ETV Bharat / state

ದೆಹಲಿ ಕೆಂಪುಕೋಟೆ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ರಾಜ್ಯದ ಆರು ಮಂದಿ ಗ್ರಾ.ಪಂ ಅಧ್ಯಕ್ಷರು - Independence Day - INDEPENDENCE DAY

ದೆಹಲಿಯ ಕೆಂಪುಕೋಟೆ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಆರು ಮಂದಿ ಗ್ರಾಮ ಪಂಚಾಯತ್​ ಅಧ್ಯಕ್ಷರಿಗೆ ಆಹ್ವಾನ ನೀಡಲಾಗಿದೆ. ಇವರನ್ನು ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ.

GRAM PANCHAYAT PRESIDENTS  INDEPENDENCE DAY CELEBRATIONS  BENGALURU
ರಾಜ್ಯದ ಆರು ಮಂದಿ ಗ್ರಾಪಂ ಅಧ್ಯಕ್ಷರಿಗೆ ಆಹ್ವಾನ (ETV Bharat)
author img

By ETV Bharat Karnataka Team

Published : Aug 14, 2024, 1:39 PM IST

ಬೆಂಗಳೂರು : ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿ ಆಮಂತ್ರಣಗೊಂಡಿದ್ದು, ಇವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗೆದರೆ ಗ್ರಾಮ ಪಂಚಾಯತ್​ ಅಧ್ಯಕ್ಷೆ ಕುಮಾರಿ ಲಕ್ಷ್ಮಿನರಸಮ್ಮ, ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪೆರುವಾಯಿ ಗ್ರಾಮ ಪಂಚಾಯತ್​ ಅಧ್ಯಕ್ಷೆ ನಫೀಜಾ, ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಕಮತನೂರು ಗ್ರಾಮ ಪಂಚಾಯತ್​ ಅಧ್ಯಕ್ಷೆ ರಾಜೇಶ್ವರಿ ಗುತ್ತಿ, ಕಲಬುರಗಿ ಜಿಲ್ಲೆಯ ತಾಜ್ ಸುಲ್ತಾನಪುರ ಗ್ರಾಮ ಪಂಚಾಯತ್​ ಉಪಾಧ್ಯಕ್ಷೆ ಜಯಶ್ರೀ, ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಗ್ರಾಮ ಪಂಚಾಯತ್​ ಅಧ್ಯಕ್ಷೆ ದೇವಿ ಪಿ.ಟಿ ಮತ್ತು ಚಾಮರಾಜನಗರ ತಾಲ್ಲೂಕಿನ ಅಟ್ಟಗುಳಿಪುರ ಗ್ರಾಮ ಪಂಚಾಯತ್​ ಅಧ್ಯಕ್ಷೆ ಶಿವಮ್ಮ ಅವರು ನಾಳೆ ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿರುವ ವಿಶೇಷ ಆಹ್ವಾನಿತರಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ. ರಮೇಶ್ ನೇತೃತ್ವದಲ್ಲಿ ಈ ತಂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದೆ. ಈ ಆರು ಮಂದಿ ಉತ್ತಮ ಆಡಳಿತ, ಪರಿಸರ ಕಾಳಜಿ, ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆ, ತೆರಿಗೆ ಸಂಗ್ರಹಣೆ, ನೀರು ಸರಬರಾಜು ಮುಂತಾದ ಸಾಮಾಜಿಕ ಜವಾಬ್ದಾರಿಗಳನ್ನು ಅತ್ಯಂತ ಬದ್ಧತಾಪೂರ್ವಕವಾಗಿ ನಿರ್ವಹಿಸಿದ್ದಾರೆ. ಹೀಗಾಗಿ ಈ ಗೌರವಕ್ಕೆ ಪಾತ್ರರಾಗಿರುವುದು ಕರ್ನಾಟಕಕ್ಕೆ ಹೆಮ್ಮೆ ತಂದಿದೆ ಎಂದು ಸಚಿವರು ತಿಳಿಸಿದ್ದಾರೆ.

ಓದಿ: ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಸಿಂಡಿಕೇಟ್ ಸದಸ್ಯರನ್ನಾಗಿ ಆರು ಮಂದಿ ನಾಮನಿರ್ದೇಶನ ಮಾಡಿದ ಸರ್ಕಾರ - Syndicate Members Nominated

ETV Bharat Logo

Copyright © 2025 Ushodaya Enterprises Pvt. Ltd., All Rights Reserved.