ETV Bharat / state

ಶಾಸಕರ ಗದ್ದಲದ ನಡುವೆ ವಿಧಾನಸಭೆಯಲ್ಲಿ 6 ವಿಧೇಯಕಗಳು ಅಂಗೀಕಾರ - Karnataka Assembly Session

ಬಿಜೆಪಿ-ಜೆಡಿಎಸ್ ಶಾಸಕರ ಗದ್ದಲದ ನಡುವೆ ರಾಜ್ಯ ವಿಧಾನಸಭೆಯಲ್ಲಿ ಗುರುವಾರ ಆರು ವಿಧೇಯಕಗಳು ಅಂಗೀಕಾರಗೊಂಡವು.

KARNATAKA ASSEMBLY
ವಿಧಾನಸಭೆ (ETV Bharat)
author img

By ETV Bharat Karnataka Team

Published : Jul 25, 2024, 2:26 PM IST

ಬೆಂಗಳೂರು: 2024ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ, ಪ್ರಾಚೀನ ಹಾಗೂ ಐತಿಹಾಸಿಕ ಸ್ಮಾರಕ ದತ್ತು ತೆಗೆದುಕೊಳ್ಳಲು ಅವಕಾಶ ನೀಡುವ 2024ನೇ ಸಾಲಿನ ಕರ್ನಾಟಕ ಪ್ರಾಚೀನ, ಐತಿಹಾಸಿಕ ಸ್ಮಾರಕಗಳು, ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ (ತಿದ್ದುಪಡಿ) ವಿಧೇಯಕ ಸೇರಿದಂತೆ 6 ವಿಧೇಯಕಗಳು ವಿಧಾನಸಭೆಯಲ್ಲಿ ಇಂದು ಅಂಗೀಕಾರಗೊಂಡವು.

ಮುಡಾ ಹಗರಣದ ಬಗ್ಗೆ ಸದನದಲ್ಲಿ ಬಿಜೆಪಿ-ಜೆಡಿಎಸ್ ಶಾಸಕರ ಗದ್ದಲದ ನಡುವೆ ನಡೆದ ಶಾಸನ ರಚನಾ ಕಲಾಪದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ವಿಧೇಯಕ ಕುರಿತು ಮಾತನಾಡಿ, ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕ ಮತ್ತು ಪುರಾತತ್ವ ಸ್ಥಳಗಳ ಸಂರಕ್ಷಣೆ ಮಾಡುವ ಕರ್ತವ್ಯವಿದೆ. ಸ್ಮಾರಕಗಳನ್ನು ದತ್ತು ತೆಗೆದುಕೊಳ್ಳಲು ಈ ವಿಧೇಯಕ ಅವಕಾಶ ಮಾಡಿಕೊಡಲಿದೆ. ಸೊಸೈಟಿ, ಸಹಕಾರ ಸಂಘಗಳು, ಟ್ರಸ್ಟ್​​ಗಳು, ಸರ್ಕಾರೇತರ ಸಂಸ್ಥೆಗಳು ಆಸಕ್ತಿ ಉಳ್ಳ ವ್ಯಕ್ತಿಗಳನ್ನು ಸ್ಮಾರಕ ಪಟ್ಟಿಯಲ್ಲಿ ಸೇರಿಸುವುದಕ್ಕೆ ಅರ್ಹರಾಗಿಸುವುದಕ್ಕೆ ತಿದ್ದುಪಡಿ ತರಲಾಗಿದೆ ಎಂದು ಹೇಳಿದರು.

ನಂತರ ಸ್ಪೀಕರ್ 2024ನೇ ಸಾಲಿನ ಕರ್ನಾಟಕ ಪ್ರಾಚೀನ, ಐತಿಹಾಸಿಕ ಸ್ಮಾರಕಗಳು, ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ (ತಿದ್ದುಪಡಿ) ವಿಧೇಯಕವನ್ನು ಮತಕ್ಕೆ ಹಾಕಿದಾಗ ಧ್ವನಿಮತದ ಒಪ್ಪಿಗೆ ದೊರೆಯಿತು.

ಸಮಾಜಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರ ಪರವಾಗಿ ಕಾನೂನು ಸಚಿವರು ಪರ್ಯಾಲೋಚಿಸಿದ 2024ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು, ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕಕ್ಕೂ ಸದನ ಒಪ್ಪಿಗೆ ನೀಡಿತು.

ವಿಧೇಯಕ ಕುರಿತು ಮಾತನಾಡಿದ ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ಅವರು, ಹೊರಗುತ್ತಿಗೆಯಲ್ಲಿ ಸಾಮಾಜಿಕ ನ್ಯಾಯವಿರಲಿಲ್ಲ. ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ತಿದ್ದುಪಡಿ ತರಲಾಗಿದ್ದು, ಸದನ ಒಪ್ಪಿಗೆ ನೀಡಬೇಕೆಂದು ಇದಕ್ಕೂ ಮುನ್ನ ಕೋರಿದ್ದರು.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಮಂಡಿಸಿದ 2024ನೇ ಸಾಲಿನ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೂ ಸದನದ ಒಪ್ಪಿಗೆ ಸಿಕ್ಕಿತು.

ವಿಧೇಯಕ ಕುರಿತು ಮಾತನಾಡಿದ ರಾಮಲಿಂಗಾರೆಡ್ಡಿ, ಯಲ್ಲಮ್ಮ ದೇವಾಲಯಕ್ಕೆ ಕರ್ನಾಟಕ, ಗೋವಾ, ಆಂಧ್ರ, ತೆಲಂಗಾಣದಿಂದ ವಾರ್ಷಿಕ 80 ಲಕ್ಷದಿಂದ 1 ಕೋಟಿ ಭಕ್ತರು ಬರುತ್ತಾರೆ. ಹೀಗಾಗಿ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಮತ್ತು ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಸ್ವತಂತ್ರ ಶಾಸನದ ಪ್ರಾಧಿಕಾರದ ರಚನೆಗೆ ಉಪಂಧ ಕಲ್ಪಿಸಲು ಈ ವಿಧೇಯಕವನ್ನು ತರಲಾಗಿದೆ. ರಾಜ್ಯಮಟ್ಟದಲ್ಲಿ ಒಂದು ಸಮಿತಿ, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇನ್ನೊಂದು ಸಮಿತಿ ಕಾರ್ಯ ನಿರ್ವಹಿಸಲಿದೆ. ಆ ಮೂಲಕ ದೇವಸ್ಥಾನದ ಅಭಿವೃದಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಮಂಡಿಸಿದ 2024ನೇ ಸಾವಲಿನ ಕರ್ನಾಟಕ ಭೂ ಕಂದಾಯ 2ನೇ ತಿದ್ದುಪಡಿ ವಿಧೇಯಕಕ್ಕೂ ಸದನದಲ್ಲಿ ಒಪ್ಪಿಗೆ ದೊರೆಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಂಡಿಸಿದ 2024ನೇ ಸಾಲಿನ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕಕ್ಕೂ ಸದನ ಅಂಗೀಕಾರ ನೀಡಿತು. ಬಳಿಕ ತೋಟಗಾರಿಕಾ ಸಚಿವ ಮಲ್ಲಿಕಾರ್ಜುನ ಅವರ ಪರವಾಗಿ ಕಾನೂನು ಸಚಿವರು ಮಂಡಿಸಿದ 2024ನೇ ಸಾಲಿನ ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣಾ) (ತಿದ್ದುಪಡಿ) ವಿಧೇಯಕಕ್ಕೂ ಸದನದಲ್ಲಿ ಒಪ್ಪಿಗೆ ಪಡೆದುಕೊಳ್ಳಲಾಯಿತು.

ಇದನ್ನೂ ಓದಿ: ಮುಡಾ ಸದ್ದು: ಉಭಯ ಸದನದಲ್ಲಿ ಬಿಜೆಪಿ ಜೆಡಿಎಸ್ ಧರಣಿ ಮುಂದುವರಿಕೆ - MUDA scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.