ETV Bharat / state

ಲೈಂಗಿಕ ಕಿರುಕುಳ ಆರೋಪ ಪ್ರಕರಣ: ರೇವಣ್ಣ ನಿವಾಸದಲ್ಲಿ ಸಂತ್ರಸ್ತೆ ಸ್ಥಳ ಮಹಜರು ನಡೆಸಿದ ಎಸ್​ಐಟಿ - SIT Site inspection - SIT SITE INSPECTION

ಲೈಂಗಿಕ ಕಿರುಕುಳ ಆರೋಪ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡವು ಸಂತ್ರಸ್ತ ಮಹಿಳೆಯನ್ನು ರೇವಣ್ಣ ನಿವಾಸಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡಿದೆ.

sit-conducted-site-inspection
ಸಂತ್ರಸ್ತೆ ಸ್ಥಳ ಮಹಜರು (Etv Bharat)
author img

By ETV Bharat Karnataka Team

Published : May 4, 2024, 3:11 PM IST

ಹಾಸನ: ಮಾಜಿ ಸಚಿವ ಹೆಚ್​. ಡಿ. ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಮೇಲಿನ ಲೈಂಗಿಕ ಕಿರುಕುಳ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ಸಂಬಂಧ ವಿಶೇಷ ತನಿಖಾ ತಂಡವು ಸಂತ್ರಸ್ತ ಮಹಿಳೆಯನ್ನು ಶನಿವಾರ ರೇವಣ್ಣ ನಿವಾಸಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದೆ.

ಹೆಚ್​. ಡಿ. ರೇವಣ್ಣ ಅವರ ಅಡುಗೆ ಮನೆ, ಬೆಡ್ ರೂಂ ಹಾಗೂ ಸ್ಟೋರ್‌ ರೂಂನಲ್ಲಿ ಎಸ್‌ಐಟಿ ಟೀಂ ಮಹಜರು ನಡೆಸಿದೆ. ಮನೆಯಲ್ಲಿ ಹೆಚ್​. ಡಿ. ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಇಲ್ಲದ ವೇಳೆ ಈ ಮೂರು ಕಡೆ ದೌರ್ಜನ್ಯ ನಡೆಸಿದ್ದ ಬಗ್ಗೆ ಸಂತ್ರಸ್ತೆಯು ಆರೋಪ ಮಾಡಿದ್ದರು. ಹೀಗಾಗಿ ಮನೆಯಲ್ಲಿ ಸಂತ್ರಸ್ತೆ ಕಡೆಯಿಂದ ಮಾಹಿತಿ ಪಡೆದು, ಸ್ಥಳ ಮಹಜರು ನಡೆಸಿದ್ದಾರೆ.

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಹೊಳೆನರಸೀಪುರ ಶಾಸಕ ಹೆಚ್​. ಡಿ. ರೇವಣ್ಣ ವಿರುದ್ಧ ಮಹಿಳೆಯೊಬ್ಬರು ಇತ್ತೀಚೆಗೆ ದೂರು ನೀಡಿದ್ದರು. ಅದರ ಅನ್ವಯ ಇಬ್ಬರೂ ನಾಯಕರ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಹಿಂದೆ ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ದೂರು ನೀಡಿದ್ದರು. ಎಫ್​ಐಆರ್​ನಲ್ಲಿ ಹೆಚ್. ಡಿ. ರೇವಣ್ಣ ಎ1 ಹಾಗೂ ಪ್ರಜ್ವಲ್ ರೇವಣ್ಣ ಅವರನ್ನು ಎ2 ಆರೋಪಿಯಾಗಿ ನಮೂದಿಸಲಾಗಿದೆ. ಸದ್ಯ ಪ್ರಕರಣದ ಬಗ್ಗೆ ಎಸ್​ಐಟಿ ತಂಡವು ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ: ಭವಾನಿ ರೇವಣ್ಣಗೆ ಎಸ್​ಐಟಿ ನೋಟಿಸ್ - SIT Notice to Bhavani Revanna

ETV Bharat Logo

Copyright © 2024 Ushodaya Enterprises Pvt. Ltd., All Rights Reserved.