ETV Bharat / state

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ ಎಸ್ಐಟಿ - Prajwal Revanna

author img

By ETV Bharat Karnataka Team

Published : Sep 9, 2024, 8:02 PM IST

- ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ - ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು

prajwal revanna
ಪ್ರಜ್ವಲ್ ರೇವಣ್ಣ (ETV Bharat)

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಬಂಧಿತನಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಐಡಿ ಸೈಬರ್ ಕ್ರೈಂ‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡನೇ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಜ್ವಲ್ ವಿರುದ್ಧ 1,652 ಪುಟಗಳ ಆರೋಪಪಟ್ಟಿ ಸಲ್ಲಿಸಲಾಗಿದೆ. ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಹಸ್ತಾಂತರಿಸಿಕೊಂಡು ತನಿಖೆ ಕೈಗೊಂಡ ವಿಶೇಷ ತನಿಖಾ ತಂಡವು ಪ್ರಕರಣಕ್ಕೆ ಪೂರಕವಾದ ಒಟ್ಟು 113 ಸಾಕ್ಷಿದಾರರನ್ನು ಪ್ರಾಸಿಕ್ಯೂಷನ್‌ ಪರ ಸಾಕ್ಷಿದಾರರನ್ನಾಗಿ ಪರಿಗಣಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಜೊತೆಗೆ, ನಾಗರಿಕ ಅಪರಾಧ ಸಂಹಿತೆ ಸಿಆರ್​​ಪಿಸಿ - 161ರಡಿ ದಾಖಲಿಸಿ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ಸಂತ್ರಸ್ತೆ ಮತ್ತು ಪ್ರಕರಣದ ಪ್ರಮುಖ ಸಾಕ್ಷಿದಾರರ ಹೇಳಿಕೆಗಳನ್ನು ಕಲಂ-164 ಸಿಆರ್‌ಪಿಸಿ ಅಡಿ‌ ನ್ಯಾಯಾಧೀಶರ ಮುಂದೆ ದಾಖಲಿಸಲಾಗಿದೆ.

ಕೃತ್ಯ ಸಂಬಂಧ ಸ್ಥಳ ಮಹಜರು ಮಾಡಿ ಜೈವಿಕ, ಭೌತಿಕ, ವೈಜ್ಞಾನಿಕ, ಮೊಬೈಲ್, ಡಿಜಿಟಲ್ ಹಾಗೂ ಇತರ ಸಾಂದರ್ಭಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಸಂಗ್ರಹಿಸಿದ ಸಾಕ್ಷ್ಯಾಧಾರಗಳನ್ನು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ಪರೀಕ್ಷೆಗೆ ಒಳಪಡಿಸಲಾಗಿದೆ. ಬಳಿಕ ಪ್ರಯೋಗಾಲಯ ತಜ್ಞರ ಪರೀಕ್ಷಾ ವರದಿಗಳನ್ನು ಸ್ವೀಕರಿಸಿ, ತಜ್ಞರ ಅಭಿಪ್ರಾಯಗಳನ್ನು ಪಡೆದು ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು 1,652 ಪುಟಗಳ ಸಮಗ್ರ ದೋಷಾರೋಪಣ ಪಟ್ಟಿ ಸಿದ್ಧಪಡಿಸಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು‌ ಪತ್ರಿಕಾ ಪ್ರಕಟಣೆಯಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಆತ್ಯಾಚಾರ ಪ್ರಕರಣ ಸಂಬಂಧ ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಸಿತ್ತು.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಚಾರ್ಜ್ ಶೀಟ್​​ನಲ್ಲಿ ದರ್ಶನ್ ಸ್ವಇಚ್ಚಾ ಹೇಳಿಕೆ ರಿವೀಲ್: ಏನದು ಸತ್ಯ? - Darshan Statements

ETV Bharat Logo

Copyright © 2024 Ushodaya Enterprises Pvt. Ltd., All Rights Reserved.