ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಯ ವಿಶೇಷ ತನಿಖಾ ತಂಡ (ಎಸ್ಐಟಿ) ಸಂತ್ರಸ್ತರು ಹಾಗೂ ಬಾತ್ಮೀದಾರರ ನೆರವಿಗಾಗಿ ಸಹಾಯವಾಣಿ ಆರಂಭಿಸಿದೆ.
ಪ್ರಕರಣದಲ್ಲಿ ಇನ್ನೂ ಕೆಲ ಸಂತ್ರಸ್ತರಿರುವುದನ್ನ ಎಸ್ಐಟಿ ಅಧಿಕಾರಿಗಳು ತನಿಖೆಯ ವೇಳೆ ಪತ್ತೆಹಚ್ಚಿದ್ದಾರೆ. ಆದ್ದರಿಂದ ಈ ಪ್ರಕರಣದಲ್ಲಿ ಯಾರೇ ಸಂತ್ರಸ್ತರು ಅಥವಾ ಬಾತ್ಮೀದಾರರಿಗೆ ಕಾನೂನಿನ ನೆರವು, ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯ ಅಗತ್ಯವಿದ್ದಲ್ಲಿ ಸಹಾಯವಾಣಿ ಸಂಖ್ಯೆ 6360938947ಗೆ ಕರೆ ಮಾಡಬಹುದಾಗಿದೆ. ಸಂತ್ರಸ್ತರು ಅಥವಾ ಬಾತ್ಮೀದಾರ ವಿವರಗಳನ್ನು ಗೌಪ್ಯವಾಗಿರಿಸಲಾಗುವುದು ಎಂದು ಎಸ್ಐಟಿಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಬಂಧನಕ್ಕೆ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ: ಸಿಎಂ ಸಿದ್ದರಾಮಯ್ಯ - CM Siddaramaiah