ETV Bharat / state

ಬೆಳಗಾವಿ: ಗಣೇಶೋತ್ಸವ ಪೂರ್ವಭಾವಿ ಸಭೆ; ಮಂಡಳಿಗಳ ಅನುಮತಿಗೆ ಏಕಗವಾಕ್ಷಿ ವ್ಯವಸ್ಥೆ - Ganesha Chaturthi Preparation - GANESHA CHATURTHI PREPARATION

ಗಣೇಶೋತ್ಸವ ಮಂಡಳಿಗಳಿಗೆ ಅನುಮತಿ, ರಸ್ತೆ, ಬೆಳಕಿನ ವ್ಯವಸ್ಥೆ, ಗಣೇಶ ಮೆರವಣಿಗೆ, ನಿಮಜ್ಜನೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶನಿವಾರ ಪೂರ್ವಭಾವಿ ಸಭೆ ನಡೆಸಿದ ಬೆಳಗಾವಿ ಜಿಲ್ಲಾಧಿಕಾರಿ, ಸೂಕ್ತ ವ್ಯವಸ್ಥೆ ಹಾಗೂ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

Ganeshotsava Pre meeting
ಡಿಸಿ ಮೊಹಮ್ಮದ್ ರೋಷನ್ ಅಧ್ಯಕ್ಷತೆಯಲ್ಲಿ ಗಣೇಶೋತ್ಸವ ಪೂರ್ವಭಾವಿ ಸಭೆ (ETV Bharat)
author img

By ETV Bharat Karnataka Team

Published : Sep 1, 2024, 8:09 AM IST

Updated : Sep 1, 2024, 8:32 AM IST

ಬೆಳಗಾವಿ: "ಗಣೇಶೋತ್ಸವ ಮಂಡಳಿಗಳಿಗೆ ಸುಲಭ ಹಾಗೂ ಶೀಘ್ರವಾಗಿ ಒಂದೇ ಕಡೆ ಅನುಮತಿ ನೀಡಲು ಅನುಕೂಲವಾಗುವಂತೆ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ 12 ಪೊಲೀಸ್ ಠಾಣೆಗಳಲ್ಲಿಯೇ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗುವುದು" ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.

ಡಿಸಿ ಮೊಹಮ್ಮದ್ ರೋಷನ್ ಅಧ್ಯಕ್ಷತೆಯಲ್ಲಿ ಗಣೇಶೋತ್ಸವ ಪೂರ್ವಭಾವಿ ಸಭೆ (ETV Bharat)

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, "ಹೆಸ್ಕಾಂ, ಪೊಲೀಸ್, ಮಹಾನಗರ ಪಾಲಿಕೆ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಆಯಾ ಪೊಲೀಸ್ ಠಾಣೆಯ ಏಕಗವಾಕ್ಷಿ ಕೇಂದ್ರದಲ್ಲಿ ಬೆಳಗ್ಗೆ 8ರಿಂದ ರಾತ್ರಿ 8 ಗಂಟೆಯವರೆಗೆ ಇರಲಿದ್ದು, ಅಗತ್ಯ ಅನುಮತಿ ನೀಡಲಿದ್ದಾರೆ" ಎಂದರು.

"ಏಕಗವಾಕ್ಷಿ ತಂಡಗಳಿಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಗಣೇಶ ಮಂಟಪಗಳನ್ನು ನಿರ್ಮಿಸಬೇಕು. ಸಾರ್ವಜನಿಕರ ಸಂಚಾರಕ್ಕೆ, ಮಹಾನಗರ ಪಾಲಿಕೆಯ ಕಸ ವಿಲೇವಾರಿ ಹಾಗೂ ಆಂಬ್ಯುಲೆನ್ಸ್ ಸಂಚಾರಕ್ಕೆ ತೊಂದರೆಯಾಗದಂತೆ ಮಂಟಪದ ಅಳತೆಯು ಮಿತಿಯೊಳಗೆ ಇರುವಂತೆ ನಿಗಾವಹಿಸಬೇಕು. ಗಣೇಶ ಮೂರ್ತಿಗಳ ಆಗಮನ ಹಾಗೂ ವಿಸರ್ಜನೆ ಸಂದರ್ಭದಲ್ಲಿ ರಸ್ತೆಯಲ್ಲಿನ ವಿದ್ಯುತ್ ಹಾಗೂ ವಿವಿಧ ದೂರ ಸಂಪರ್ಕ ಕೇಬಲ್‌ಗಳನ್ನು ಎತ್ತರಿಸಬೇಕು. ಅರಣ್ಯ ಇಲಾಖೆ ವತಿಯಿಂದ ರೆಂಬೆಗಳನ್ನು ಕತ್ತರಿಸಲು‌‌ ಕ್ರಮ‌ವಹಿಸಬೇಕು. ಹೆಸ್ಕಾಂ, ಪೊಲೀಸ್​ ಪಾಲಿಕೆ, ಅರಣ್ಯ, ಅಗ್ನಿಶಾಮಕ, ಬಿಎಸ್​ಎನ್​ಎಲ್ ಹಾಗೂ ಇತರೆ ಇಲಾಖೆ ಅಧಿಕಾರಿಗ‌ಳು ಮೆರವಣಿಗೆ ಮಾರ್ಗದಲ್ಲಿ ಜಂಟಿಯಾಗಿ ಸಮೀಕ್ಷೆ‌ ಜರುಗಿಸಿ ನಿಖರ ವರದಿಯನ್ನು ಒದಗಿಸಬೇಕು" ಎಂದು ತಿಳಿಸಿದರು.

"ಪಾಲಿಕೆ ವತಿಯಿಂದ ಗಣೇಶ‌ ಆಗಮನ ಹಾಗೂ ವಿಸರ್ಜನೆ ಮಾರ್ಗದಲ್ಲಿನ ರಸ್ತೆ ದುರಸ್ತಿಗೆ ಕ್ರಮ ವಹಿಸಬೇಕು. ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಲು ಕೂಡಲೆ ಕ್ರಮವಹಿಸಿ, ಕತ್ತಲೆ ಹೆಚ್ಚಿರುವ‌ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ‌, ಕಣ್ಗಾವಲು ಸ್ಥಾವರ ಹಾಗೂ ಸಾರ್ವಜನಿಕರ ಗ್ಯಾಲರಿ ನಿರ್ಮಾಣಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು. ನಗರದಲ್ಲಿ ಬಂಟಿಂಗ್, ಬ್ಯಾನರ್ ಅಳವಡಿಕೆ ಕುರಿತು ನೀಡಲಾಗುವ ಅನುಮತಿಗಳ ವಿವರಗಳನ್ನು ಪೊಲೀಸ್ ಇಲಾಖೆಗೆ‌ ಪಾಲಿಕೆ ಅಧಿಕಾರಿಗಳು ನೀಡಬೇಕು. ಪಿಒಪಿ ಗಣೇಶ ಮೂರ್ತಿಗಳ‌ನ್ನು ಬಳಸದಂತೆ ಪಾಲಿಕೆಯ ವಾಹನಗಳಲ್ಲಿ ಜಾಗೃತಿ ಮೂಡಿಸಿ" ಎಂದು ಅಧಿಕಾರಿಗಳಿಗೆ ಸೂಚಿಸಿದರು.

DC visited kapileshwara Pond and inspected
ಕಪಿಲೇಶ್ವರ ಹೊಂಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ (ETV Bharat)

ಪೊಲೀಸ್​ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾತನಾಡಿ, "ಪೊಲೀಸ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳು ಜಂಟಿಯಾಗಿ ನಗರದಲ್ಲಿ ಸಂಚರಿಸಿ ಗಣೇಶ‌ ಮಂಟಪಗಳ ಹಾಗೂ ಮೆರವಣಿಗೆಯ ಸ್ಥಳಗಳ ಕುರಿತು ಸಮೀಕ್ಷೆ ನಡೆಸಿ" ಎಂದರು.

ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಡಿಸಿಪಿ ರೋಹನ್​ ಜಗದೀಶ್​, ಎಸಿಪಿ ಶ್ರೀಕಾಂತ ಕಟ್ಟಿಮನಿ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ್​ ನಾಯಿಕ ಸೇರಿ ವಿವಿಧ ಅಧಿಕಾರಿಗಳು ಇದ್ದರು.

ಸಭೆಯ ಬಳಿಕ‌ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಗರದ ಕಪಿಲೇಶ್ವರ ಹೊಂಡಕ್ಕೆ ಭೇಟಿ ನೀಡಿ, ಗಣೇಶ ನಿಮಜ್ಜನೆಗೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಪರಿಶೀಲಿಸಿದರು. ಅದೇ ರೀತಿ ಸ್ವಚ್ಛತೆ, ಬೆಳಕಿನ ವ್ಯವಸ್ಥೆ, ಭದ್ರತೆ ಸೇರಿ ಮತ್ತಿತರ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ನಿರ್ದೇಶನ ನೀಡಿದರು. ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಡಿಸಿಪಿ ರೋಹನ ಜಗದೀಶ, ಎಸಿಪಿ ಶ್ರೀಕಾಂತ ಕಟ್ಟಿಮನಿ ಜೊತೆಗಿದ್ದರು.

Last Updated : Sep 1, 2024, 8:32 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.