ಬೆಂಗಳೂರು: ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ತನಿಖೆಯ ಅಗತ್ಯವಿರುವುದರಿಂದ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿದೆ. ಮೇ 2ರಂದು ಕೆ.ಆರ್.ನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮೇ 15ರಂದು ಎಸ್ಐಟಿ ಮೊದಲ ನೋಟಿಸ್ ನೀಡಿತ್ತು.
ಈ ನೋಟಿಸ್‌ಗೆ ಪ್ರತಿಯಾಗಿ ಪ್ರಕರಣದಲ್ಲಿ ತನಿಖೆಗೆ ಅಗತ್ಯವಿದ್ದರೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ತಾವು ಇರುವುದಾಗಿ ಪತ್ರದ ಮುಖೇನ ತಿಳಿಸಿದ್ದೀರಿ. ಪ್ರಕರಣದಲ್ಲಿ ನಿಮ್ಮ ವಿಚಾರಣೆ ಅಗತ್ಯವಿದ್ದು ಜೂನ್ 1ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರವರೆಗಿನ ಅವಧಿಯಲ್ಲಿ ನೀವು ತಿಳಿಸಿರುವ ವಿಳಾಸಕ್ಕೆ ತನಿಖಾಧಿಕಾರಿಗಳು ಬರುತ್ತಿದ್ದು, ಆ ಸಂದರ್ಭದಲ್ಲಿ ತಾವು ಹಾಜರಿರಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವೈದ್ಯಕೀಯ ತಪಾಸಣೆಗೆ ಬೌರಿಂಗ್ ಆಸ್ಪತ್ರೆಯಲ್ಲಿ ಸಿದ್ಧತೆ - Prajwal Revanna