ETV Bharat / state

'ಸಿದ್ದರಾಮಯ್ಯನವರೇ 5 ವರ್ಷ ಸಿಎಂ, ಅವರಿಗೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದವಿದೆ' - D K Suresh

ಸಿದ್ದರಾಮಯ್ಯನವರೇ ನಮ್ಮ ನಾಯಕರು. ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

author img

By ETV Bharat Karnataka Team

Published : 3 hours ago

ಮಾಜಿ ಸಂಸದ ಡಿ.ಕೆ.ಸುರೇಶ್
ಮಾಜಿ ಸಂಸದ ಡಿ.ಕೆ.ಸುರೇಶ್ (ETV Bharat)

ಬೆಂಗಳೂರು: ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿರ್ತಾರೆ. ಅವರಿಗೆ ಚಾಮುಂಡೇಶ್ವರಿ ತಾಯಿಯ ಆಶೀರ್ವಾದವಿದೆ ಎಂದು ಮಾಜಿ ಸಂಸದ ಡಿ.ಕೆ‌.ಸುರೇಶ್ ತಿಳಿಸಿದರು. ಸದಾಶಿವನಗರದ ನಿವಾಸದಲ್ಲಿಂದು ಅವರು ಮಾತನಾಡಿದರು.

ಜಾತಿ ಗಣತಿ ವಿಚಾರವಾಗಿ ಮಾತನಾಡಿ, ಮುಖ್ಯಮಂತ್ರಿಗಳು ಎಚ್ಚರಿಕೆಯ ಹೆಜ್ಜೆ ಇಡಬೇಕು. ಕೇಂದ್ರ ಸರ್ಕಾರ ಗಣತಿಗೆ ಮುಂದಾಗಿದ್ದು, ಒಂದು ವರ್ಷದೊಳಗೆ ಕೆಲಸ ಮುಗಿಯಲಿದೆ. ಅದಕ್ಕೆ ಅಧಿಕೃತ ಸ್ಥಾನಮಾನವೂ ಸಿಗಲಿದೆ. ಅಲ್ಲಿಯವರೆಗೆ ಕಾಯಬೇಕು ಎಂದರು.‌

ಡಿ.ಕೆ.ಸುರೇಶ್ ಹೇಳಿಕೆ (ETV Bharat)

ಚನ್ನಪಟ್ಟಣ ಉಪಚುನಾವಣೆಗೆ ಹೆಚ್‌.ಡಿ.ಕುಮಾರಸ್ವಾಮಿ ಅವರು ಉದ್ಯಮಿಯಿಂದ 50 ಕೋಟಿ ರೂ. ಡಿಮ್ಯಾಂಡ್ ಮಾಡಿರುವ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ರಾಜ್ಯದ ಹಿತದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆ ಅಲ್ಲ. ರಾಜ್ಯದಲ್ಲಿ ಜನ ಕಾಂಗ್ರೆಸ್​ಗೆ ಅವಕಾಶ ಮಾಡಿಕೊಟ್ಟರೆ, ದೇಶದಲ್ಲಿ ಬಿಜೆಪಿಗೆ ಅಭಿವೃದ್ಧಿ ಮಾಡಲೆಂದು ಅವಕಾಶ ನೀಡಿದ್ದಾರೆ. ಆದರೆ, ದೂಷಣೆಗಳೇ ಹೆಚ್ಚಾಗಿವೆ. ಇದರಿಂದ ಕನ್ನಡಿಗರಿಗೆ ಮುಜುಗರ ತರುತ್ತಿದ್ದಾರೆ. ಸಾಕಷ್ಟು ಸಮಸ್ಯೆಗಳಿವೆ. ಅವುಗಳನ್ನು ಬಗೆಹರಿಸುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ಬೀದಿಗಿಳಿದು ಕಿತ್ತಾಡುವುದು ಸರಿಯೇ?. ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು.

ಚನ್ನಪಟ್ಟಣದಲ್ಲಿ ಪದೇ ಪದೆ ಕಾರ್ಯಕ್ರಮ ನಡೆಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, 20 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಬೇಡಿಕೆ ಇರುವ ಕಡೆಗಳಲ್ಲಿ ಸಮಸ್ಯೆ ಪರಿಹರಿಸುವ ಕೆಲಸ ಆಗ್ತಿದೆ. ಡಿಕೆಶಿ ಅವರ ರಾಜಕೀಯದ ಒಂದು ಭಾಗ ಅದು. ಈ ಹಿಂದೆ ಅವರಿಗೆ ಚನ್ನಪಟ್ಟಣ ಕೊಡುಗೆ ನೀಡಿದೆ. ಅವರ ಋಣ ತೀರಿಸಬೇಕಿದೆ. ನಮ್ಮ‌ ಗುರಿ ಜಿಲ್ಲೆಯನ್ನು ಪ್ರಥಮ ಸ್ಥಾನದಲ್ಲಿ ನಿಲ್ಲಿಸುವುದು. ಆ ಗುರಿ ಇಟ್ಟುಕೊಂಡೇ ಕೆಲಸ ಮಾಡ್ತಿದ್ದೇವೆ ಎಂದು ಹೇಳಿದರು.

ಮುನಿರತ್ನ ಪ್ರಕರಣದ ವಿಚಾರವಾಗಿ ಮಾತನಾಡಿ, ಇತ್ತೀಚಿನ ಬೆಳವಣಿಗೆಯಿಂದ ಜನ ಬೇಸತ್ತು‌ ಹೋಗಿದ್ದಾರೆ. ನಾಯಕರ ಹೇಳಿಕೆಗಳು ಮಸಾಲೆಗಳಾಗ್ತಿವೆ. ಬೀದಿಗಳಲ್ಲಿ ಕಲ್ಲು ಹೊಡೆಯುವ ಪರಿಸ್ಥಿತಿ ಎದುರಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ಮುಡಾ ಹಗರಣ ಕುರಿತು 500 ಪುಟಗಳ ದಾಖಲೆ ಇಡಿಗೆ ನೀಡಿದ್ದೇನೆ: ಸ್ನೇಹಮಯಿ ಕೃಷ್ಣ - Snehamayi Krishna

ETV Bharat Logo

Copyright © 2024 Ushodaya Enterprises Pvt. Ltd., All Rights Reserved.