ETV Bharat / state

ಸಂಕ್ರಾಂತಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ಎಕ್ಸ್​ಪ್ರೆಸ್ ರೈಲುಗಳ ಸಂಚಾರ - SOUTH WESTERN RAILWAY

ಪೊಂಗಲ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈರುತ್ಯ ರೈಲ್ವೆ ವಿಶೇಷ ಎಕ್ಸ್​ಪ್ರೆಸ್​​ ರೈಲುಗಳನ್ನ ಓಡಿಸಲಿದೆ.

RAILWAY STATION
ರೈಲು ನಿಲ್ದಾಣ (ETV Bharat)
author img

By ETV Bharat Karnataka Team

Published : Jan 7, 2025, 10:36 PM IST

ಹುಬ್ಬಳ್ಳಿ : ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಕೆಎಸ್ಆರ್ ಬೆಂಗಳೂರು, ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್, ಎಸ್ಎಂವಿಟಿ ಬೆಂಗಳೂರು- ಟುಟಿಕೋರಿನ್- ಮೈಸೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ.

ರೈಲು ಸಂಖ್ಯೆ 07319/07320 ಕೆಎಸ್ಆರ್ ಬೆಂಗಳೂರು- ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ - ಕೆಎಸ್ಆರ್ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್ ರೈಲು (1 ಟ್ರಿಪ್)

ರೈಲು ಸಂಖ್ಯೆ 07319 ಕೆಎಸ್ಆರ್ ಬೆಂಗಳೂರು - ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 10, 2025 ರಂದು ಬೆಳಿಗ್ಗೆ 08:05 ಕ್ಕೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 02:40 ಕ್ಕೆ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ.

ಪುನಃ ಇದೆ ರೈಲು (07320) ಜನವರಿ 10, 2025 ರಂದು ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಮಧ್ಯಾಹ್ನ 03:40 ಕ್ಕೆ ಹೊರಟು, ಅದೇ ದಿನ ರಾತ್ರಿ 10:50 ಕ್ಕೆ ಕೆಎಸ್ಆರ್ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಅಂಬೂರು, ಗುಡಿಯಾಟ್ಟಂ, ಕಟಪಾಡಿ, ಶೋಲಿಂಗೂರ್, ಅರಕ್ಕೋಣಂ, ತಿರುವಳ್ಳೂರು ಮತ್ತು ಪೆರಂಬೂರಿನಲ್ಲಿ ನಿಲ್ಲಲಿದೆ.

ಈ ರೈಲು 1 ಎಸಿ- ತ್ರಿ ಟೈರ್, 11 ಸ್ಲೀಪರ್ ಕ್ಲಾಸ್, 2 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್ಎಲ್ಆರ್ ಡಿ ಸೇರಿದಂತೆ 17 ಬೋಗಿಗಳನ್ನು ಒಳಗೊಂಡಿರುತ್ತದೆ.

ರೈಲು ಸಂಖ್ಯೆ 06569/06570 ಎಸ್ಎಂವಿಟಿ ಬೆಂಗಳೂರು-ಟುಟಿಕೋರಿನ್-ಮೈಸೂರು ವಿಶೇಷ ಎಕ್ಸ್ ಪ್ರೆಸ್ ರೈಲು (1 ಟ್ರಿಪ್)

ರೈಲು ಸಂಖ್ಯೆ 06569 ಎಸ್ಎಂವಿಟಿ ಬೆಂಗಳೂರು-ಟುಟಿಕೋರಿನ್ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 10, 2025 ರಂದು ರಾತ್ರಿ 10:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಜನವರಿ 11, 2025 ರಂದು ಬೆಳಗ್ಗೆ 11:00 ಗಂಟೆಗೆ ಟ್ಯುಟಿಕೋರಿನ್ ತಲುಪಲಿದೆ. ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ನಾಮಕ್ಕಲ್, ಕರೂರ್, ದಿಂಡಿಗಲ್, ಮಧುರೈ, ವಿರುದುನಗರ, ಸಾತೂರ್ ಮತ್ತು ಕೋವಿಲ್ಪಟ್ಟಿಯಲ್ಲಿ ನಿಲ್ಲಲಿದೆ.

ರೈಲು ಸಂಖ್ಯೆ 06570 ಜನವರಿ 11, 2025 ರಂದು ಮಧ್ಯಾಹ್ನ 01:00 ಕ್ಕೆ ಟುಟಿಕೋರಿನ್​ನಿಂದ ಹೊರಟು, ಜನವರಿ 12, 2025 ರಂದು ಬೆಳಗ್ಗೆ 06:30ಕ್ಕೆ ಮೈಸೂರಿಗೆ ತಲುಪಲಿದೆ. ಈ ರೈಲು ಕೋವಿಲ್ಪಟ್ಟಿ, ಸಾತೂರ್, ವಿರುದುನಗರ, ಮಧುರೈ, ದಿಂಡಿಗಲ್, ಕರೂರ್, ನಾಮಕ್ಕಲ್, ಸೇಲಂ, ಬಂಗಾರಪೇಟೆ, ಕೃಷ್ಣರಾಜಪುರಂ, ಕೆಎಸ್ಆರ್ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ರೈಲು 13 ಎಸಿ ತ್ರಿ ಟೈರ್, 3 ಸ್ಲೀಪರ್ ಕ್ಲಾಸ್, 2 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಲಗೇಜ್ / ಜನರೇಟರ್ / ಬ್ರೇಕ್ ವ್ಯಾನ್​ಗಳು ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿರುತ್ತದೆ.

ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.

ಇದನ್ನೂ ಓದಿ : ಹುಬ್ಬಳ್ಳಿ-ಕನ್ಯಾಕುಮಾರಿ ನಡುವೆ ವಿಶೇಷ ರೈಲು: ಕುಂಭಮೇಳಕ್ಕಾಗಿ ಮೈಸೂರಿನಿಂದಲೂ ಟ್ರೇನ್ - SPECIAL TRAIN SERVICE

ETV Bharat Logo

Copyright © 2025 Ushodaya Enterprises Pvt. Ltd., All Rights Reserved.