ETV Bharat / state

ಕೈತಪ್ಪಿದ ನೈರುತ್ಯ ಶಿಕ್ಷಕರ ಕ್ಷೇತ್ರದ ಟಿಕೆಟ್: ಜೆಡಿಎಸ್ ಸಿಟ್ಟಿಂಗ್ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಹರೀಶ್ ಆಚಾರ್ಯ ಕಣಕ್ಕೆ - SR Harish Acharya - SR HARISH ACHARYA

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಡಾ‌.ಎಸ್.ಆರ್.ಹರೀಶ್ ಆಚಾರ್ಯ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಚುನಾವಣೆ ಕಣಕ್ಕಿಳಿದಿದ್ದಾರೆ.

ಹರೀಶ್ ಆಚಾರ್ಯ
ಹರೀಶ್ ಆಚಾರ್ಯ (ETV Bharat)
author img

By ETV Bharat Karnataka Team

Published : May 14, 2024, 7:57 PM IST

ಮಂಗಳೂರು: ಹಾಲಿ ಜೆಡಿಎಸ್ ವಿಧಾನಪರಿಷತ್ ಸದಸ್ಯತ್ವ ಹೊಂದಿರುವ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಚುನಾವಣಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಡಾ‌.ಎಸ್.ಆರ್.ಹರೀಶ್ ಆಚಾರ್ಯ ಅವರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ‌.

ಡಾ.ಎಸ್.ಆರ್.ಹರೀಶ್ ಆಚಾರ್ಯ ಅವರು ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇವರೇ ಬಿಜೆಪಿ ಅಭ್ಯರ್ಥಿ ಎಂದು ಅಂತಿಮವಾಗುವ ಹಂತದಲ್ಲಿತ್ತು‌. ಆದರೆ, ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಲಿ ಎಂಎಲ್​ಸಿ ಎಲ್.ಭೋಜೇಗೌಡರಿಗೆ ನೀಡಿದ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ಡಾ.ಎಸ್.ಆರ್.ಹರೀಶ್ ಆಚಾರ್ಯರ ಟಿಕೆಟ್ ಕೈತಪ್ಪಿತ್ತು‌. ಆದ್ದರಿಂದ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ‌.

ಈ ಬಗ್ಗೆ ನಗರದ ಖಾಸಗಿ ಹೊಟೇಲ್​ನಲ್ಲಿ ಡಾ.ಎಸ್.ಆರ್.ಹರೀಶ್ ಆಚಾರ್ಯ ಮಾತನಾಡಿ, ತಾನು ಯಾವುದೇ ಪಕ್ಷದ ವಿರುದ್ಧ ಬಂಡಾಯ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿಲ್ಲ. ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷ ರಾಜಕಾರಣಕ್ಕೆ ಅವಕಾಶವಿಲ್ಲ. ಈ ಚುನಾವಣೆ ಪಕ್ಷ ಚುನಾವಣೆಗಿಂತ ಬೇರೆಯಾಗಿದೆ. ನಾನು ಕರಾವಳಿ ಜಿಲ್ಲೆಗಳ ಶಿಕ್ಷಕರ ಬೆಂಬಲದೊಂದಿಗೆ ಸ್ಪರ್ಧಿಸುತ್ತಿದ್ದೇನೆ‌.

ನೈರುತ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಕರಾವಳಿ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು, ಪದವೀಧರರು ಇದ್ದರೂ, ಈ ಭಾಗದ ಅಭ್ಯರ್ಥಿಗಳ ಪರಿಗಣಿಸದಿರುವುದು ನೇರವಾಗಿ ಕರಾವಳಿ ಜಿಲ್ಲೆಗಳ ಶಿಕ್ಷಕರು, ಪದವೀಧರರ ಅಸ್ತಿತ್ವವನ್ನೇ ನಿರಾಕರಿಸಿದಂತಾಗಿದೆ. ಮೈತ್ರಿ ಇನ್ನಿತರ ಕಾರಣಗಳನ್ನು ಮುಂದಿಟ್ಟು ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ತೊಡಕು ಉಂಟು ಮಾಡಬಾರದು ಎಂದು ಎಸ್.ಆರ್. ಹರೀಶ್ ಆಚಾರ್ಯ ಹೇಳಿದರು.

ಇದನ್ನೂ ಓದಿ: ಬೆಳಗಾವಿ ಜಿಲ್ಲೆಗೆ 247 ಕೋಟಿ ಬರ ಪರಿಹಾರ ಬಿಡುಗಡೆ: ಡಿಸಿ ನಿತೇಶ್​ ಪಾಟೀಲ ಮಾಹಿತಿ - Drought Relief Fund

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.