ETV Bharat / state

ಹುಬ್ಬಳ್ಳಿಯಿಂದ ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ವಿಶೇಷ ಬಸ್​ ಸೇವೆ - SPECIAL BUS FOR SAVADATTI TEMPLE

ಹುಣ್ಣಿಮೆ ಹಾಗೂ ಪ್ರಮುಖ ದಿನಗಳಂದು ಸವದತ್ತಿ ಯಲ್ಲಮ್ಮ ದೇವಿ ದೇಗುಲಕ್ಕೆ ತೆರಳುವ ಭಕ್ತರಿಗಾಗಿ ಹುಬ್ಬಳ್ಳಿಯಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

special bus
ಯಲ್ಲಮ್ಮನ ಗುಡ್ಡ, ಬಸ್​ಗಳು (ETV Bharat)
author img

By ETV Bharat Karnataka Team

Published : 3 hours ago

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ನಾಳೆ (ಭಾನುವಾರ) ಹುಣ್ಣಿಮೆಯಂದು ಮತ್ತು ಮುಂಬರುವ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರದಂದು ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್​​ಗಳ ವ್ಯವಸ್ಥೆ ಮಾಡಲಾಗಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಳೆದ ಶೀಗೆ ಹುಣ್ಣಿಮೆ, ದೀಪಾವಳಿ ಅಮಾವಾಸ್ಯೆ ಹಾಗೂ ನಂತರದ ಹುಣ್ಣಿಮೆಗಳ ಸಮಯದಲ್ಲಿ ಸವದತ್ತಿಗೆ ಬಸ್​ ಸೌಲಭ್ಯ ಕಲ್ಪಿಸಲಾಗಿತ್ತು. ಈ ವಿಶೇಷ ನೇರ ಬಸ್​​ಗಳಿಗೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ. ಬಸ್​ಗ​​ಳಿಂದ ಸಾವಿರಾರು ಭಕ್ತರಿಗೆ ಬಹಳಷ್ಟು ಅನುಕೂಲವಾಗಿದೆ. ಬರುವ ಹುಣ್ಣಿಮೆಯ ದಿನ, ಮಂಗಳವಾರ ಹಾಗೂ ಶುಕ್ರವಾರದಂದು ಕೂಡ ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಹೆಚ್ಚುವರಿ ಬಸ್​​ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರಿಂದ ಕೋರಿಕೆ ಬಂದಿತ್ತು ಎಂದು ತಿಳಿಸಿದ್ದಾರೆ.

ಜನರ ಪ್ರತಿಕ್ರಿಯೆ ಗಮನಿಸಿ ಬಸ್​ ಮುಂದುವರಿಕೆ: ಭಕ್ತರು, ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹುಣ್ಣಿಮೆಯ ದಿನ ಡಿಸೆಂಬರ್ 15ರಂದು ಭಾನುವಾರ ಹಾಗೂ ಮುಂದಿನ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರಗಳಂದು ಬಸ್​ಗಳು ಸಂಚರಿಸಲಿವೆ. ಅಂದರೆ, ಡಿಸೆಂಬರ್ 17, 20, 24 ಹಾಗೂ 27ರಂದು ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ನೇರ ಬಸ್​​​ ವ್ಯವಸ್ಥೆ ಮಾಡಲಾಗಿದೆ. ಈ ಬಸ್​​ಗಳು ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣದಿಂದ ಹೊರಡಲಿವೆ. ಸಾರ್ವಜನಿಕರ ಪ್ರತಿಕ್ರಿಯೆ ಗಮನಿಸಿ ಈ ವಿಶೇಷ ಬಸ್​ ವ್ಯವಸ್ಥೆಯನ್ನು ಮುಂದುವರೆಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿನ ಪ್ರಮುಖ ತೀರ್ಮಾನಗಳೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.