ETV Bharat / state

ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್‌ಶೀಟ್ ಸಲ್ಲಿಕೆ - Prajwal Revanna

author img

By ETV Bharat Karnataka Team

Published : Aug 23, 2024, 6:53 PM IST

Updated : Aug 23, 2024, 8:19 PM IST

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಇಂದು ಕೋರ್ಟ್‌ಗೆ ಮೊದಲ ಚಾರ್ಜ್‌ಶೀಟ್‌​ ಸಲ್ಲಿಸಿದ್ದಾರೆ.

prajwal-revanna
ಪ್ರಜ್ವಲ್ ರೇವಣ್ಣ (ETV Bharat)

ಬೆಂಗಳೂರು: ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ, ಅತ್ಯಾಚಾರ ಪ್ರಕರಣದಲ್ಲಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್‌.ಡಿ.ರೇವಣ್ಣ ಹಾಗೂ ಅವರ ಪುತ್ರ, ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಇಂದು ಸಿಐಡಿ ಮೊದಲ ಚಾರ್ಜ್‌ಶೀಟ್ ಸಲ್ಲಿಸಿತು.

ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಯ ಎಸ್ಐಟಿ ತಂಡ ತಂದೆ-ಮಗನ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ. ನ್ಯಾಯಾಲಯ ಇನ್ನಷ್ಟೇ ಚಾರ್ಜ್‌ಶೀಟ್‌ ಅನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಿದೆ ಎಂದು ಎಸ್ಐಟಿ ಮೂಲಗಳಿಂದ ತಿಳಿದು ಬಂದಿದೆ.

2,144 ಪುಟಗಳ ಚಾರ್ಜ್‌ಶೀಟ್‌ 150 ಸಾಕ್ಷಿಗಳ ಹೇಳಿಕೆಗಳನ್ನು ಒಳಗೊಂಡಿದೆ. ಆರೋಪಿ ಪ್ರಜ್ವಲ್ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸಂತ್ರಸ್ತೆಯ (ಮನೆ ಕೆಲಸದಾಕೆ) ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವುದನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಅಲ್ಲದೇ ಕೆಲಸದಾಕೆಯ ಮಗಳಿಗೆ ವಿಡಿಯೋ ಕರೆ ಮಾಡಿ ವಿವಸ್ತ್ರಳಾಗುವಂತೆ ಒತ್ತಾಯಿಸಿ ಅದರ ಸ್ಕ್ರೀನ್ ಶಾಟ್‌ಗಳನ್ನು ತೆಗೆದುಕೊಂಡಿದ್ದಾರೆ. ತನ್ನ ವಿರುದ್ಧ ಆರೋಪಗಳು ಕೇಳಿ ಬಂದಾಗ ಆರೋಪಿ ಪ್ರಜ್ವಲ್ ಅಂತಹ ವಿಡಿಯೋಗಳು ಮತ್ತು ಚಿತ್ರಗಳನ್ನು ನಾಶಪಡಿಸಿ ವಿದೇಶಕ್ಕೆ ಹೋಗಿರುವುದಾಗಿ ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜ್ವಲ್ ರೇವಣ್ಣ ತನ್ನ ಮೊಬೈಲ್ ಫೋನ್‌ನಿಂದ ಡಿಲೀಟ್ ಮಾಡಲಾಗಿರುವ ಫೋಟೋ ಮತ್ತು ವಿಡಿಯೋಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಪರೀಕ್ಷೆಯ ಮೂಲಕ ರಿಟ್ರೀವ್ ಮಾಡಲಾಗಿದ್ದು, ಆ ವರದಿಗಳನ್ನು ಸಿಐಡಿ ಚಾರ್ಜ್‌ಶೀಟ್‌ನಲ್ಲಿ ಲಗತ್ತಿಸಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ: ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಸರ್ಕಾರ, ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ - Prajwal Revanna Case

Last Updated : Aug 23, 2024, 8:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.