ETV Bharat / state

ರಾಜ್ಯದಲ್ಲಿ ಶೀಘ್ರ ಡಬಲ್ ಎಂಜಿನ್ ಸರ್ಕಾರ: ರಮೇಶ್​ ಜಾರಕಿಹೊಳಿ ಭವಿಷ್ಯ - Lok Sabha Election 2024 - LOK SABHA ELECTION 2024

ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯಿತು.

Ramesh Jarkiholi spoke
ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ರಮೇಶ ಜಾರಕಿಹೊಳಿ ಮಾತನಾಡಿದರು.
author img

By ETV Bharat Karnataka Team

Published : Apr 13, 2024, 5:28 PM IST

Updated : Apr 13, 2024, 6:06 PM IST

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.

ಬೆಳಗಾವಿ: ರಾಜ್ಯದಲ್ಲಿ ಆದಷ್ಟು ಶೀಘ್ರದಲ್ಲಿ ಡಬಲ್ ಇಂಜಿನ್ ಸರ್ಕಾರ ಮಾಡುತ್ತೇವೆ. ಎರಡು ಕಡೆ ನಮ್ಮ ಸರ್ಕಾರ ತಂದು ಅಭಿವೃದ್ಧಿ ಮಾಡುತ್ತೇವೆ ಎನ್ನುವ ಮೂಲಕ ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ ಆಗುತ್ತದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುಳಿವು ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಪತನ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಹಿಂದೆ ಜೆಡಿಎಸ್​- ಕಾಂಗ್ರೆಸ್​ ಸಮ್ಮಿಶ್ರ ಸರ್ಕಾರ ಬೀಳಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಮೇಶ್​ ಜಾರಕಿಹೊಳಿ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗುತ್ತೆ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

''ಕಾಂಗ್ರೆಸ್ ಸರ್ಕಾರದ ಸುಳ್ಳು ಭರವಸೆಗೆ ಬಲಿಯಾಗಬೇಡಿ. ಗ್ಯಾರಂಟಿ ನಂಬಿ ಕೆಟ್ಟ ಸರ್ಕಾರವನ್ನ ತಂದಿದ್ದೀರಿ. ಚುನಾವಣೆ ನಂತರ ಕರೆಂಟ್ ಹೋಗುತ್ತೆ, ಬಸ್ ನಿಲ್ಲುತ್ತೆ, ಎರಡು ಸಾವಿರ ರೂ. ಕೂಡ ಬಂದ್ ಆಗುತ್ತದೆ'' ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ರಮೇಶ್ ಜಾರಕಿಹೊಳಿ‌ ವಾಗ್ದಾಳಿ ನಡೆಸಿದರು.

ನೀರಾವರಿ ಯೋಜನೆ ಮಾಡುವ ಗುರಿ: ಧನಂಜಯ ಜಾಧವ್, ಸಂಜಯ್ ಪಾಟೀಲ್ ಮೂಲಕ ಹೇಳಿಸುತ್ತಿದ್ದೇನೆ. ನನ್ನ ತಮ್ಮನಿಗೆ ಮಾತು ಕೊಟ್ಟಿದ್ದೇನೆ ಅದಕ್ಕೆ ಮಾತಾಡ್ತಿಲ್ಲ. ಹೆದರಿ ಮಾತಾಡೋದನ್ನು ಬಿಟ್ಟಿಲ್ಲ. ಚುನಾವಣೆ ಫಲಿತಾಂಶದ ಬಳಿಕ ಎಲ್ಲವನ್ನೂ ಮಾತಾಡ್ತೇನಿ. ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ಇರೋದ್ರಿಂದ ಬೆಳಗಾವಿ ಪಶ್ಚಿಮ ಭಾಗದಲ್ಲಿ ನೀರಾವರಿ ಯೋಜನೆ ಮಾಡುವ ಗುರಿಯಿದೆ ಎಂದು ತಿಳಿಸಿದರು.

ಬೆಳಗಾವಿ ಗ್ರಾಮೀಣ ಭಾಗದಲ್ಲಿ 25 ಸಾವಿರ ಲೀಡ್ ಬರುತ್ತದೆ. ಶೆಟ್ಟರ್ ಅವರು ಎರಡರಿಂದ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗುತ್ತಾರೆ. ಹುಬ್ಬಳ್ಳಿ, ಧಾರವಾಡ, ಬೆಳಗಾವಿ ತ್ರಿವಳಿ ನಗರ ಮಾಡುತ್ತಾರೆ. ವಿಮಾನ ನಿಲ್ದಾಣ ಅಭಿವೃದ್ಧಿಗೆ ಪ್ರಯತ್ನ ಮಾಡುತ್ತೇವೆ. ಬೆಂಗಳೂರು ಚೆನ್ನೈ ಮಾದರಿ ಇಂಡಸ್ಟ್ರಿ ಕಾರಿಡಾರ್ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಮಾಜಿ ಶಾಸಕ ಸಂಜಯ ಪಾಟೀಲ್ ಮಾತನಾಡಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಾವೇಶ ನೋಡಿದರೆ, ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರು ಸೇರಿರೋದನ್ನು ನೋಡಿದರೆ ಸಚಿವೆ ಹೆಬ್ಬಾಳ್ಕರ್ ಗೆ ನಿದ್ದೆ ಬರಲ್ಲ. ಸಭೆಯಲ್ಲಿ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಬಂದಿರೋದು ನೋಡಿದ್ರೆ ಕಷ್ಟ ಆಗುತ್ತದೆ. ಇವತ್ತು ನಿದ್ದೆ ಮಾತ್ರೆ ತಗೊಂಡು ಮಲಗಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ಅಭ್ಯರ್ಥಿ ಜಗದೀಶ್​ ಶೆಟ್ಟರ್ ಮಾತನಾಡಿ, ನಾವು ನಮ್ಮ ನಾಯಕರು ಮೋದಿಯವರು ಅಂತಾ ಹೇಳುತ್ತೇವೆ. ಕಾಂಗ್ರೆಸ್ ನವರಿಗೆ ಪ್ರಧಾನಿ ಯಾರು ಅಂತಾ ಗೊತ್ತಿಲ್ಲ. ಐಎನ್‌ಡಿ ಒಕ್ಕೂಟ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಅಂತಾ ಒಪ್ಪುತ್ತಿಲ್ಲ. ಕಾಂಗ್ರೆಸ್​​ನವರು ಇಂದು ವಿಶ್ವಾಸ ಕಳೆದುಕೊಂಡಿದ್ದಾರೆ. ಬಿಜೆಪಿಗೆ ದಿನೇ ದಿನೇ ಬೆಂಬಲ ಹೆಚ್ಚಾಗುತ್ತಿದೆ. ಎಲ್ಲರನ್ನೂ ಮನೆಗೆ ಕಳುಹಿಸುವ ಮೋದಿಯವರ ಸುಂಟರಗಾಳಿ ಹೆಚ್ಚಾಗುತ್ತಿದೆ ಎಂದರು.

ಪಾಕ್ ಆಕ್ರಮಿತ ಕಾಶ್ಮೀರ್​ ವಾಪಸ್: ಜಮ್ಮು ಕಾಶ್ಮೀರದಲ್ಲಿ ಇನ್ನೊಂದು ಕಪ್ಪು ಚುಕ್ಕೆ ಇದೆ ಪಿಒಕೆ. 400 ಸೀಟ್ ಗೆದ್ದ ಬಳಿಕ ಪಾಕ್ ಆಕ್ರಮಿತ ಕಾಶ್ಮೀರ ಕೂಡ ವಾಪಸ್ ಪಡೆಯುತ್ತಾರೆ‌. ಇಡೀ ದೇಶದಲ್ಲಿರುವ ಎಲ್ಲ ನಾಯಕರಿಗೆ ಒಂದೇ ಕಾನೂನು ಮಾಡ್ತಾರೆ. ಈ ಕಾರಣಕ್ಕೆ ದೇಶಕ್ಕೆ ಇಂದು ನರೇಂದ್ರ ಮೋದಿಯವರ ಅವಶ್ಯಕತೆಯಿದೆ. ಬೆಳಗಾವಿ ಲೋಕಸಭಾ ಕ್ಷೇತ್ರ ಮಾದರಿ ಮಾಡಲು ವಚನ ಕೊಡುತ್ತೇನೆ. ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಲು ಶಕ್ತಿ ಕೊಡಿ ಎಂದು ಮನವಿ ಮಾಡಿದರು.

ನಾಮಪತ್ರ ಸಲ್ಲಿಕೆ: 17ರಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಎಲ್ಲರೂ ಆಗಮಿಸಿ ನನಗೆ ಶಕ್ತಿ ಕೊಡಿ. ಇಷ್ಟು ಜನ ಸೇರಿದ್ದು ಕಾಂಗ್ರೆಸ್​​ನವರಿಗೆ ಎಚ್ಚರಿಕೆ ಗಂಟೆಯಾಗಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಸುಳ್ಳು ಆಶ್ವಾಸನೆ ಕೊಡುತ್ತಾ ಹೋಗುತ್ತಿದೆ. ಚುನಾವಣೆ ಬಳಿಕ ಈ ಸರ್ಕಾರದ ಭವಿಷ್ಯ ಏನಾಗುತ್ತೆ ಹೇಳಲು ಬರಲ್ಲ. ಅದಕ್ಕಾಗಿ ಬಿಜೆಪಿ ಬೆಂಬಲಿಸಿ ಎಂದು ತಿಳಿಸಿದರು.

ಸಮಾವೇಶದಲ್ಲಿ ಸಂಸದೆ ಮಂಗಲ‌ ಅಂಗಡಿ, ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ, ಬಿಜೆಪಿ ಹಿರಿಯ ಮುಖಂಡ ಶಂಕರಗೌಡ ಪಾಟೀಲ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಸೇರಿದಂತೆ ಮತ್ತಿತರರು ಹಾಜರಿದ್ದರು.

ಇದನ್ನೂಓದಿ:ಡಾ. ಅಂಜಲಿ ನಿಂಬಾಳ್ಕರ್​ಗೆ ಸಿಂಗಾರ ಪ್ರಸಾದ ನೀಡಿದ ಸೋಡಿಗದ್ದೆ ಮಹಾಸತಿ - Anjali Nimbalkar

Last Updated : Apr 13, 2024, 6:06 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.