ಮೈಸೂರು: ಆಷಾಢ ಮಾಸದ ಕೊನೆಯ ಹಾಗೂ ನಾಲ್ಕನೇ ಶುಕ್ರವಾರವಾದ ಇಂದು ನಾಡಿನ ಆರಾಧ್ಯ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿಗೆ ವಿಶೇಷ ಸಿಂಹವಾಹಿನಿ ಅಲಂಕಾರ ಮಾಡಲಾಗಿತ್ತು. ಅಪಾರ ಸಂಖ್ಯೆಯ ಭಕ್ತರು ದೇವಿಯ ದರ್ಶನ ಪಡೆದರು.
ಆಷಾಢ ಮಾಸದ ನಾಲ್ಕು ಶುಕ್ರವಾರದಂದು ದೇವಾಲಯದ ಒಳಗೆ ಹಾಗೂ ಹೊರಗೆ ವಿಶೇಷ ಅಲಂಕಾರ ಮಾಡುವುದು ವಾಡಿಕೆ.

ಬೆಳಗ್ಗೆ 3.30ಕ್ಕೆ ದೇವಳದ ಒಳಗೆ ಚಾಮುಂಡೇಶ್ವರಿ ಮೂಲ ಮೂರ್ತಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ನೆರವೇರಿಸಿದ ಬಳಿಕ ಸಿಂಹವಾಹಿನಿ ಅಲಂಕಾರ ಮಾಡಲಾಯಿತು. ಬೆಳಗ್ಗೆ 5.30ರಿಂದ ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 9.30ಕ್ಕೆ ಮಹಾಮಂಗಳಾರತಿ ನೆರವೇರಿತು. ರಾತ್ರಿ 10 ಗಂಟೆಯವರೆಗೆ ಸಾರ್ವಜನಿಕರಿಗೆ ದರ್ಶನ ವ್ಯವಸ್ಥೆ ಮಾಡಲಾಗಿದೆ.
ದೇವಿಯ ದರ್ಶನ ಪಡೆದ ಗಣ್ಯರು: ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಹೆಚ್.ಡಿ.ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗು ಚಲನಚಿತ್ರ ನಟರು ಆಗಮಿಸಿ ದೇವಿಯ ದರ್ಶನ ಪಡೆದರು.
ಇದನ್ನೂ ಓದಿ: ಸತತ ಮಳೆಯಿಂದ ಜಲಾಶಯಗಳ ನೀರಿನ ಮಟ್ಟ ಏರಿಕೆ: ತುಂಬಿದ ಭದ್ರಾ ಅಣೆಕಟ್ಟೆ ಸುತ್ತ 30 ದಿನಗಳ ನಿಷೇಧಾಜ್ಞೆ - Dams Water Level