ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಹಾಗು ಚೇತನ್ ಎಂಬುವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಿರೀಕ್ಷಣಾ ಜಾಮೀನಿಗಾಗಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಬಳಿ ಬಂದಿದ್ದ ಆರೋಪಿಗಳಿಬ್ಬರನ್ನೂ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನವೀನ್ ಗೌಡ ಹಾಗೂ ಮತ್ತಿತರರು ಸಂಸದ ಪ್ರಜ್ವಲ್ ರೇವಣ್ಣ ಅವರ ಫೋಟೋ, ವಿಡಿಯೋಗಳನ್ನ ಮಾರ್ಫಿಂಗ್ ಮಾಡಿ ಅವುಗಳನ್ನ ಪೆನ್ ಡ್ರೈವ್ ಮತ್ತು ಸಿಡಿ ಮೂಲಕ ಹಂಚಿದ್ದಾರೆ ಎಂದು ಆರೋಪಿಸಿ ಪೂರ್ಣಚಂದ್ರ ಎಂಬುವವರು ಹಾಸನದ ಸಿಇಎನ್ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಎಫ್ಐಆರ್ ಸಹ ದಾಖಲಾಗಿತ್ತು. ಆದರೆ, ಆರೋಪಿಗಳ ಬಂಧನ ಆಗದಿರುವುದನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿಕುಮಾರಸ್ವಾಮಿ ಸೇರಿದಂತೆ ಹಲವರು ಪ್ರಶ್ನಿಸಿದ್ದರು. ಕೊನೆಗೂ ಇಂದು ಎಸ್ಐಟಿ ಅಧಿಕಾರಿಗಳೂ ಇಬ್ಬರೂ ಆರೋಪಿಗಳನ್ನ ಬಂಧಿಸಿದ್ದಾರೆ.
ಇದನ್ನೂ ಓದಿ: ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ; ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆಯಲು ಎಸ್ಐಟಿ ಕಾರ್ಯತಂತ್ರ - Prajwal Revanna