುಮಾರಸ್ವಾಮಿ ಅವರನ್ನು ಗೌಪ್ಯವಾಗಿ ಭೇಟಿ ಮಾಡಿ ಸಭೆ ನಡೆಸಿದರೆ ಆಗ ವಿಶೇಷ ಅರ್ಥ ಕಲ್ಪಿಸಬಹುದು. ನಾವು ಪಕ್ಷ, ಸಂಘಟನೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಈ ಭೇಟಿಯನ್ನು ಅನುಮಾನದಿಂದ ನೋಡುವುದು ಸರಿಯಲ್ಲ" ಎಂದು ಹೇಳಿದರು.

ಡಿ.ಕೆ. ಸುರೇಶ್ (ETV Bharat)

"ಈ ಭೇಟಿಯಲ್ಲಿ ರಾಜಕೀಯ ಇಲ್ಲ. ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಪ್ರಭಾವಿ ಸಚಿವರು. ಕನಕಪುರ ವಿಧಾನಸಭಾ ಕ್ಷೇತ್ರದ ಕೆಲವು ಅಭಿವೃದ್ಧಿ ಯೋಜನೆಗಳ ಮಂಜೂರಾತಿ ಬಗ್ಗೆ ಅವರ ಜತೆ ಚರ್ಚೆ ಮಾಡಲಾಯಿತು. ಅವರು ನಮ್ಮ ಮನವಿಗೆ ಒಪ್ಪಿದ್ದು, ಮುಖ್ಯಮಂತ್ರಿಗಳು ಅನುದಾನ ಬಿಡುಗಡೆ ಮಾಡಿದ ತಕ್ಷಣ ಮಂಜೂರಾತಿ ನೀಡುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದೇ ವೇಳೆ ರಾಮನಗರ ಜಿಲ್ಲೆಯ ಅಭಿವೃದ್ಧಿ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಇದಕ್ಕೂ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ" ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, "ಖರ್ಗೆ ಅವರು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು. ಅವರು ಬೆಂಗಳೂರಿಗೆ ಬಂದಾಗ ಅವರನ್ನು ಭೇಟಿ ಮಾಡಿ, ಪಕ್ಷ ಸಂಘಟನೆ ಹಾಗೂ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡುವುದು ನಮ್ಮ ಕರ್ತವ್ಯ" ಎಂದರು.

ಇ.ಡಿಗೆ ಏಕಾಏಕಿ ಬಂಧಿಸಲು ಆಗುವುದಿಲ್ಲ: ಮುಡಾ ಪ್ರಕರಣದಲ್ಲಿ ಇ.ಡಿ ಪ್ರವೇಶ ಮಾಡಿದ್ದು ಒಂದು ವೇಳೆ ಬಂಧನವಾದರೆ ಪರ್ಯಾಯ ನಾಯಕರು ಯಾರು ಎಂಬ ಪ್ರಶ್ನೆಗೆ ಉತ್ತರಿಸಿ, "ನಾಳೆ ಬೆಳಗ್ಗೆ ಇ.ಡಿ ಬಂದು ಬಂಧನ ಮಾಡಲು ಸಾಧ್ಯವಿಲ್ಲ. ಇ.ಡಿಗೆ ತನ್ನದೇ ಆದ ಸಾಕ್ಷ್ಯಾಧಾರಗಳು ಸಿಗಬೇಕು, ಆರೋಪ ಸಾಬೀತಾಗಬೇಕು. ಇ.ಡಿ. ಪ್ರಕರಣ ದಾಖಲಿಸಿದ ಮಾತ್ರಕ್ಕೆ ಬಂಧಿಸಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಯಾವುದೇ ರೀತಿಯ ಹಣಕಾಸಿನ ವ್ಯವಹಾರ ನಡೆದಿಲ್ಲ. ಇನ್ನು, ಈ ನಿವೇಶನಗಳನ್ನು ವಾಪಸ್ ನೀಡಲಾಗಿದೆ. ಇದರಲ್ಲಿ ಲಾಭದ ವಿಚಾರ ಇಲ್ಲ. ಶೂನ್ಯ ಹಣಕಾಸಿನ ವರ್ಗಾವಣೆ. ಇಲ್ಲಿ ಏನಾದರೂ ಲೋಪಗಳು ನಡೆದಿದ್ದರೆ ಅದನ್ನು ಲೋಕಾಯುಕ್ತ ತನಿಖಾ ಸಂಸ್ಥೆ ತನಿಖೆ ಮಾಡಲಿದೆ. ಇ.ಡಿ. ಅವರು ಹಣಕಾಸಿನ ವ್ಯವಹಾರಗಳ ಪ್ರಕರಣ ಮಾತ್ರ ತನಿಖೆ ಮಾಡಬೇಕು" ಎಂದು ಹೇಳಿದರು.

ನಾವು ಈ ಸರ್ಕಾರ ಬೀಳಿಸಲ್ಲ, ಸರ್ಕಾರ ತಾನಾಗಿಯೇ ಬೀಳುತ್ತದೆ ಎಂಬ ಹೆಚ್​ ಡಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, "ಕುಮಾರಸ್ವಾಮಿ ಅವರು ಮೇಧಾವಿ, ತತ್ವಜ್ಞಾನಿಗಳು. ಅವರು ಬೆಳಗ್ಗೆ ಒಂದು, ರಾತ್ರಿ ಇನ್ನೊಂದು ಹೇಳುತ್ತಾರೆ. ಅವರನ್ನು ಯಾರೂ ಪ್ರಶ್ನೆ ಮಾಡುವಂತಿಲ್ಲ" ಎಂದು ತಿಳಿಸಿದರು.

ಚನ್ನಪಟ್ಟಣದ ಅನುದಾನದ ಬಗ್ಗೆ ಚರ್ಚೆಗೆ ಬರಲಿ: ನಾನು ತಂದ ಅನುದಾನಕ್ಕೆ ಕಾಂಗ್ರೆಸ್ ನವರು ಬೋರ್ಡ್ ಹಾಕಿಕೊಳ್ಳುತ್ತಿದ್ದಾರೆ ಎನ್ನುವ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, "ಯಾರು ಎಷ್ಟು ಅನುದಾನ ತಂದಿದ್ದಾರೆ ಎಂದು ಚರ್ಚೆಗೆ ಬರಲಿ. ನಾನು ಚರ್ಚೆಗೆ ಸಿದ್ಧ. ಅವರಿಗೆ ಅನುಮಾನ ಇದ್ದರೆ, ಅವರು ಎಷ್ಟು ಅನುದಾನ ತಂದಿದ್ದಾರೆ, ಶಿವಕುಮಾರ ಅವರ ನೇತೃತ್ವದಲ್ಲಿ ನಾವು ಎಷ್ಟು ಅನುದಾನ ತಂದಿದ್ದೇವೆ ಎಂದು ಚರ್ಚೆ ಮಾಡೋಣ" ಎಂದು ಸವಾಲು ಹಾಕಿದರು.

ಇದನ್ನೂ ಓದಿ: ಜಾತಿ ಸಮೀಕ್ಷೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ: ಸಿಎಂ ಸಿದ್ದರಾಮಯ್ಯ - Caste Census

ETV Bharat Logo

Copyright © 2024 Ushodaya Enterprises Pvt. Ltd., All Rights Reserved.