ಬೆಂಗಳೂರು : ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು ಮಾಡಲು ವಿದೇಶಾಂಗ ವ್ಯವಹಾರ ಸಚಿವಾಲಯಕ್ಕೆ (ಎಂಇಎ) ಎಸ್ಐಟಿ ಪತ್ರ ಬರೆದಿರುವ ಮಾಹಿತಿ ಲಭ್ಯವಾಗಿದೆ.
ಅತ್ಯಾಚಾರ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈಗಾಗಲೇ ಬ್ಲ್ಯೂ ಕಾರ್ನರ್ ನೋಟಿಸ್ ಹೊರಡಿಸಲಾಗಿದ್ದರೂ ಇದುವರೆಗೂ ಪ್ರಜ್ವಲ್ ಸುಳಿವು ದೊರೆತಿಲ್ಲ.
ಶತಾಯಗತಾಯ ಬಂಧಿಸಬೇಕೆಂದು ಪಣತೊಟ್ಟಿರುವ ಎಸ್ಐಟಿ ಅಧಿಕಾರಿಗಳು ಕಳೆದ ಮೂರು ದಿನಗಳ ಹಿಂದಷ್ಟೇ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಪಡೆದಿದ್ದರು. ರಾಜತಾಂತ್ರಿಕ ಪಾಸ್ ಪೋರ್ಟ್ನಡಿ ವಿದೇಶಕ್ಕೆ ಹಾರಿರುವ ಪ್ರಜ್ವಲ್ ಪಾಸ್ಪೋರ್ಟ್ ರದ್ದು ಕೋರಿ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ ನ್ಯಾಯಾಲಯ - Prajwal Revanna Arrest Warrant