ಬೆಂಗಳೂರು: ಎಸ್‌ಐಟಿ ತನಿಖೆ ಸಮರ್ಥವಾಗಿ ನಡೆಯುತ್ತಿದೆ. ರಾಜಕೀಯವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಕುಮಾರಸ್ವಾಮಿ ಹೇಳಿದ್ದಕ್ಕೆಲ್ಲ ಉತ್ತರ ಕೊಡಲು ಆಗುವುದಿಲ್ಲ. ಅದಕ್ಕೆಲ್ಲಾ ಉತ್ತರ ಕೊಟ್ಕೊಂಡು ಇರೋದಕ್ಕೆ ಆಗೋದಿಲ್ಲ. ತನಿಖೆ ನಡೆಯುತ್ತಿದೆ, ಮೊದಲು ಅದು ನಡೆಯಲಿ. ಸುಮ್ಮನೆ ಹೇಳಿಕೆಗಳನ್ನ ಕೊಡೋದು ಯಾಕೆ?. ಎಸ್ಐಟಿಯವರು ತನಿಖೆ ನಡೆಸುತ್ತಿದ್ದಾರೆ ಎಂದರು.
ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ವರದಿ ಬರುವವರೆಗೆ ನಮಗೆ ಗೊತ್ತೂ ಇರುವುದಿಲ್ಲ. ಟೀಕೆ-ಟಿಪ್ಪಣಿಗಳನ್ನು ಮಾಡುತ್ತಿರುತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲು ಆಗುವುದಿಲ್ಲ. ಯಾರಾದರೂ ಬ್ಲ್ಯಾಕ್ಮೇಲ್ ಮಾಡಿದ್ದರೆ ಎಸ್‌ಐಟಿ ಕ್ರಮ ತೆಗೆದುಕೊಳ್ಳಲಿದೆ ಎಂದು ಜಿ ಪರಮೇಶ್ವರ್ ಹೇಳಿದರು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂತ್ರಸ್ತರನ್ನು ಕೆಕೆ ಗೆಸ್ಟ್ ಹೌಸ್ನಲ್ಲಿ ಇರಿಸಿದ್ದಾರೆ ಎಂಬ ಹೆಚ್‌ಡಿಕೆ ಆರೋಪ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಅವರಿವರು ಹೇಳಿದ್ದಕ್ಕೆ ಉತ್ತರ ಕೊಡಲು ಆಗುತ್ತಾ?. ಎಸ್ಐಟಿಯವರು ಗಂಭೀರವಾಗಿ ತನಿಖೆ ಮಾಡ್ತಿದ್ದಾರೆ. ಅವರಿಗೆ ತನಿಖೆ ನಡೆಸಲು ಸ್ವಾತಂತ್ರ್ಯ ಕೊಡಬೇಕು ಎಂದರು.
ಇದನ್ನೂ ಓದಿ: ರೇವಣ್ಣ ವಿರುದ್ಧದ ಮಹಿಳೆ ಅಪಹರಣ ಪ್ರಕರಣ; ಸಹಕರಿಸಿದ ಆರೋಪದಲ್ಲಿ ನಾಲ್ವರು ಎಸ್ಐಟಿ ವಶಕ್ಕೆ - Woman abduction case