ETV Bharat / state

ಅಂಗನವಾಡಿ ಕಾರ್ಯಕರ್ತೆಯರಿಗೆ ಬಂಪರ್​​: ಮಹಿಳೆಯರು, ಮಕ್ಕಳ ಅಭಿವೃದ್ಧಿಗೂ ಬಜೆಟ್​ನಲ್ಲಿ ವಿಶೇಷ ಆದ್ಯತೆ

15ನೇ 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಮಹಿಳೆಯರು ಹಾಗೂ ಮಕ್ಕಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದಾರೆ.

Etv Bharat
Etv Bharat
author img

By ETV Bharat Karnataka Team

Published : Feb 16, 2024, 12:30 PM IST

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಪ್ರಸಕ್ತ ಸಾಲಿನ ಬಜೆಟ್​ನಲ್ಲಿ ವಿಶೇಷ ಆದ್ಯತೆ ನೀಡಿದ್ದಾರೆ. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

15ನೇ 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಅವರು, ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು. ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Cerebral Palsy, Muscular Dystrophy, Parkinsons & Multiple Sclerosis ಖಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆಗಾಗಿ ಪ್ರತಿ ತಿಂಗಳು 1000 ರೂ. ಪ್ರೋತ್ಸಾಹ ಧನ ನೀಡಲಾಗುವುದು. ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು ಎಂದು ತಮ್ಮ ಬಜೆಟ್​ ಭಾಷಣದಲ್ಲಿ ವಿವರಿಸಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತರ ಮಾಸಾಶನ 1,200 ರೂ. ಹೆಚ್ಚಳ: ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಿಸಲಾಗುವುದು. ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳ ಘೋಷಣೆ ಮಾಡಲಾಗಿದೆ. ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗುವುದು ಎಂದು ಹಣಕಾಸು ಸಚಿವರು ಹೇಳಿದ್ದಾರೆ.

ನಿವೇಶನ ಹೊಂದಿರುವ ವಸತಿರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ ಪುನರ್ವಸತಿ ಕಲ್ಪಿಸಲು ಮರು ಸಮೀಕ್ಷೆ ನಡೆಸಲಾಗುವುದು. 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಅವರು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇದನ್ನೂ ಓದಿ: ಕೃಷಿ ಸಂಬಂಧಿತ ಎಲ್ಲ ಇಲಾಖೆಗಳ ಸಮನ್ವಯಕ್ಕೆ 'ಕೃಷಿ ಅಭಿವೃದ್ಧಿ ಪ್ರಾಧಿಕಾರ' ರಚಿಸಿದ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.