ETV Bharat / state

ಸಿಎಂ ವಿರುದ್ಧ ಎಸ್ಐಟಿ/ ಸ್ವತಂತ್ರ ಸಂಸ್ಥೆಯಿಂದ ತನಿಖೆ ಕೋರಿ ದೂರು: ತೀರ್ಪು ಕಾಯ್ದಿರಿಸಿದ ಕೋರ್ಟ್​ - Muda Case - MUDA CASE

ಮುಡಾ 'ಹಗರಣ' ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಸಿರುವ ದೂರಿನ ವಿಚಾರಣೆ ಪೂರ್ಣಗೊಳಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಕಾಯ್ದಿರಿಸಿತು.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (ETV Bharat)
author img

By ETV Bharat Karnataka Team

Published : Aug 9, 2024, 6:17 PM IST

Updated : Aug 9, 2024, 7:48 PM IST

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಮುಖ್ಯಮಂತ್ರಿ ಅವರ ಪತ್ನಿ ಬಿ.ಎಂ.ಪಾರ್ವತಿ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ದೂರಿನ ವಿಚಾರಣೆ ಪೂರ್ಣಗೊಳಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ.

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಖಾಸಗಿ ದೂರಿನಲ್ಲಿ ಮುಖ್ಯಮಂತ್ರಿ ಸಿದ್ದಾರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ ಮತ್ತು ಜೆ.ದೇವರಾಜು ಸೇರಿ ಮತ್ತಿತರನ್ನು ಆರೋಪಿಗಳನ್ನಾಗಿಸಲಾಗಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್, ತೀರ್ಪು ಕಾಯ್ದಿರಿಸಿ ಮುಂದಿನ ವಿಚಾರಣೆಯನ್ನು ಆಗಸ್ಟ್ 13ಕ್ಕೆ ಮುಂದೂಡಿದ್ದಾರೆ.

ದೂರುರಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಲಕ್ಷ್ಮೀ ಐಯ್ಯಂಗಾರ್​, ಮಾಲೀಕರೇ ಇಲ್ಲದ ಜಮೀನಿನನ್ನು ಡಿನೋಟಿಫಿಕೇಷನ್ ಮಾಡಲಾಗಿದೆ. ಇದೇ ಜಮೀನಿನಲ್ಲಿ ದೇವನೂರು ಬಡಾವಣೆ ರಚನೆಯಾಗಿದೆ. ಅದನ್ನು ಸಿದ್ದರಾಮಯ್ಯ ಪತ್ನಿಯ ಸಹೋದರ ಖರೀದಿಸಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಇದ್ದಂತಹ ಸಂದರ್ಭದಲ್ಲಿ ಬದಲಿ ನಿವೇಶನ ಹಂಚಿಕೆಗೆ ಬಳಸಿರುವ ಭೂಮಿಯನ್ನು ಸ್ವಾಧೀನದಿಂದ ಡಿನೋಟಿಫಿಕೇಷನ್ ಮಾಡಲಾಗಿದೆ. 2004ರಲ್ಲಿ ದೇವರಾಜು ಅವರಿಂದ ಜಮೀನು ಖರೀದಿಸಲಾಗಿದೆ. ಆಗಲೂ ಸಿದ್ದರಾಮಯ್ಯ ಉಪಮುಖ್ಯಮಂತ್ರಿಗಳಾಗಿದ್ದರು. ಖರೀದಿಗೆ ಹಣದ ಮೂಲದ ಬಗ್ಗೆ ಪ್ರಶ್ನೆಯೂ ಇದೆ. ದೇವನೂರು ಬಡಾವಣೆಯಲ್ಲಿ ಈಗಲೂ ಖಾಲಿ‌ ನಿವೇಶನಗಳಿವೆ. ಆದರೆ, ಆ ನಿವೇಶನದ ಬದಲಿಗೆ ಮೈಸೂರು ನಗರದಲ್ಲಿ ಹೆಚ್ಚು ಬೆಲೆ ಬಾಳುವ ವಿಜಯನಗರ ಬಡಾವಣೆಯಲ್ಲಿ ಬದಲಿ ನಿವೇಶನ ಪಡೆದುಕೊಳ್ಳಲಾಗಿದೆ ಎಂದರು.

2006ರಿಂದ 2010ರ ನಡುವೆ ಈ ಜಮೀನಿನಲ್ಲಿ ಬಡಾವಣೆ ರಚನೆಯಾಗಿತ್ತು. ಬಡಾವಣೆ ರಚನೆಯಾಗಿ ನಿವೇಶನಗಳನ್ನೂ ಹಂಚಲಾಗಿತ್ತು. 2004ಕ್ಕೂ ಮುನ್ನ ಬಡಾವಣೆಯಲ್ಲಿ ಮುಡಾ ಅಭಿವೃದ್ಧಿ ನಡೆಸಿತ್ತು. ಆದರೂ ಈ ಜಮೀನನ್ನು ಭೂ ಪರಿವರ್ತನೆ ಮಾಡಲಾಗಿದೆ. 2010ರಲ್ಲಿ ಮುಖ್ಯಮಂತ್ರಿ ಪತ್ನಿ ಹೆಸರಿಗೆ ಅವರ ಸಹೋದರನಿಂದ‌ ದಾನಪತ್ರ ಮಾಡಿಕೊಂಡಿದ್ದಾರೆ. ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವವರೆಗೂ ಮೌನವಾಗಿದ್ದರು. 2014 ರಲ್ಲಿ ಮುಖ್ಯಮಂತ್ರಿ ಆದ ಸಂದರ್ಭದಲ್ಲಿ ಬದಲಿ ನಿವೇಶನಗಳನ್ನು ಕೊಡುವಂತೆ ಮನವಿ ಮಾಡಿದ್ದರು ಎಂದು ನ್ಯಾಯಾಧೀಶರ ಮುಂದೆ ವಿವರಿಸಿದರು.

ಮಾರಾಟ ಮಾಡಿದ ದೇವರಾಜು ಜಮೀನು ಮಾಲೀಕರಲ್ಲ. ಅವರಿಂದ ಖರೀದಿಸಿದ ಮಲ್ಲಿಕಾರ್ಜುನಸ್ವಾಮಿ ಮಾಲೀಕರಾಗುವುದಿಲ್ಲ. ಹೀಗಾಗಿ ಮುಖ್ಯಮಂತ್ರಿಗಳ ಪತ್ನಿ ಪಾರ್ವತಿ ಬಿ.ಎಂ ಕೂಡಾ ಮಾಲೀಕರಾಗುವುದಿಲ್ಲ. ಆದರೂ ಜಮೀನಿಗೆ ಬದಲಿ ನಿವೇಶನ‌ ಕೇಳಿದ್ದಾರೆ. ಕಾನೂನು ಪ್ರಕಾರ ಮುಖ್ಯಮಂತ್ರಿ ಪತ್ನಿಗೆ 14 ನಿವೇಶನದ ಹಕ್ಕು ಇರಲಿಲ್ಲ. ಹಕ್ಕಿದ್ದಿದ್ದರೂ ಗರಿಷ್ಟ 4,800 ಚದರಡಿ ಜಾಗವನ್ನು ಮಾತ್ರ ಪಡೆಯಬಹುದಿತ್ತು. ಆದರೆ 14 ನಿವೇಶನ ಪಡೆದಿರುವುದು ಕಾನೂನು ಬಾಹಿರವಾಗಿದೆ. ಈ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ಸ್ವಾಧೀನವಾದ ಜಮೀನಿನಲ್ಲಿ ಮಾತ್ರ 4,800 ಅಡಿ ನಿವೇಶನ ಪಡೆಯಬಹುದು. ಆದರೆ, ದುಬಾರಿ ಮೌಲ್ಯದ ಬಡಾವಣೆಯಲ್ಲಿ 14 ನಿವೇಶನ ಹಂಚಲಾಗಿದೆ ಎಂದು ನ್ಯಾಯಾಧೀಶರಿಗೆ ವಿವರಿಸಿದರು.

ಈ ವೇಳೆ ಖಾಸಗಿ ದೂರು ಸಲ್ಲಿಕೆಗೂ ಮುನ್ನ ಪೂರ್ವಾನುಮತಿ ಬೇಕಲ್ಲವೇ ಎಂದು ದೂರುದಾರರ ಪರ ವಕೀಲರಿಗೆ ನ್ಯಾಯಾಧೀಶರು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ, ಕೋರ್ಟ್ ತನಿಖೆಗೆ ಅದೇಶ ನೀಡಲು ಪೂರ್ವಾನುಮತಿ ಬೇಕಿಲ್ಲ. ಕೋರ್ಟ್ ಅಪರಾಧವನ್ನು ಪರಿಗಣಿಸುವ ಸಂದರ್ಭದಲ್ಲಿ ಮಾತ್ರ ಪೂರ್ವಾನುಮತಿ ಪಡೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು. ವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆ ಮುಂದೂಡಿದರು.

ಇದನ್ನೂ ಓದಿ: ಈ ಬಂಡೆ ಸಿದ್ದರಾಮಯ್ಯ ಜೊತೆಗಿದೆ; 10 ತಿಂಗಳಲ್ಲ, 10 ವರ್ಷ ನಮ್ಮ ಸರ್ಕಾರವನ್ನು ಮುಟ್ಟಲಾಗದು: ಡಿಕೆಶಿ - D K Shivakumar

Last Updated : Aug 9, 2024, 7:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.