ETV Bharat / state

ಚುನಾವಣಾ ನೀತಿ ಸಂಹಿತೆ; ಅನುಮಾನಾಸ್ಪದ ವಹಿವಾಟು ಕಂಡುಬಂದ್ರೆ ಬ್ಯಾಂಕ್​​ಗಳು ಎಲೆಕ್ಷನ್​ ಕಮೀಷನ್​ ಗಮನಕ್ಕೆ ತರಬೇಕು - Lok Sabha Election

ಲೋಕಸಭಾ ಚುನಾವಣೆ ನಿಮಿತ್ತ ಬ್ಯಾಂಕ್ ನೋಡಲ್ ಅಧಿಕಾರಿಗಳೊಂದಿಗೆ ವಿಶೇಷ ಆಯುಕ್ತ ಸೆಲ್ವಮಣಿ ಸಭೆ ನಡೆಸಿದರು.

Commissioner Selvamani held the meeting
ಬ್ಯಾಂಕ್ ನೋಡಲ್ ಅಧಿಕಾರಿಗಳೊಂದಿಗೆ ವಿಶೇಷ ಆಯುಕ್ತ ಸೆಲ್ವಮಣಿ ಸಭೆ ನಡೆಸಿದರು.
author img

By ETV Bharat Karnataka Team

Published : Mar 18, 2024, 7:28 PM IST

ಬೆಂಗಳೂರು: ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಅನುಮಾನಾಸ್ಪದ ವಹಿವಾಟುಗಳು ನಡೆಯುತ್ತಿರುವುದು ಕಂಡು ಬಂದಲ್ಲಿ ಕೂಡಲೇ ಪಾಲಿಕೆಯ ಚುನಾವಣಾ ವಿಭಾಗದ ಗಮನಕ್ಕೆ ತರಬೇಕು ಎಂದು ವಿಶೇಷ ಆಯುಕ್ತ ಸೆಲ್ವಮಣಿ ಅವರು ಬ್ಯಾಂಕ್ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ ನಿಮಿತ್ತ ನಡೆದ ಬ್ಯಾಂಕ್ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಒಂದೇ ಖಾತೆಯಿಂದ ಸುಮಾರು ಖಾತೆಗಳಿಗೆ ಹಣ ವರ್ಗಾವಣೆಯಾದರೆ ಅದರ ಮಾಹಿತಿಯನ್ನು ನಮಗೆ ಕೊಡಬೇಕು. ಮಾಹಿತಿ ಕೊಡದಿದ್ದರೆ ಮುಂದಿನ ದಿನಗಳಲ್ಲಿ ನೀವೇ ಜವಾಬ್ದಾರರಾಗುತ್ತೀರಿ. ಅಲ್ಲದೇ ಚುನಾವಣಾ ಆಯೋಗದಿಂದ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.

ಯಾವುದೇ ಪೂರ್ವ ನಿದರ್ಶನವಿಲ್ಲದೆ ಚುನಾವಣೆ ಪ್ರಕ್ರಿಯೆ ಸಮಯದಲ್ಲಿ ಹಲವಾರು ವ್ಯಕ್ತಿಗಳ ಖಾತೆಗಳಿಗೆ ಒಂದು ಬ್ಯಾಂಕ್ ಖಾತೆಯಿಂದ ಆರ್ ಟಿ ಜಿ ಎಸ್/ನೆಫ್ಟ್ ಮೂಲಕ ಹೆಚ್ಚು ಹಣ ವರ್ಗಾವಣೆ ಮಾಡುವದು, ಯಾವುದೇ ನಗದು ಠೇವಣಿ ಅಥವಾ 1 ಲಕ್ಷ ರೂ. ಗಿಂತ ಹೆಚ್ಚಿನ ನಗದು ಹಿಂಪಡೆಯುವಿಕೆ, ಮತದಾರರಿಗೆ ಹಣ ನೀಡಲು ಬಳಸಬಹುದಾದ ಯಾವುದೇ ಅನುಮಾನಾಸ್ಪದ ನಗದು ವಹಿವಾಟುಗಳ ಬಗ್ಗೆ ಚುನಾವಣಾ ವಿಭಾಗಕ್ಕೆ ಕೂಡಲೇ ಮಾಹಿತಿ ನೀಡುವಂತೆ ಸೂಚಿಸಿದರು.

ನಗದು ಠೇವಣಿ ಅಥವಾ ಹಿಂಪಡೆಯುವಿಕೆ ಮೊತ್ತವು 10 ಲಕ್ಷ ರೂ.ಗಳಿಗಿಂತ ಹೆಚ್ಚಿದ್ದರೆ, ಅಂತಹ ಮಾಹಿತಿಯನ್ನು ಆದಾಯ ತೆರಿಗೆ ಕಾನೂನುಗಳಡಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಆದಾಯ ತೆರಿಗೆ ಇಲಾಖೆಯ ನೋಡಲ್ ಅಧಿಕಾರಿಗೆ ರವಾನಿಸಲಾಗುವುದು ಎಂದರು.

ಜನಪ್ರತಿನಿಧಿಗಳ ಹೆಸರು/ಭಾವಚಿತ್ರಗಳನ್ನು ತೆಗೆಯಿರಿ: ಚುನಾವಣಾ ಆಯೋಗದ ನಿರ್ದೇಶನದಂತೆ ಖಾಸಗಿ ಆಸ್ತಿಗಳಲ್ಲಿ 72 ಗಂಟೆಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಗೂ ಭಾವಚಿತ್ರಗಳನ್ನು ಕಡ್ಡಾಯವಾಗಿ ತೆಗೆಯಬೇಕು. ಇಲ್ಲವಾಗಿದ್ದಲ್ಲಿ ಚುನಾವಣಾ ಆಯೋಗದಿಂದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಭದ್ರತಾ ಸಿಬ್ಬಂದಿಯೊಂದಿಗೆ ನಗದು ರವಾನಿಸಿ: ಯಾವುದೇ ಬ್ಯಾಂಕ್​​ಗಳಿಂದ ನಗದು ಅಥವಾ ಎಟಿಎಂಗಳಿಂದ ತೆಗೆಯುವ ನಗದನ್ನು ಭದ್ರತಾ ಸಿಬ್ಬಂದಿಯೊಂದಿಗೆ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು‌ ಚುನಾವಣಾ ಆಯೋಗದ ನಿಯಮಾನುಸಾರ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ರವಾನೆ ಮಾಡಬೇಕು. ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳದೆ ನಗದು ರವಾನೆ ಮಾಡಿ ಸೀಜ್ ಮಾಡಿಕೊಳ್ಳುವ ಹಾಗೆ ಮಾಡಿಕೊಳ್ಳಬೇಡಿ ಎಂದು ಸೂಚನೆ ನೀಡಿದರು.

ಈ ವೇಳೆ ಚುನಾವಣಾ ವಿಭಾಗದ ಸಹಾಯಕ ಆಯುಕ್ತ ರಾಮಚಂದ್ರ ನಾಯ್ಕ್, ಮುಖ್ಯ ಲೆಕ್ಕಾಧಿಕಾರಿ ಭೀನಾ, ವಿವಿಧ ಬ್ಯಾಂಕ್ ಗಳ ನೋಡಲ್ ಅಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂಓದಿ:5,8, 9 ಮತ್ತು 11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.