ETV Bharat / state

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಮಂದಿ ಸಾವು; ದಾಂಡೇಲಿಯಲ್ಲಿ ದುರಂತ - Kali River Tragedy - KALI RIVER TRAGEDY

ಉತ್ತರಕನ್ನಡ ಜಿಲ್ಲೆಯಲ್ಲಿ ದುರಂತ ಘಟನೆ ನಡೆದಿದೆ. ಕಾಳಿ ನದಿಯಲ್ಲಿ ಈಜಲು ತೆರಳಿದ್ದ ಆರು ಜನ ಸಾವನ್ನಪ್ಪಿದ್ದಾರೆ.

SIX PEOPLE DROWNED  UTTARA KANNADA  SIX PEOPLE DIED
ಕಾಳಿ ನದಿಯಲ್ಲಿ ಮುಳುಗಿ ಆರು ಮಂದಿ ಸಾವು!
author img

By ETV Bharat Karnataka Team

Published : Apr 21, 2024, 6:50 PM IST

ಕಾರವಾರ (ಉತ್ತರ ಕನ್ನಡ): ಪ್ರವಾಸಕ್ಕೆ ಆಗಮಿಸಿದ್ದ ಒಂದೇ ಕುಟುಂಬದ ಆರು ಮಂದಿ ಕಾಳಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ದಾಂಡೇಲಿಯ ಅಕೊರ್ಡಾ ಬಳಿ ಭಾನುವಾರ ನಡೆದಿದೆ.

ಮೃತರನ್ನು ಹುಬ್ಬಳ್ಳಿ ಮೂಲದ ನಜೀರ ಅಹ್ಮದ್ (40), ಅಲ್ಛೀಯಾ ಅಹ್ಮದ್ (10), ಮೋಹಿನ್ ಅಹ್ಮದ್ (6), ರೇಷಾ ಉನ್ನಿಸಾ (38), ಇಫ್ರಾ‌ ಅಹ್ಮದ್ (15), ಅಬೀದ್ ಅಹ್ಮದ್ (12) ಎಂದು ಗುರುತಿಸಲಾಗಿದೆ.

ಒಟ್ಟು ಎಂಟು ಮಂದಿ ಭಾನುವಾರ ರಜೆ ಇರುವ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ಆಗಮಿಸಿದ್ದರು. ಇಬ್ಬರು ಮಹಿಳೆಯರನ್ನು ಹೊರತುಪಡಿಸಿ ಮಕ್ಕಳು ಸೇರಿ ಉಳಿದ ಆರು ಮಂದಿ ಕಾಳಿ ನದಿಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ಕಾಲು ಜಾರಿ ನದಿಯಲ್ಲಿ ಮುಳುಗಿದ್ದು ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಉಳಿದ ಇಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಸದ್ಯ ಮೃತದೇಹಗಳನ್ನು ದಾಂಡೇಲಿ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಓದಿ: ವ್ಯಾನ್​​ಗೆ ಟ್ರಕ್​ ಡಿಕ್ಕಿ: ಮದುವೆ ಮುಗಿಸಿ ವಾಪಸ್​ ಬರುತ್ತಿದ್ದ 9 ಜನರ ದುರ್ಮರಣ - Rajasthan Road Accident

ETV Bharat Logo

Copyright © 2025 Ushodaya Enterprises Pvt. Ltd., All Rights Reserved.